NEWSನಮ್ಮಜಿಲ್ಲೆ

ನಿಮ್ಮ ಮನೆ ಬಳಿಗೆ ಅಗತ್ಯ ವಸ್ತುಗಳ ಡೆಲಿವರಿ

ಸಹಾಯ ವಾಣಿ 080-61914960ಗೆ ಚಾಲನೆ ನೀಡಿದ ಸಚಿವ ಆರ್‌. ಅಶೋಕ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೋವಿಡ್-19 ಸಂಬಂಧ ಅಗತ್ಯ ವಸ್ತುಗಳ ಹೋಮ್ ಡೆಲಿವರಿ ಸಹಾಯವಾಣಿಗೆ   ಮೇಯರ್‌ ಗೌತಮ್‌ ಕುಮಾರ್‌, ಸಚಿವ ಆರ್.ಅಶೋಕ್, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಪಾಲಿಕೆ ಕೇಂದ್ರ ಕಚೇರಿ ಮಹಾಪೌರರ ಕೊಠಡಿಯಲ್ಲಿ ಚಾಲನೆ ನೀಡಿದರು.

ಕೋವಿಡ್-19 ಸಂಬಂಧ ಅಗತ್ಯ ವಸ್ತುಗಳನ್ನು ಮನೆ ಮೆನೆಗೆ ತಲುಪಿಸುವ ಉದ್ದೇಶದಿಂದ ಈಗಾಗಲೇ ಪ್ರಾಯೋಗಿಕವಾಗಿ ಕತ್ರಿಗುಪ್ಪೆ ವಾರ್ಡ್ ನಲ್ಲಿ ‘ಹೋಮ್ ಡೆಲಿವರಿ’ ಸಹಾಯವಾಣಿಯನ್ನು ಆರಂಭಿಸಲಾಗಿದ್ದು, ಇದೀಗ ಬೆಂಗಳೂರು ದಕ್ಷಿಣ ಲೊಕಸಭಾ ಕ್ಷೇತ್ರ ವ್ಯಾಪ್ತಿಯ ಬಸವನಗುಡಿ, ಜಯನಗರ, ಪದ್ಮನಾಭನಗರ ಹಾಗೂ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಗಳಿಗೂ ಈ ಸೇವೆಯನ್ನು ವಿಸ್ತಿರಿಸಲಾಗುತ್ತಿದೆ ಎಂದು ಸಚಿವ ಆರ್‌. ಅಶೋಕ್‌  ತಿಳಿಸಿದರು.

ಅಗತ್ಯ ದಿನಬಳಕೆಯ ಸಾಮಗ್ರಿಗಳು, ದಿನಸಿ, ತರಕಾರಿ, ಔಷಧ ಸಾಮಗ್ರಿಗಳನ್ನು ನೇರವಾಗಿ ಮನೆ ಬಾಗಿಲಿಗೆ ತಲುಪಿಸುವ ಹೋಮ್ ಡೆಲಿವರಿ ಸೇವೆ ಇದಾಗಿದೆ. ಸಹಾಯವಾಣಿ ಸಂಖ್ಯೆ 080-61914960ಗೆ ಕರೆ ಮಾಡಿ ಅಗತ್ಯ ವಸ್ತುಗಳನ್ನು ಪಡೆಯಬಹುದಾಗಿದೆ ಎಂದು ಮಾಹಿತಿ ನೀಡಿದರು.

ಈ ಭಾಗದಲ್ಲಿ 7.5 ಲಕ್ಷ ಜನಸಂಖ್ಯೆ, 2.5 ಲಕ್ಷ ಮನೆಗಳು ಹಾಗೂ ದಿನಸಿ ಅಂಗಡಿ, ತರಕಾರಿ ಮಳಿಗೆ, ಔಷಧಿ ಮಳಿಗೆ, ಮಾಂಸದಗಡಿಗಳು ಸೇರಿದಂತೆ ಒಟ್ಟು 1926 ಮಳಿಗೆಗಳನ್ನು ಮ್ಯಾಪಿಂಗ್ ಮಾಡಲಾಗಿದ್ದು, ಉಚಿತವಾಗಿ ಡಿಲಿವರಿ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.

ಪ್ರಸ್ತುತ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಮಾತ್ರ ಈ ಸೇವೆ ಇರಲಿದ್ದು, ಇದು ಯಶಸ್ವಿಯಾದರೆ ಮುಂದಿನ ದಿನಗಳಲ್ಲಿ ನಗರಾದ್ಯಂತ ಇದನ್ನು ವಿಸ್ತರಿಸಲಾಗುವುದು ಎಂದು ತಿಳಿಸಿದರು.

ಈ ವೇಳೆ ಉಪಮಹಾಪೌರ ರಾಮಮೋಹನ ರಾಜು, ದಕ್ಷಿಣ ವಲಯ ಜಂಟಿ ಆಯುಕ್ತ ವೀರಭದ್ರ ಸ್ವಾಮಿ, ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಕಟೋಚ್ ಸೆಪಟ್, ಮುಖ್ಯ ಆರೋಗ್ಯಾಧಿಕಾರಿ ಡಾ. ವಿಜೇಂದ್ರ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ