NEWSದೇಶ-ವಿದೇಶ

ಪ್ರಧಾನಿ ಮೋದಿಗೆ ‘ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್’ ನೀಡಿ ಸನ್ಮಾನಿಸಿದ ಫ್ರಾನ್ಸ್​ ಅಧ್ಯಕ್ಷ ಮ್ಯಾಕ್ರನ್

ವಿಜಯಪಥ ಸಮಗ್ರ ಸುದ್ದಿ

ಪ್ಯಾರಿಸ್​: ಎರಡು ದಿನಗಳು ಫ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರಿಗೆ ಫ್ರಾನ್ಸ್​ ದೇಶದ ಅತ್ಯುನ್ನತ ಮಿಲಿಟರಿ, ನಾಗರಿಕ‌ ಪ್ರಶಸ್ತಿ ‘ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್’ (Grand Cross of the Legion of Honor) ನೀಡಿ ಗುರುವಾರ ಗೌರವಿಸಲಾಗಿದೆ.

ಮೋದಿಯವರಿಗೆ ಅಲ್ಲಿನ ಅಧ್ಯಕ್ಷ ಇಮ್ಯಾನ್ಯುಯಲ್ ಮ್ಯಾಕ್ರನ್, ಈ ಗೌರವ ನೀಡಿ ಸನ್ಮಾಸಿದ್ದು ಭಾರತೀಯರು ಹೆಮ್ಮೆ ಪಡುವ ಸಂಗತಿಯಾಗಿದೆ. ರಾಜಧಾನಿ ಪ್ಯಾರಿಸ್​ಗೆ ಗುರುವಾರ ಆಗಮಿಸಿದ್ದ ಮೋದಿಗೆ ಕೆಂಪು ಹಾಸಿನ ಸ್ವಾಗತ ಕೋರಲಾಯಿತು.

ಇಂದು ( ಶುಕ್ರವಾರ ಜು.14) ಪ್ರಧಾನಿ ಮೋದಿಯವರು, ಫ್ರಾನ್ಸ್​ ಅಧ್ಯಕ್ಷರ ಜತೆ ಮಹತ್ವದ ಮಾತುಕತೆ ನಡೆಸಲಿದ್ದಾರೆ. ರಫೇಲ್ ಯುದ್ಧ ವಿಮಾನ ಖರೀದಿ, ಜಲಾಂತರ್ಗಾಮಿ ನಿರ್ಮಾಣ ಸೇರಿದಂತೆ ಹಲವು ಮಹತ್ವದ ಒಪ್ಪಂದಗಳಿಗೆ ಎರಡು ದೇಶದ ಗಣ್ಯರು ಸಹಿ ಹಾಕುವ ನಿರೀಕ್ಷೆ ಇದೆ.

ಪ್ರಧಾನಿ ಮೋದಿಗೆ ನೀಡಿರುವ ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್ ಪ್ರಶಸ್ತಿಯು ಈ ಹಿಂದೆ ನೆಲ್ಸನ್ ಮಂಡೇಲಾ, ಕಿಂಗ್ ಚಾರ್ಲ್ಸ್, ಏಂಜೆಲಾ ಮರ್ಕೆಲ್​ ಅವರಿಗೆ ನೀಡಿ ಫ್ರಾನ್ಸ್​ ಗೌರವಿಸಿತ್ತು.

ಪ್ಯಾರಿಸ್​ನ ಎಲಿಸೀ ಪ್ಯಾಲೇಸ್‌ನಲ್ಲಿ ಆತಿಥ್ಯ ನೀಡಿದ್ದಕ್ಕಾಗಿ ಮೋದಿಯವರು ಫ್ರೆಂಚ್ ಅಧ್ಯಕ್ಷರಿಗೆ ಮತ್ತು ಅವರ ಪತ್ನಿ ಬ್ರಿಗಿಟ್ಟೆ ಮ್ಯಾಕ್ರನ್​ಗೆ ಧನ್ಯವಾದ ಅರ್ಪಿಸಿದರು.

ಬಳಿಕ ಮೋದಿ ಅವರು ಫ್ರೆಂಚ್ ಪ್ರಧಾನಿ ಎಲಿಸಬೆತ್ ಬೋರ್ನ್ ಮತ್ತು ಫ್ರೆಂಚ್ ಸೆನೆಟ್ ಅಧ್ಯಕ್ಷ ಗೆರಾರ್ಡ್ ಲಾರ್ಚರ್​ರನ್ನು ಭೇಟಿಯಾಗಿ ಉಭಯ ದೇಶಗಳ ನಡುವೆ ಮತ್ತಷ್ಟು ಸಹಕಾರದ ಕುರಿತು ಚರ್ಚೆ ನಡೆಸಿದರು.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ