NEWSಸಂಸ್ಕೃತಿ

ನಿತ್ಯೋತ್ಸವ ಕವಿ ಇನ್ನು ನೆನಪು ಮಾತ್ರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಿತ್ಯೋತ್ಸವ ಕವಿ ನಿಸಾರ್ ಅಹಮದ್ (84) ಪದ್ಮನಾಭಗರದಲ್ಲಿರುವ ಸ್ವಗೃಹದಲ್ಲಿ ಭಾನುವಾರ ನಿಧನರಾದರು. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರನ್ನು  ಆಸ್ಪತ್ರೆಗೂ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ಅಮೆರಿಕದಲ್ಲಿದ್ದ ಅವರ ಪುತ್ರ  ಇತ್ತೀಚೆಗಷ್ಟೇ ಮೃತಪಟ್ಟಿದ್ದರು.  ನಿಸಾರ್ ಅಹಮದ್ ಅವರು 1936ರ ಫೆಬ್ರವರಿ 5ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಜನಿಸಿದರು. ಅವರ ತಂದೆ ಕೆ.ಎಸ್. ಹೈದರ್ ಮತ್ತು ತಾಯಿ ಷಾನ್ ವಾಜ್ ಬೇಗಂ. ಭೂವಿಜ್ಞಾನ ವಿಭಾಗದಲ್ಲಿ ಎಂ.ಎಸ್ಸಿ ಪದವಿಯನ್ನು ಪಡೆದಿದ್ದ ನಿಸಾರ್ ಅವರು ಬೆಂಗಳೂರು, ಶಿವಮೊಗ್ಗ, ಗುಲ್ಬರ್ಗಾ ಸೇರಿದಂತೆ ನಾಡಿನ ಹಲವು ಕಡೆಗಳಲ್ಲಿ ಪ್ರಾದ್ಯಾಪಕಾರಾಗಿ ಸೇವೆಯನ್ನು ಸಲ್ಲಿಸಿದ್ದರು.

ತಮ್ಮ ವಿದ್ಯಾರ್ಥಿ ದೆಸೆಯಲ್ಲೇ ಎಂ.ಸಿ. ಸೀತಾರಾಮಯ್ಯ, ಜಿ.ಪಿ. ರಾಜರತ್ನಂ, ಎಲ್. ಗುಂಡಪ್ಪ ಮೊದಲಾದ ಗುರುಗಳ ಪ್ರಭಾವಕ್ಕೊಳಗಾಗಿದ್ದ ನಿಸಾರ್ ಅವರಲ್ಲಿ ಸಹಜವಾಗಿಯೇ ಸಾಹಿತ್ಯಾಸಕ್ತಿ ಮೊಳಕೆಯೊಡೆಯತೊಡಗಿತ್ತು.

ನಿಸಾರ್ ಅಹಮ್ಮದ್ ಅವರು ಕರ್ನಾಟಕದ ಜನಸಾಮಾನ್ಯರಿಗೂ ಪರಿಚಿತರಾದದ್ದು ‘ನಿತ್ಯೋತ್ಸವ’ ಕವನ ಸಂಕಲನದ ಮೂಲಕ. ಅದರಲ್ಲಿನ ಜನಪ್ರಿಯ ಗೀತೆಯಾದ ‘ಜೋಗದ ಸಿರಿ ಬೆಳಕಿನಲ್ಲಿ, ತುಂಗೆಯ ತೆನೆ ಬಳುಕಿನಲ್ಲಿ..’ ಕವನದ ಮೂಲಕ. ಇದು ಕರುನಾಡಿನಾದ್ಯಂತ ಇಂದೂ ಸಹ ಮನೆಮಾತಾಗಿದೆ.

ಕವನಸಂಕಲನಗಳು
ಸುಮಹೂರ್ತ, ಸಂಜೆ ಐದರ ಮಳೆ, ಮನಸು ಗಾಂಧಿ ಬಜಾರು, ನೆನೆದವರ ಮನದಲ್ಲಿ, ನಾನೆಂಬ ಪರಕೀಯ, ಆಯ್ದ ಕವಿತೆಗಳು, ಸ್ವಯಂ ಸೇವೆಯ ಗಿಳಿಗಳು, ಅನಾಮಿಕ ಆಂಗ್ಲರು, ಬರಿರಂತರ, ಸಮಗ್ರ ಕವಿತೆಗಳು, ನವೋಲ್ಲಾಸ, ಆಕಾಶಕ್ಕೆ ಸರಹದ್ದುಗಳಿಲ್ಲ, ಅರವತ್ತೈದರ ಐಸಿರಿ, ಸಮಗ್ರ ಭಾವಗೀತೆಗಳು, ಪ್ರಾತಿನಿಧಿಕ ಕವನಗಳು, ನಿತ್ಯೋತ್ಸವ ಇವರ ಪ್ರಮುಖ ಕವನಸಂಕಲನಗಳು.

ಗದ್ಯ ಸಾಹಿತ್ಯ
‘ಅಚ್ಚುಮೆಚ್ಚು’, ‘ಇದು ಬರಿ ಬೆಡಗಲ್ಲೊ ಅಣ್ಣ’ ಷೇಕ್ಸ್ ಪಿಯರ್ನ‌ನ ಒಥೆಲ್ಲೊದ ಕನ್ನಡಾನುವಾದ, ‘ಎ ಮಿಡ್ ಸಮ್ಮರ್ ನೈಟ್ಸ್ ಡ್ರೀಮ್’ ಕೃತಿಯ ಕನ್ನಡಾನುವಾದ. ಅಮ್ಮ ಆಚಾರ ಮತ್ತು ನಾನು- ಇವುಗಳು ನಿಸಾರ್ ಅಹಮದ್ ಅವರ ಗದ್ಯ ಕೃತಿಗಳಾಗಿವೆ.

ಪ್ರಶಸ್ತಿ ಪುರಸ್ಕಾರಗಳು!
* ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
* ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
* ಗೊರೂರು ಪ್ರಶಸ್ತಿ
* ಅನಕೃ ಪ್ರಶಸ್ತಿ
* ಕೆಂಪೇಗೌಡ ಪ್ರಶಸ್ತಿ
* ಪಂಪ ಪ್ರಶಸ್ತಿ
* 1981ರ ರಾಜ್ಯೋತ್ಸವ ಪ್ರಶಸ್ತಿ
* 2003ರ ನಾಡೋಜ ಪ್ರಶಸ್ತಿ
* 2006ರ ಅರಸು ಪ್ರಶಸ್ತಿ
* 2006ರ ಮಾಸ್ತಿ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ