NEWSನಮ್ಮಜಿಲ್ಲೆ

ಪ್ರಜಾಪ್ರಭುತ್ವದ ಉಳಿವಿಗಾಗಿ ಮಾನವ ಸರಪಳಿ : ಉಸ್ತುವಾರಿ ಸಚಿವ ಮುನಿಯಪ್ಪ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರು ಭಾರತ ದೇಶಕ್ಕೆ ಸರ್ವ ಶ್ರೇಷ್ಠ ಸಂವಿಧಾನವನ್ನು ಕೊಟ್ಟಿದ್ದಾರೆ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಎಲ್ಲ ವರ್ಗದ ಜನರು ಭಾವೈಕ್ಯತೆಯಿಂದ ಬದುಕಬೇಕು. ಆಗಲೇ ಪ್ರಜಾಪ್ರಭುತ್ವದ ಉಳಿವು ಸಾಧ್ಯ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಿಹಳ್ಳಿ ಬಳಿ ಇಂದು ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯದಲ್ಲೇ ಮೊಟ್ಟಮೊದಲ ಬಾರಿಗೆ ಬೀದರ್ ಇಂದ ಚಾಮರಾಜನಗರ ವರೆಗೆ ಬೃಹತ್ ಮಾನವ ಸರಪಳಿ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 77 ಕಿಲೋಮೀಟರ್ ಉದ್ದದ ಬೃಹತ್ ಮಾನವ ಸರಪಳಿಗೆ ಸುಮಾರು 60 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ. ಇದಕ್ಕಾಗಿ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಶ್ರಮಿಸಿದ್ದಾರೆ. ಸಂವಿಧಾನದ ಉಳಿವು ಹಾಗು ಪ್ರಜಾಪ್ರಭುತ್ವದ ರಕ್ಷಣೆ ಇದರ ಮೂಲ ಉದ್ದೇಶವಾಗಿದೆ. ಭಾರತ ದೇಶದ ಪ್ರತಿಯೊಬ್ಬ ಪ್ರಜೆಯು ಜಾತ್ಯಾತೀತ ಭಾವನೆಯಿಂದ ಬದುಕಲು ಸಂವಿಧಾನ ಪ್ರಮುಖ ಪಾತ್ರ ವಹಿಸುತ್ತದೆ. ಇದು ರಾಷ್ಟ್ರಪಿತ ಮಹಾತ್ಮಾ ಗಾಂಧಿಜೀಯವರ ಕನಸು ಸಹ ಆಗಿತ್ತು ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ.ಶಿವಶಂಕರ ಅವರು ಮಾತನಾಡಿ ಅಂತರಾಷ್ಟ್ರೀಯ ಸಂವಿಧಾನ ದಿನಾಚರಣೆಯನ್ನು ಸಂವಿಧಾನ ಅಳವಡಿಸಿಕೊಂಡಿರುವ ವಿಶ್ವದ ಪ್ರಜಾಪ್ರಭುತ್ವ ದೇಶಗಳಲ್ಲಿ ಆಚರಿಸಲಾಗುತ್ತಿದೆ. ಭಾರತ ವಿಶ್ವದಲ್ಲಿಯೇ ದೊಡ್ಡ ಸಂವಿಧಾನ ಹೊಂದಿರುವ ದೇಶ. ನಮ್ಮ ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆ, ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟು ದೇಶದ ಸರ್ವತೋಮುಖ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿದೆ ಎಂದು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಾನವ ಸರಪಳಿ ಕಾರ್ಯಕ್ರಮ ಯಶಸ್ವಿಗೊಳ್ಳಲು ಅಧಿಕಾರಿ ವರ್ಗದವರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕ ಬಂಧುಗಳು ಹೆಚ್ಚು ಶ್ರಮವಹಿಸಿದ್ದಾರೆ. ಜಿಲ್ಲೆಯಲ್ಲಿ ಏಕಕಾಲದಲ್ಲಿ ಎರಡು ಕಡೆ ಮಾನವ ಸರಪಳಿ ರಚನೆಯಾಗಿದ್ದು, ಮೊದಲ‌ ಭಾಗದಲ್ಲಿ ನೆಲಮಂಗಲ ತಾಲೂಕಿನ ಹಳೆ ನಿಜಗಲ್ ನಿಂದ ಪ್ರಾರಂಭವಾಗಿ ದಾಬಸ್‌ಪೇಟೆ ಮುಖಾಂತರ ‌ದೊಡ್ಡಬಳ್ಳಾಪುರ ತಾಲೂಕಿನ ಹೆಗ್ಗಡಿಹಳ್ಳಿ ಕ್ರಾಸ್ ವರೆಗೆ 54 ಕಿಲೋ ಮೀಟರ್ ಸರಪಳಿ ರಚನೆಯಾಗಿದೆ. ಎರಡನೇ ಭಾಗದಲ್ಲಿ ಹೊಸಕೋಟೆ ತಾಲ್ಲೂಕಿನ ವೆಂಕಟಪುರದಿಂದ ಪ್ರಾರಂಭಿಸಿ ಮುಗಬಾಳ ಮುಖಾಂತರ ಹೊಸಕೋಟೆಯ ದೊಡ್ಡಮಾನಿಕೆರೆಯವರೆಗೆ 23 ಕಿಲೋಮೀಟರ್ ಸೇರಿ ಒಟ್ಟು 77 ಕಿಲೋಮೀಟರ್ ವರೆಗೆ ಮಾನವ ಸರಪಳಿ ಯಶಸ್ವಿಯಾಗಿದೆ ಎಂದರು.

ಜಿಲ್ಲಾ‌ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ಎನ್ ಅನುರಾಧ ಮಾತನಾಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯ ‌ಸಮಾನತೆ ಸಿಗುವಂತಾಗಬೇಕು. ಯಾವುದೇ ಭೇದ ಭಾವ ಇಲ್ಲದೆ ನಾವೆಲ್ಲರು ಒಂದೆ ಎಂಬ ಮನೋಭಾವ ಬೆಳೆಸಿಕೊಳ್ಳಬೇಕು. ರಾಜ್ಯದ ಹಿತಕ್ಕಾಗಿ ಒಟ್ಟಾಗಿ ದುಡಿಯಬೇಕು. ಆಡಂಬರದ ಆಚರಣೆ ಮಾಡದೆ ಸಂವಿಧಾನದ ಆಶಯದ‌ ಬಗ್ಗೆ ತಿಳಿಸುವ ಕಾರ್ಯಕ್ರಮ ಇದಾಗಿದೆ ಎಂದರು.

ಕಾರ್ಯಕ್ರದಲ್ಲಿ ಸಂವಿಧಾನ ಪೀಠಿಕೆಯನ್ನು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಬೋಧಿಸಿದರು. ಜಿಲ್ಲಾ ಗ್ಯಾರಂಟಿ ಅನುಷ್ಠಾನಗಳ ಅಧ್ಯಕ್ಷ ಬಿ. ರಾಜಣ್ಣ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧ್ಯಕ್ಷ ವಿ. ಶಾಂತಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ, ಸಚಿವರ ಆಪ್ತ ಕಾರ್ಯದರ್ಶಿ ನಟರಾಜ, ತಾಲೂಕು ತಹಶೀಲ್ದಾರ್‌ಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಕೃಷ್ಣಮೂರ್ತಿ, ವಿವಿಧ ಸಂಘಟನೆಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು