NEWSನಮ್ಮಜಿಲ್ಲೆ

ನಿರಾಶ್ರಿತರಿಗೆ ಅನ್ನ ನೀಡಿದ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಪದಾಧಿಕಾರಿಗಳು

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮೈಸೂರು ಜಿಲ್ಲಾ ಶಾಖೆ ವತಿಯಿಂದ ಇಸ್ಕಾನ್ ಅಕ್ಷಯ ಪಾತ್ರೆಯ ನೆರವಿನೊಂದಿಗೆ ನಗರದ ವೃದ್ಧಾಶ್ರಮ ಹಾಗೂ ನಿರ್ಗತಿಕ ಕೇಂದ್ರಗಳಲ್ಲಿ ವಾಸಿಸುವ 1,200 ಜನರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಶುಕ್ರವಾರ ಕಚೇರಿಯಲ್ಲಿ ಸಾಂಕೇತಿಕವಾಗಿ ದಾರಿಹೋಕರಿಗೆ ಊಟ ಬಡಿಸುವ ಮೂಲಕ ಚಾಲನೆ ನೀಡಲಾಯಿತು.

ನಿಕಟಪೂರ್ವ ರಾಜ್ಯಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ಎಚ್.ಕೆ.ರಾಮು ಮಾತನಾಡಿ, ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಜಾರಿಮಾಡಿರುವ ಲಾಕ್‍ಡೌನ್ ಕ್ರಮವನ್ನು ನಾವು ಪಾಲಿಸಬೇಕಿದೆ. ಈ ಹಿನ್ನೆಲೆಯಲ್ಲಿ ನಿರಾಶ್ರಿತರು ಹಾಗೂ ಗಂಜಿಕೇಂದ್ರಗಳಲ್ಲಿ ವಾಸಿಸುತ್ತಿರುವ ಜನರಿಗೆ ಸಂಘದ ವತಿಯಿಂದ ಊಟದ ವ್ಯವಸ್ಥೆ ಮಾಡಲಾಗಿದೆ ಎಂದರು.

ಕೆ.ಆರ್.ಅಸ್ಪತ್ರೆಯ ರೋಗಿಗಳು ಹಾಗೂ ವೈದ್ಯಕೀಯ ಸಿಬ್ಬಂದಿಗಳಿಗೆ ಊಟದ ವ್ಯವಸ್ಥೆಗೆ  ಅನುಕೂಲವಾಗುವಂತೆ ಸಂಘದ ವತಿಯಿಂದ ದಿನಸಿ ಪದಾರ್ಥಗಳನ್ನು ಆಸ್ಪತ್ರೆಯ ನಿರ್ದೇಶಕ ಡಾ.ನಂಜರಾಜು ಅವರಿಗೆ ಹಸ್ತಾಂತರಿಸಲಾಗಿದೆ ಎಂದು ಹೇಳಿದರು.

ಕೊರೊನಾ ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಮನೆಯಲ್ಲಿಯೇ ಇದ್ದು ಸಹಕರಿಸಬೇಕು. ಕೊರೊನಾ ವಿರುದ್ಧ ಹೋರಾಡಲು ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳು, ಪೆÇಲೀಸರು ಅವಿರತವಾಗಿ ಶ್ರಮಿಸುತ್ತಿದ್ದಾರೆ. ಆದ್ದರಿಂದ ಸರ್ಕಾರ ಆದೇಶಿಸುವ ಸೂಚನೆಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದರು.

ಕೆ.ಆರ್.ಆಸ್ಪತ್ರೆಯ ಸೂಪಡೆಂಟ್ ಡಾ.ನಂಜುಂಡಸ್ವಾಮಿ, ಡಾ.ಶಶಿ, ಸಂಘದ ಗೌರವ ಅಧ್ಯಕ್ಷ ಬಾಲಕೃಷ್ಣ, ಉಪಾಧ್ಯಕ್ಷ ಉದಯ್ ಕುಮಾರ್, ಆನಂದ್, ಕಾರ್ಯದರ್ಶಿ ಜೆ.ಗೋವಿಂದರಾಜ್, ಉಮೇಶ್, ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ