NEWSನಮ್ಮರಾಜ್ಯ

ನೈರುತ್ಯ ರೈಲ್ವೆಯಿಂದ 312 ಐಸೋಲೇಷನ್ ಬೋಗಿಗಳ ನಿರ್ಮಾಣ

 ಸುದ್ದಿಗೋಷ್ಠಿಯಲ್ಲಿ ರಾಜ್ಯ ರೈಲ್ವೇ ಸಚಿವ ಸುರೇಶ್ ಅಂಗಡಿ ಮಾಹಿತಿ

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ರೈಲ್ವೆ ಇಲಾಖೆಯ 10 ದಿನದಲ್ಲಿ 80 ಸಾವಿರ ಬೆಡ್‍ಗಳ ಐಸೋಲೇಷನ್ ಬೋಗಿಗಳನ್ನು ನಿರ್ಮಾಣ ಮಾಡಿದೆ. ಹುಬ್ಬಳ್ಳಿ ನೈರುತ್ಯ ರೈಲ್ವೆ ವತಿಯಿಂದ 312 ಐಸೋಲೇಷನ್ ಬೋಗಿಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಹೇಳಿದರು.

ಹುಬ್ಬಳ್ಳಿಯ ರೈಲ್ವೆ ವರ್ಕಶಾಪ್ ನಲ್ಲಿ ನಿರ್ಮಿಸಲಾಗಿರುವ ಐಸೋಲೇಷನ್ ಬೋಗಿಗಳನ್ನು ವೀಕ್ಷಿಸಿ ನಂತರ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸಿನಂತೆ ದೇಶಾದ್ಯಂತ 20000 ಸಾವಿರ ಐಸೋಲೇಷನ್ ಬೋಗಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ 5000 ಸಾವಿರ ಸ್ಲೀಪರ್ ಬೋಗಿಗಳನ್ನು ಐಸೋಲೇಷನ್ ಬೋಗಿಗಳನ್ನಾಗಿ ಪರಿವರ್ತಿಸಲಾಗಿದೆ. ಒಟ್ಟು 3,20,000 ಐಸೋಲೇಷನ್ ಬೆಡ್‍ಗಳನ್ನು ರೈಲ್ವೆ ಇಲಾಖೆಯಿಂದ ನಿರ್ಮಿಸುವ ಗುರಿ ಹೊಂದಲಾಗಿದೆ.

ಈಗ ನಿರ್ಮಿಸಿರುವ ಐಸೋಲೇಷನ್ ಬೋಗಿಗಳನ್ನು ಆರೋಗ್ಯ ಇಲಾಖೆ ಹಾಗೂ ಗೃಹ ಇಲಾಖೆ ನಿರ್ದೇಶನದ ಮೇರೆಗೆ, ಅಗತ್ಯ ಇರುವ ಕಡೆ ಸೇವೆಗಾಗಿ ಕಳುಹಿಸಿಕೊಡಲಾಗುವುದು. ಕೊರೋನಾ ಪಾಸಿಟಿವ್ ಬಂದ ವ್ಯಕ್ತಿಗಳನ್ನು ಐಸೋಲೇಷನ್ ಬೋಗಿಗಳಲ್ಲಿ ಇರಿಸಿ ಚಿಕಿತ್ಸೆ ನೀಡಬಹುದಾಗಿದೆ.

ನೈರುತ್ಯ ರೈಲ್ವೆಯ ಹುಬ್ಬಳ್ಳಿ, ಮೈಸೂರು, ಬೆಂಗಳೂರು ವಿಭಾಗ ಹಾಗೂ ವರ್ಕ್ ಶಾಪ್‍ಗಳಲ್ಲಿ 312 ಐಸೋಲೇಷ್‍ಬೋಗಿಗಳನ್ನು ನಿರ್ಮಿಸಾಗಿದೆ.  ಇಲಾಖೆಯು ಕೊರೋನಾ ದಿಂದ ಉಂಟಾಗಬಹುದಾದ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧವಾಗಿದೆ. ಸದ್ಯ ಎಲ್ಲಾ ಪ್ರಯಾಣಿಕರ ರೈಲುಗಳ ಸಂಚಾರ ರದ್ದುಪಡಿಸಲಾಗಿದೆ. ಅಗತ್ಯ ವಸ್ತುಗಳನ್ನು ಸರಬರಾಜು ಮಾಡವ ಸಲುವಾಗಿ ಸರುಕು ಸಾಗಾಣಿಕೆ ರೈಲುಗಳು ಸಂಚಾರ ನಡೆಸುತ್ತಿವೆ. ಇಲಾಖೆ ನೌಕರರು ಹಗಲಿರುಳು ಶ್ರಮಿಸಿ ಐಸೋಲೇಷನ್ ಕೋಚ್‍ಗಳನ್ನು ನಿರ್ಮಿಸಿದ್ದಾರೆ.

ರೈಲ್ವೆ ಪೊಲೀಸ್ ವತಿಯಿಂದ ಪ್ರತಿ ವಿಭಾಗದಲ್ಲೂ ಊಟ ನೀಡುವ ವ್ಯವಸ್ಥೆ ಮಾಡಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಿಸ್ಥಿತಿಯನ್ನು ಅವಲೋಕಿಸಿ ಲಾಕ್ ಡೌನ್ ಕುರಿತು ನಿರ್ಧಾರ ಕೈಗೊಳ್ಳಲಿವೆ. ಐಸೋಲೇಷನ್ ಬೋಗಿಗಳನ್ನು ನಿರ್ಮಿಸುವಲ್ಲಿ ಶ್ರಮವಿಸಿದ ಎಲ್ಲಾ ರೈಲ್ವೆ ಇಲಾಖೆಯ ಎಲ್ಲಾ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಅಭಿನಂದನೆಗಳು ಎಂದು ಹೇಳಿದರು.

ಕೋವಿಡ್-19 ಲಕ್ಷಣ ಕಾಣಿಸಿಕೊಳ್ಳವ ಪ್ರತಿಯೊಬ್ಬರು ಸ್ವಯಂಪ್ರೇರಿತರಾಗಿ ಬಂದು ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದರ ಮೂಲಕ ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟಬೇಕು ಎಂದು ಹೇಳಿದರು.

ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ  ಜಗದೀಶ್ ಶೆಟ್ಟರ್,  ಶಾಸಕ ಅವರವಿಂದ ಬೆಲ್ಲದ, ನೈರುತ್ಯ ರೈಲ್ವೆ ಮುಖ್ಯ ವ್ಯವಸ್ಥಾಪಕ ಅಜಯ್ ಕುಮಾರ್ ಸಿಂಗ್, ಹೆಚ್ಚುವರಿ ವ್ಯವಸ್ಥಾಪಕ ಪ್ರಶಾಂತ್ ಕುಮಾರ್ ಮಿಶ್ರಾ, ಹುಬ್ಬಳ್ಳಿ ಸಿ.ಡಬ್ಲೂ.ಮ್ ನೀರಜ್ ಜೈನ್  ಇತರೆ ಅಧಿಕಾರಿಗಳು ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಆಗಸದಲ್ಲೇ ಡಿಕ್ಕಿ ಹೊಡೆದುಕೊಂಡ ನೌಕಾಪಡೆಯ 2 ಹೆಲಿಕಾಪ್ಟರ್‌ಗಳು ನೋಡ ನೋಡುತ್ತಿದ್ದಂತೆ ಪತನ: 10 ಮಂದಿ ಮೃತ KSRTC: ಸಾರಿಗೆ ನಿಗಮಗಳ ಖಾಸಗೀಕರಣಕ್ಕೆ ಅವಕಾಶ ನೀಡುತ್ತಿದೆ ಕೇಂದ್ರ ಬೃಹತ್‌ ಕೈಗಾರಿಕಾ ಸಚಿವಾಲಯ KSRTC: ಏಪ್ರಿಲ್‌-ಜೂನ್‌ ಪೀಕ್‌ ಸೀಸನ್‌ ಎಂದು ಚಾಲನಾ ಸಿಬ್ಬಂದಿಗಳಿಗೆ ರಜೆ ಕೊಡದೆ ಹಿಂಸಿಸುತ್ತಿರುವ ಅಧಿಕಾರಿಗಳು..! ಬಿಜೆಪಿ ರಾಜಕೀಯ ಲಾಭಕ್ಕೆ ನೇಹಾ ಪ್ರಕರಣ ಬಳಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ವಿಚಾರ: ಜಗದೀಶ್ ವಿ. ಸದಂ IVRS, ಬಲ್ಕ್ SMS ಮೂಲಕ ಮತದಾರರಿಗೆ ಮೊಬೈಲ್‌ ಸಂದೇಶ: ತುಷಾರ್ ಗಿರಿನಾಥ್ KSRTC: ವೇತನ ಸಮಸ್ಯೆ ಪರಿಹರಿಸದೆ ಅಸಡ್ಡೆ ತೋರಲು ಇವರು ಕಾರಣಗಳು....!? ರಾಜಕೀಯ ಪಕ್ಷಗಳ ಚುನಾವಣಾ ಪ್ರಣಾಳಿಕೆಗಳು ಜನರ ವಂಚಿಸುವ ಮಂತ್ರ ದಂಡಗಳು : ಕುರುಬೂರ್‌ ಶಾಂತಕುಮಾರ್‌ 'ನಮ್ಮ ನಡೆ ಮತಗಟ್ಟೆಯ ಕಡೆ' ಜಾಗೃತಿ ಜಾಥಾಗೆ ಮನೋಜ್ ಕುಮಾರ್ ಮೀನಾ, ತುಷಾರ್ ಗಿರಿನಾಥ್ ಚಾಲನೆ ಕೊಡಗು: ಹುಲಿದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ ತಾಳವಾಡಿ: ಜಮೀನಿಗೆ ನುಗ್ಗುತ್ತಿರುವ ಕಾಡಾನೆ ಹಿಮ್ಮೆಟ್ಟಿಸಿದ ರೈತರು