CrimeNEWSಬೆಂಗಳೂರು

ಪ್ರೇಯಸಿ ಮೇಲೆ ಅನುಮಾನ – ಆಕೆಯ ಹುಟ್ಟುಹಬ್ಬ ಆಚರಿಸಿ ಕತ್ತು ಸೀಳಿದ ಪಾಪಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪ್ರಿಯಕರ ತನ್ನ ಪ್ರೇಯಸಿಯ ಹುಟ್ಟುಹಬ್ಬವನ್ನು ಆಚರಿಸಿ, ಖುಷಿಯಲ್ಲಿ ಕೇಕ್ ಕತ್ತರಿಸಿ ಬಳಿಕ ಆಕೆಯ ಕುತ್ತಿಗೆಯನ್ನು ಕೊಯ್ದು ಹತ್ಯೆ ಮಾಡಿರುವ ಘಟನೆ ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಲಗ್ಗೆರೆಯಲ್ಲಿ ನಿವಾಸಿ ನವ್ಯ (24) ಜನ್ಮದಿನದಂದೆ ತನ್ನ ಪ್ರಿಯಕರನಿಂದ ಹತ್ಯೆಯಾದ ಯುವತಿ. ಪ್ರಶಾಂತ್ ಎಂಬಾತನೇ ಕೊಲೆ ಮಾಡಿದ ಪ್ರೇಮಿ. ಇತ್ತೀಚೆಗೆ ನವ್ಯ ಬೇರೆಯವರ ಜತೆ ಚಾಟಿಂಗ್ ಮಾಡುತ್ತಾ ಇದ್ದಳು ಎಂದು ಪ್ರಶಾಂತ್ ಅನುಮಾನಿಸಿದ್ದನಂತೆ.

ಇದೇ ವಿಚಾರಕ್ಕಾಕೆ ಇಬ್ಬರ ಮಧ್ಯೆ ಪದೇಪದೇ ಜಗಳ ಆಗುತ್ತಿತ್ತು ಎಂದು ಹೇಳಲಾಗುತ್ತಿದ್ದು. ಇದೀಗ ಅನುಮಾನದ ಮೇಲೆ ಬರ್ತಡೇ ಆಚರಿಸಿ, ಬಳಿಕ ಚಾಕುವಿನಿಂದ ಅಕೆಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ ಪಾಪಿ ಪ್ರಿಯಕರ.

ಪೊಲೀಸ್ ಆಂತರಿಕ ಭದ್ರತಾ ವಿಭಾಗದಲ್ಲಿ ಕ್ಲರ್ಕ್ ಆಗಿದ್ದ ನವ್ಯ, ಕಳೆದ ಆರು ವರ್ಷಗಳಿಂದ ಪ್ರಶಾಂತ್‌ನನ್ನ ಪ್ರೀತಿಸುತ್ತಿದ್ದಳು. ನವ್ಯ ಹಾಗೂ ಪ್ರಶಾಂತ್ ಇಬ್ಬರು ಕನಕಪುರ ಮೂಲದವರು ಹಾಗೂ ದೂರದ ಸಂಬಂಧಿಕರು ಕೂಡ ಆಗಿದ್ದಾರೆ.

ಕಳೆದ ಮಂಗಳವಾರ ನವ್ಯಳ ಬರ್ತಡೇ ಇತ್ತು. ಅಂದು ಬ್ಯುಸಿ ಇದ್ದೇನೆಂದು ಹೇಳಿದ್ದ ಪ್ರಶಾಂತ್ ನಿನ್ನೆ ಹುಟ್ಟುಹಬ್ಬ ಆಚರಣೆಗೆ ಪ್ಲಾನ್ ಮಾಡಿ ಅದರಂತೆ ರಾತ್ರಿ ಕೇಕ್ ಕಟ್ಟು ಮಾಡಿ ಕೇಕ್‌ ತಿನ್ನಿಸಿದ್ದಾನೆ. ಬಳಿಕ  ಚಾಕುವಿನಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿದ್ದಾನೆ.

ಸದ್ಯ ಯುವತಿಯ ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ರಾಜಗೋಪಾಲನಗರ ಪೊಲೀಸ್ ಠಾಣೆ ಈ ಸಂಬಂಧ ದೂರು ದಾಖಲಾಗಿದೆ.

Leave a Reply

error: Content is protected !!
LATEST
KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್