ನಿಜಾಮುದ್ದೀನ್ ಜಮಾತ್‌ಗೆ ಹೋಗಿದ್ದವರ ಮೇಲೆ ನಿಗಾ
ಗದಗ ಜಿಲ್ಲೆ ಕೊವಿಡ್-19 ಪರಿಸ್ಥಿತಿ ಅವಲೋಕನ l ಸಚಿವ ಸಿ.ಸಿ. ಪಾಟೀಲ್‌ರಿಂದ ವಿಡಿಯೋ ಕಾನ್ಫರೆನ್ಸ್
ಗದಗ: ವಿಶ್ವವ್ಯಾಪಿ ಕೊವಿಡ್-19 ವೈರಾಣು ಸೋಂಕು ತಡೆಗೆ ದೇಶಾದ್ಯಂತ ಪ್ರಧಾನಿಗಳು ಲಾಕ್‌ಡೌನ್ ಘೊಷಿಸಿರುವ ಪರಿಸ್ಥಿತಿಯಲ್ಲಿ ಗದಗ ಜಿಲ್ಲೆಯ ಜಿಲ್ಲಾ ಉಸ್ತುವಾರಿ, ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ ವಿಡಿಯೋ ತಂತ್ರಜ್ಞಾನ ಬಳಸಿ ಜಿಲ್ಲೆಯ ಕೊವಿಡ್-19 ನಿಯಂತ್ರಣ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಗದಗ ಜಿಲ್ಲೆ ಯ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್., ಜಿ.ಪಂ. ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಡಾ.ಆನಂದ ಜೊತೆ ವಿಡಿಯೋಕಾನ್ಫೆರೆನ್ಸ್ ನಡೆಸಿ ದಿನದ ಬೆಳವಣಿಗೆ ಕುರಿತು ಮಾಹಿತಿ ಪಡೆದು ಅಗತ್ಯದ ಸಲಹೆ ನಿರ್ದೇಶನ ನೀಡಿದರು.
ಇತ್ತೀಚಿನ ಬೆಳವಣಿಗೆಯಾದ ದೆಹಲಿಯ ನಿಜಾಮುದ್ದೀನ್ ಜಮಾತ್ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾದವರನ್ನು ಪತ್ತೆ ಹಚ್ಚಿ ಅವರ ಸ್ವಂತ ಆರೋಗ್ಯ, ಅವರ ಕುಟುಂಬದ ಮತ್ತು ಸಮಾಜದ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಅವರನ್ನು ಕಡ್ಡಾಯವಾಗಿ ಆರೋಗ್ಯ ಪರೀಕ್ಷೆ, ನಿರ್ಬಂಧಿತ ನಿಗಾದಲ್ಲಿ ಕನಿಷ್ಠ ನಿಗಾ ಅವಧಿ ನಂತರ ಎರಡು ಬಾರಿ ಲ್ಯಾಬ್ ಪರೀಕ್ಷೆಗೆ ಒಳಪಡಿಸಲು ಆರೋಗ್ಯವಾಗಿರುವದು ಖಚಿತವಾದ ನಂತರವೇ ಅವರನ್ನು ನಿರ್ಬಂಧಿತ ನಿಗಾದಿಂದ ಬಿಡುಗಡೆ ಮಾಡಬೇಕು ಎಂದು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಜಿಲ್ಲೆಯಲ್ಲಿ ಈ ವರೆಗೆ 208 ಜನ ನಿಗಾಕ್ಕೆ ಒಳಗಾಗಿದ್ದು ದೆಹಲಿ ಪ್ರಕರಣದ 9 ಜನರು ಸೇರಿದಂತೆ ಒಟ್ಟು ಲ್ಯಾಲ್‌ಗೆ ಕಳಿಸಿದ 64ರ ಪೈಕಿ 56 ಜನರ ವರದಿ -ve ( ನಕಾರಾತ್ಮಕ) ಆಗಿದೆ. ಇನ್ನು 8 ಪ್ರಕರಣದ ಲ್ಯಾಬ ವರದಿ ಬಾಕಿ ಇದೆ ಎಂದು ಸಚಿವರಿಗೆ ಮಾಹಿತಿ ನೀಡಿದರು.
ಜಿ.ಪಂ. ಸಿಇಒ ಸೋಂಕಿತ ವ್ಯಕ್ತಿಯಲ್ಲಿ ಕೊವಿಡ-19 ವೈರಾಣು ಪ್ರಕಟವಾಗಲು ನಿಗಧಿತ 14 ದಿನಗಳ ಅವಧಿ ಇದ್ದು ನಿಗಾದಲ್ಲಿ ಇದ್ದು ನಂತರ ಎರಡು ಬಾರಿ ಅವರನ್ನು ಪರೀಕ್ಷೆಗೆ ಒಳಪಡಿಸಿ ಸೊಂಕು ಇಲ್ಲವೆಂಬುದನ್ನು ಖಚಿತ ಪಡೆಸಿಕೊಂಡು ನಿರ್ಬಂಧದಿಂದ ಬಿಡುಗಡೆ ಮಾಡಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಂಬಂಧಿತ ಇಲಾಖೆಗಳ ಹಾಗೂ ಸಾರ್ವಜನಿಕರ ಸಹಕಾರದಿಂದ ದೆಹಲಿ ಪ್ರಕರಣ ಸೇರಿದಂತೆ ಬಾಧಿತ ಪ್ರದೇಶಗಳಿಂದ ಆಗಮಿಸಿದ ವ್ಯಕ್ತಿಗಳ ಪತ್ತೆ ಕಾರ್ಯ ನಡೆಸಲಾಗುತ್ತಿದೆ. ಜಿಲ್ಲೆಯ ವ್ಯಾಪ್ತಿಯಲ್ಲಿ ಅದರಲ್ಲೂ ನಗರ ಪ್ರದೇಶಗಳಲ್ಲಿ ಪ್ರತಿಬಂಧಕಾಜ್ಞೆ ಪಾಲನೆ ಜೊತೆಗೆ ಸಾಮಾಜಿಕ ಅಂತರ ಕಾಪಾಡಲು ಸರ್ವ ರೀತಿಯಿಂದ ಪ್ರಯತ್ನಿಸಲಾಗುತ್ತಿದೆ ಎಂದರು.
ಒಟ್ಟಾರೆಯಾಗಿ ಜಿಲ್ಲೆಯ ಸಮಸ್ತ ಜನತೆಯ ಆರೋಗ್ಯ ರಕ್ಷಣೆಯ ಈ ವಿಶೇಷ ಸಂದರ್ಭದಲ್ಲಿ ಜಿಲ್ಲಾಡಳಿತ ಅಗತ್ಯದ ಕ್ರಮಗಳನ್ನು ಯಾವ ದಾಕ್ಷಿಣ್ಯವಿಲ್ಲದೆ ತೆಗೆದುಕೊಳ್ಳಬೇಕು. ದಿನದ ಬೆಳವಣಿಗೆ ಕುರಿತು ತಮಗೆ ಮಾಹಿತಿ ನೀಡಬೇಕು ಎಂದು ಸಚಿವ ಸಿ.ಸಿ.ಪಾಟೀಲ ಸೂಚನೆ ನೀಡಿದರು.
Related
You Might Also Like
ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ (77) ಇಂದು ಬಾರದ ಲೋಕಕ್ಕೆ ಪಯಾಣ ಬೆಳೆಸಿದ್ದಾರೆ. ಇತ್ತೀಚೆಗಷ್ಟೇ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಹಾಗಾಗಿ ಕಳೆದ 4...
ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ
ಬೆಳಗಾವಿ: ಕಾರಿಗೆ ನಾಯಿಯೊಂದು ಅಡ್ಡ ಬಂದ ಪರಿಣಾಮ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ...
BMTC ಕಂಡಕ್ಟರ್: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ – ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನುತ್ತಿರುವ ಕಿರಾತಕ
ಬೆಂಗಳೂರು: ಎಂ.ಎಸ್.ಪಾಳ್ಯದಿಂದ-ಯಲಹಂಕ ಮಾರ್ಗದಲ್ಲಿ ಟಿಕೆಟ್ ಕೊಡುತ್ತಲೇ ಮುಗ್ದ ಯುವತಿಯನ್ನು ಕಂಡಕ್ಟರ್ ಪಟಾಯಿಸಿದ್ದು, ಮದುವೆಯಾದ ಮೂರೇ ತಿಂಗಳಿಗೆ ಾತನ ಅಸಲಿ ಮುಖ ಬಯಲಾಗಿರುವ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ....
KSRTC: ಪ್ರಯಾಣಿಕರು ಕಳೆದುಕೊಂಡಿದ ಬೆಲೆ ಬಾಳುವ ಬ್ಯಾಗ್ ಮರಳಿಸಿ ಪ್ರಾಮಾಣಿಕತೆ ಮೆರೆದ ತುರುವೇಕೆರೆ ಘಟಕದ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲನಾ ಸಿಬ್ಬಂದಿ, ಅಂದರೆ ಚಾಲಕ ನಿರ್ವಾಹಕರು ಪ್ರಾಮಾಣಿಕತೆ ಮೆರೆಯು ಮೂಲಕ ಇತರರಿಗೆ ಮಾದರಿಯಾಗುತ್ತಿರುವುದು ನಿರಂತರವಾಗಿದೆ. ಇದು ಒಂದು ರೀತಿ...
ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬಂಧನ
ಮೈಸೂರು: ರೈತ ವಿರೋಧಿ ಕೇಂದ್ರ ಸರ್ಕಾರದ ವರ್ತನೆ ಖಂಡಿಸಿ ದಲೈವಾಲ ಹೋರಾಟವನ್ನು ಬೆಂಬಲಿಸಿ ಪ್ರಧಾನ ಮಂತ್ರಿ ಹಾಗೂ ಕೃಷಿ ಮಂತ್ರಿಗಳ ಪ್ರತಿಕೃತಿ ದಹನ ಮಾಡಲು ಮೆರವಣಿಗೆಯಲ್ಲಿ ಹೋಗುತ್ತಿದ್ದಾಗ...
ಹೈಪರ್‌ಟೆನ್ಷನ್: ಭಾರತದ ಯುವಜನತೆಗೆ ಅಡಗಿದ ಅಪಾಯ: ಡಾ.ಸಾಯಿಶಂಕರ್
ಬೆಂಗಳೂರು: ಯುವ ದಿನ, ಜನವರಿ 12 ರಂದು, ಸ್ವಾಮಿ ವಿವೇಕಾನಂದರ ಪ್ರೇರಣಾದಾಯಕ ಜೀವನ ಮತ್ತು ಉಪದೇಶಗಳನ್ನು ಆಚರಿಸುತ್ತದೆ. ಅವರ ಉಪದೇಶಗಳು ಪೀಳಿಗೆಗಳನ್ನು ಪ್ರೇರೇಪಿಸುತ್ತಿವೆ ಎಂದು ಏಮ್ಸ್ ಮತ್ತು...
ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ
ಹುಬ್ಬಳ್ಳಿ: ಚುನಾವಣಾ ಪೂರ್ವ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಯಂತೆ ಸಾರಿಗೆ ನೌಕರರಿಗೂ ಸರ್ಕಾರಿ ನೌಕರರಂತೆ ಸರಿಸಮಾನ ವೇತನ (7 ನೇ ವೇತನ ಆಯೋಗ ಮಾದರಿಯಲ್ಲಿ) ನೀಡುವಂತೆ...
“ಕೆಎಸ್‌ಆರ್‌ಟಿಸಿ ಆರೋಗ್ಯ” ಯೋಜನೆ ಕುರಿತು ನೌಕರರಿಗೆ ಪತ್ರ ಬರೆದು ಖುಷಿ ಹಂಚಿಕೊಂಡ ಸಂಸ್ಥೆ ಎಂಡಿ ಅನ್ಬುಕುಮಾರ್
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬ ನೌಕರರು ಉತ್ತಮ ಆರೋಗ್ಯದಿಂದ ಇರಬೇಕು ಎಂಬ ಸದುದ್ದೇಶದಿಂದ "ಕೆಎಸ್‌ಆರ್‌ಟಿಸಿ ಆರೋಗ್ಯ" ಯೋಜನೆಯನ್ನು ರೂಪಿಸಿದ್ದು, ಮುಖ್ಯಮಂತ್ರಿಗಳು...
BMTC: ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯಕ್ಕೆ ನೌಕರರಿಂದ ದಾಖಲೆ ಸಂಗ್ರಹಿಸಲು ಮೂವರು ಅಧಿಕಾರಿಗಳ ನಿಯೋಜನೆ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿಗಳು/ನೌಕರರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ನೀಡುವುದಕ್ಕೆ ಬೇಕಾದ ದಾಖಲೆಗಳನ್ನು ಸಂಗ್ರಹಿಸಲು ಮೂವರು ಅಧಿಕಾರಿಗಳನ್ನೊಳಗಂಡ ಮೇಲ್ವಿಚಾರಣೆ ತಂಡಗಳನ್ನು ರಚಿಸಿ ವ್ಯವಸ್ಥಾಪಕ...
ಮುಂದಿನ ಪೀಳಿಗೆ ಉಳಿವಿಗಾಗಿ ಸಾವಯವ ಕೃಷಿ ಅವಶ್ಯಕ: ಸಚಿವ ಮುನಿಯಪ್ಪ
ಜಿಲ್ಲಾ ಮಟ್ಟದ ಸಾವಯವ ಮತ್ತು ಸಿರಿಧಾನ್ಯಗಳ ಮೇಳ-2025 ಸಿರಿಧಾನ್ಯಗಳ ಸೇವನೆಯಿಂದ ಆರೋಗ್ಯ ವೃದ್ಧಿ ಬೆಂಗಳೂರು: ಮುಂದಿನ ಪೀಳಿಗೆಗೆ ಗುಣಮಟ್ಟದ ಆಹಾರ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ. ಹಾಗಾಗಿ...
ಲೋಕ ಸೇವಾ ಆಯೋಗಗಳು ಕಾರ್ಯಾಂಗಕ್ಕೆ ಅಭೂತಪೂರ್ವ ಕೊಡುಗೆ ನೀಡುವ ಪ್ರಜಾ ಪ್ರಭುತ್ವದ ಸ್ತಂಭಗಳು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಲೋಕ ಸೇವಾ ಆಯೋಗಗಳು ಅರ್ಹತೆ ಮತ್ತು ನ್ಯಾಯಪರತೆಯನ್ನು ಎತ್ತಿಹಿಡಿದು, ಕಾರ್ಯಾಂಗಕ್ಕೆ ಅಭೂತಪೂರ್ವ ಕೊಡುಗೆಯನ್ನು ನೀಡುವ ಪ್ರಜಾಪ್ರಭುತ್ವದ ಸ್ತಂಭಗಳಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ರಾಜ್ಯ ಲೋಕಸೇವಾ...