NEWSಕೃಷಿನಮ್ಮಜಿಲ್ಲೆ

ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಹೊಸವಸತಿ: ಸಚಿವ ಡಾ.ಮಹದೇವಪ್ಪ

ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ಪ್ರವಾಹದಿಂದ ಮನೆ ಸಂಪೂರ್ಣವಾಗಿ ಹಾನಿಗೊಳಗಾಗಿದ್ದರೆ ಸಂತ್ರಸ್ತರಿಗೆ ಸೂರು ಕಲ್ಪಿಸಲು ರಾಜೀವ್ ಗಾಂಧಿ ವಸತಿ ನಿಗಮದಿಂದ 1.20 ಲಕ್ಷ ರೂ.ವೆಚ್ಚದ ವಸತಿ ಯೋಜನೆಯನ್ನು ಪರಿಹಾರವಾಗಿ ನೀಡಲಾಗುವುದು ಎಂದು ಸಮಾಜ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ.ಮಹದೇವಪ್ಪ ಹೇಳಿದರು.

ಪಟ್ಟಣದ ಹಳೇ ತಿರುಮಕೂಡಲು ಹಾಗೂ ತಾಲೂಕಿನ ಮಾಲಂಗಿ ಗ್ರಾಮದಲ್ಲಿ ಶನಿವಾರ ಸಂಜೆ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಜಿಲ್ಲಾಡಳಿತದೊಂದಿಗೆ ಭೇಟಿ ನೀಡಿ ನೆರೆಯಿಂದ ಹಾನಿಗೊಳಗಾದ ಪ್ರದೇಶಗಳನ್ನು ಪರಿಶೀಲಿಸಿದ ಬಳಿಕ ಮಾತನಾಡಿದರು.

ಪ್ರವಾಹದಿಂದ ಜಿಲ್ಲೆಯಲ್ಲಿ 600ಕ್ಕೂ ಹೆಚ್ಚು ಜನರು ತೊಂದರೆಗೆ ಸಿಲುಕಿದ್ದು, ಕಾಳಜಿ ಕೇಂದ್ರಗಳನ್ನು ತೆರೆದು ಮೂಲಭೂತ ಸೌಕರ್ಯವನ್ನು ಕಲ್ಪಿಸಲಾಗಿದೆ. 254 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ತಾತ್ಕಾಲಿಕ ದುರಸ್ತಿಗೆ 6,500 ರೂ.ಗಳ ಪರಿಹಾರ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಕಬಿನಿ ಮತ್ತು ಕೆಆರ್‌ಎಸ್ ಜಲಾಶಯಗಳಿಗೆ ಹೆಚ್ಚಿನ ಪ್ರಮಾಣದ ನೀರು ಹರಿಸಿದ್ದರಿಂದ ಪ್ರವಾಹ ಉಂಟಾಗಿದೆ. ನಂಜನಗೂಡು, ವರುಣ ಹಾಗೂ ತಿ.ನರಸೀಪುರ ವಿಧಾನಸಭಾ ಕ್ಷೇತ್ರಗಳ ನದಿ ತೀರದ ಪ್ರದೇಶಗಳಲ್ಲಿ ರೈತರ ಬೆಳೆ ಹಾಗೂ ಮನೆ ಹಾನಿ ಉಂಟಾಗಿದೆ. ಜಿಲ್ಲಾಡಳಿತ ಹಲವು ಮುನ್ನೇಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರಿಂದ ಕಡಿಮೆ ಪ್ರಮಾಣದ ಹಾನಿಯಾಗಿದೆ. ಎನ್ ಡಿ ಆರ್ ಎಫ್ ನಿಯಮಾವಳಿ ಪ್ರಕಾರ ಪರಿಹಾರ ನೀಡಲಾಗುವುದು. ಹಾನಿ ಆಗಿರುವ ಮನೆ ಹಾಗೂ ಬೆಳೆ ಹಾನಿ ಕುರಿತು ಅಧಿಕಾರಿಗಳಿಂದ ವರದಿ ಪಡೆದು ಪರಿಹಾರ ನೀಡಲಾಗುವುದು ಎಂದರು.

ತಾಲೂಕಿನ ಮಾಲಂಗಿ ಗ್ರಾಮದಲ್ಲಿ ಪ್ರವಾಹದಿಂದ ನದಿ ತೀರದ 27 ಮನೆಗಳು ನಿರಂತರವಾಗಿ ನೀರು ನುಗ್ಗುತ್ತಿರುವುದರಿಂದ ಸರ್ವೇ ನಂ.77 ಮತ್ತು 78 ರಲ್ಲಿ ಕಾಯ್ದಿರಿಸಿರುವ 9.20 ಎಕರೆ ಜಮೀನಿನಲ್ಲಿ ನೆರೆ ಸಂತ್ರಸ್ತರಿಗೆ ಪರ್ಯಾಯ ನಿವೇಶನವನ್ನು ನೀಡುವಂತೆ ಸ್ಥಳದಲ್ಲೇ ಇದ್ದ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ನಂತರ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ತೆರೆದಿರುವ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರ ಯೋಗ ಕ್ಷೇಮವನ್ನು ವಿಚಾರಿಸಿದರು. ಶಾಲೆಯ ಪಕ್ಕದ ಅಂಗನವಾಡಿ ಕೇಂದ್ರದಲ್ಲಿ ಸಂತ್ರಸ್ತರಿಗೆ ವೈದ್ಯಕೀಯ ನೆರವು ನೀಡಲಾಗುತ್ತಿದ್ದನ್ನು ಪರಿಶೀಲನೆ ನಡೆಸಿ ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸಚಿವರು ತಾಕೀತು ಮಾಡಿದರು.

ವಿಧಾನ ಪರಿಷತ್ ಸದಸ್ಯ ರಾದ ಯತೀಂದ್ರ ಸಿದ್ದರಾಮಯ್ಯ ಸಚಿವರಿಗೆ ಸಾತ್ ನೀಡಿದರು. ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್, ಕಾವೇರಿ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್ ನಟರಾಜು, ಉಪ ವಿಭಾಗಾಧಿಕಾರಿ ರಕ್ಷಿತ್, ತಹಸೀಲ್ದಾರ್ ಸುರೇಶ್ ಆಚಾರ್, ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ, ಪೊಲೀಸ್ ಇನ್ಸ್ಪೆಕ್ಟರ್ ಧನಂಜಯ್ಯ, ಮನೋಜ್ ಕುಮಾರ್.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಡಿ. ಬಸವರಾಜು, ಮುದ್ದೇಗೌಡ, ಮೃಗಾಲಯ ಪ್ರಾಧಿಕಾರದ ಮಾಜಿ ನಿರ್ದೇಶಕಿ ಲತಾ ಜಗದೀಶ್, ಪುರಸಭೆ ಸದಸ್ಯ ತುಂಬಲ ಪ್ರಕಾಶ್, ದಸಂಸ ಸಂಚಾಲಕ ಆಲಗೂಡು ಶಿವಕುಮಾರ್, ನಿವೃತ್ತ ಮುಖ್ಯ ಲೆಕ್ಕಾಧಿಕಾರಿ ಮಾಲಂಗಿ ಜೆ.ಶಿವಸ್ವಾಮಿ, ಎಂ.ಕೆ.ಗಣೇಶ್ ಮೂರ್ತಿ, ತಾಪಂ ಮಾಜಿ ಸದಸ್ಯರಾದ ಕುಕ್ಕುರು ಗಣೇಶ, ರಾಮಲಿಂಗಯ್ಯ, ಗ್ರಾ.ಪಂ ಸದಸ್ಯ ಮಾದೇಶ್ ಹಾಗೂ ಅಧಿಕಾರಿಗಳು ಇದ್ದರು.

ಮುಡ ನಿವೇಶನ ಹಂಚಿಕೆ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಯಾವುದೇ ಪಾತ್ರವಿಲ್ಲ. ಮುಂದಿನ ಐದು ವರ್ಷಗಳ ಅವಧಿಯನ್ನು ಅವರೇ ಪೂರೈಸಲಿದ್ದಾರೆ. ವರುಣಕ್ಕೆ ಸೇರುವ ತಿ.ನರಸೀಪುರ ಸಿಎಂ ಕ್ಷೇತ್ರವಾದುದ್ದರಿಂದ ಸಿದ್ದರಾಮಯ್ಯ ಅವರು ದಿನಾಂಕ ನೀಡಿದ ಬಳಿಕ ಉದ್ಘಾಟನೆಗೊಳ್ಳಬೇಕಿರುವ ಅಭಿವೃದ್ಧಿ ಕಾರ್ಯಕ್ರಮಗಳ ಸಮಾರಂಭವನ್ನು ಆಯೋಜಿಸಲಾಗುವುದು.

l ಡಾ. ಎಚ್.ಸಿ.ಮಹದೇವಪ್ಪ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ