NEWSದೇಶ-ವಿದೇಶನಮ್ಮರಾಜ್ಯ

ಪೊಲೀಸರು ಅವಹೇಳನಕಾರಿ ಪದಬಳಕೆ ಮಾಡದೆ ಗೌರವದಿಂದ ವರ್ತಿಸಿ: ಹೈಕೋರ್ಟ್‌

ವಿಜಯಪಥ ಸಮಗ್ರ ಸುದ್ದಿ

ಕೇರಳ: ಪೊಲೀಸರು ನಾಗರಿಕರನ್ನು ಅಗೌರವದಿಂದ ಕಾಣುವ ಕುರಿತಾದ ಆರೋಪಗಳ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿ ಹೈಕೋರ್ಟ್‌ ಗೆ ವರದಿಯಾಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದ ಕೇರಳ ಹೈಕೋರ್ಟ್‌ ಈ ಕುರಿತು ತನ್ನ ತೀರ್ಪಿನಲ್ಲಿ ಪೊಲೀಸರಿಗೆ ಕೆಲ ಸಾಮಾನ್ಯ ನಿರ್ದೇಶಗಳನ್ನು ನೀಡಿದೆ.

vijayapatha.in - ವಿಜಯಪಥ.ಇನ್‌ ನಿಮಗೆ ವಿಶ್ವಾಸನೀಯ ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ ಎಂದು ಅನಿಸಿದರೆ ನಮಗೆ ಆರ್ಥಕವಾಗಿ ಬಲ ನೀಡಿ. ಇನ್ನಷ್ಟು ಸತ್ಯನಿಷ್ಠ ವರದಿಗಳನ್ನು ಮಾಡುವುದಕ್ಕೆ ಬೆಂಬಲ ನೀಡಿ.   ಕನಿಷ್ಠ 100 ರೂ. ಒಮ್ಮೆಗೆ ಹಾಕಿ. ನಮ್ಮನ್ನು ಪ್ರೋತ್ಸಾಹಿಸಿ. 

ನಾಗರಿಕರನ್ನು ಉದ್ದೇಶಿಸಿ ಪೊಲೀಸರು ಅವಹೇಳನಕಾರಿ ಪದಬಳಕೆ ಮಾಡುವುದನ್ನು ಸಹಿಸಲಾಗುವುದಿಲ್ಲ ಅಥವಾ ಅನುಮತಿಸಲಾಗುವುದಿಲ್ಲ ಎಂದು ಆದೇಶ ನೀಡಿದ ಹೈಕೋರ್ಟ್‌, ಇದನ್ನು ಖಚಿತಪಡಿಸಿಕೊಳ್ಳಲು ತೆಗೆದುಕೊಂಡ ಕ್ರಮಗಳೊಂದಿಗೆ ವರದಿಯನ್ನು ಸಲ್ಲಿಸುವಂತೆ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಿದೆ.

ಜೆ.ಎಸ್‌. ಅನಿಲ್‌ ಎಂಬ ವ್ಯಕ್ತಿಯು “ಪೊಲೀಸರು ತಮ್ಮ ಅಪ್ರಾಪ್ತ ವಯಸ್ಸಿನ ಮಗಳನ್ನು ಮೌಖಿಕವಾಗಿ ನಿಂದನೆ ಮಾಡುವ ಮಟ್ಟಿಗೆ ಹೋಗಿದ್ದು, ನಮಗೆ ಕಿರುಕುಳ ನೀಡುತ್ತಿದ್ದಾರೆ” ಎಂದು ಆರೋಪಿಸಿ ಸಲ್ಲಿಸಿದ್ದ ಅರ್ಜಿಯನ್ನು ವಿಲೇವಾರಿ ಮಾಡುವ ಸಂದರ್ಭದಲ್ಲಿ ನ್ಯಾಮೂರ್ತಿ ದೇವನ್‌ ರಾಮಚಂದ್ರನ್‌ ಆದೇಶ ಹೊರಡಿಸಿದ್ದಾರೆ.

ಪೊಲೀಸ್‌ ಅಧಿಕಾರಿಗಳು ನಾಗರಿಕರನ್ನುದ್ದೇಶಿಸಿ ಅಸಹ್ಯ ಪದಬಳಕೆ ಮಾಡುವುದರ ಕುರಿತು ನಾನು ಹೆಚ್ಚೇನೂ ವಿವರಿಸಿ ಹೇಳಬೇಕಾದ ಅಗತ್ಯವಿಲ್ಲ. ಈ ಪದಗಳು ಸುಸಂಸ್ಕೃತ ಸಮಾಜಕ್ಕೆ ಅಸಹ್ಯವಾಗಿವೆ.

ಇದು ವಸಾಹತಿಶಾಹಿ ಅಧೀನ ತಂತ್ರಗಳ ಅವಶೇಷ ಮಾತ್ರ. 21ನೇ ಶತಮಾನದ ಅಗತ್ಯತೆಗಳಿಗೆ ಅನುಗುಣವಾಗಿ ಸಾಗುವ ಈ ಸ್ವತಂತ್ರ ದೇಶದಲ್ಲಿ ಇಂತಹವುಗಳಿಗೆ ಯಾವುದೇ ಸ್ಥಾನವಿಲ್ಲ. ಪೊಲೀಸ್‌ ಪಡೆಯ ಯಾವುದೇ ಸದಸ್ಯರು ಇಂತಹ ಪದ ಬಳಕೆ ಮಾಡುವುದು ದೇಶದ ಸಾಂವಿಧಾನಿಕ, ನೈತಿಕತೆ ಮತ್ತು ಆತ್ಮಸಾಕ್ಷಿಗೆ ವಿರುದ್ಧವಾಗಿದೆ ಹಾಗೂ ಪ್ರಜಾಪ್ರಭುತ್ವ ನೈತಿಕತೆಗೆ ವಿರುದ್ಧವಾಗಿದೆ. ಅವರು ನಾಗರಿಕರನ್ನು ಗೌರವಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು!