NEWSನಮ್ಮಜಿಲ್ಲೆ

ಪಾದರಾಯನಪುರದಲ್ಲಿ ಕ್ವಾರಂಟೈನ್ ಶಂಕಿತರಿಂದ ಭಾರಿ ಗಲಾಟೆ

54 ಮಂದಿ ವಶಕ್ಕೆ, 4ಎಫ್‌ಐಆರ್‌ ದಾಖಲು l ಕಠಿಣ ಕ್ರಮಕ್ಕೆ ಮುಂದಾದ ಪೊಲೀಸರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್ ಮೇಲೆ ನಿನ್ನೆ ರಾತ್ರಿ  ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ಪೊಲೀಸರು ಈ ವರೆಗೂ ಸುಮಾರು 54 ಮಂದಿಯನ್ನು ವಶಕ್ಕೆ ಪಡೆದಿದ್ದು, 4 ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.

ಪಾದರಾಯನಪುರದ ಗುಡ್ಢದಹಳ್ಳಿ ಅರ್ಫತ್ ನಗರದಲ್ಲಿ ಘಟನೆ ನಡೆದಿದ್ದು, ಪೊಲೀಸ್ ಬ್ಯಾರಿಕೇಟ್ ಕಿತ್ತು ಹಾಕಿ ಧ್ವಂಸ ಮಾಡಿದ ಕಿಡಿಗೇಡಿಗಳು -ನಾವು ಕ್ವಾರಂಟೈನ್ ಒಳಪಡಲ್ಲ ಎಂದು ಕೂಗಾಡಿ ಹಲ್ಲೆ ಮಾಡಿದ್ದಾರೆ. ಇದರಿಂದ ಭಯಹೊಂಡ ಕೊರೊನಾ ವಾರಿಯರ್ಸ್ ಪೊಲೀಸರ ಮೊರೆಹೋಗಿದ್ದು, ಗಲಾಟೆ ಸಂಬಂಧ ಪೊಲೀಸರು ಕಠಿಣ ಕ್ರಮ ತೆಗೆದುಕೊಳ್ಳುತ್ತಿದ್ದಾರೆ.

ಘಟನೆ ವಿವರ

ಪಾದರಾಯನಪುರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿರುವ ಕಾರಣ ಹೊಂ ಕ್ವಾರಂಟೈನ್ ನಲ್ಲಿರ ಬೇಕಾದವರನ್ನು ಪತ್ತೆ ಹಚ್ಚಿದ್ದ ಅಧಿಕಾರಿಗಳು ಸೊಂಕಿತ ವ್ಯಕ್ತಿಯ ಸಂಪರ್ಕ ಇದ್ದ 58 ಜನರನ್ನು  ಹೊಂ ಚೆಕಪ್ ಗೆ ಪಡೆಯಲು ತೆರಳಿದ್ದರು.  ಈ ವೇಳೆ  ಬಿಬಿಎಂಪಿ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಪೊಲೀಸರು 15 ಜನರನ್ನ ಆಸ್ಪತ್ರೆಗೆ ಕಳುಹಿಸಿದ್ದರು.

ಆದರೆ ಉಳಿದವರು ಸಿಬ್ಬಂದಿಯೊಂದಿಗೆ  ಶಾಸಕರು ಬರಲಿ ನೋಡೋಣ ಎಂದು ಗಲಾಟೆ ತೆಗೆದು ಕ್ವಾರಂಟೈನ್ ಮಾಡಲು ಅಳವಡಿಸಿದ್ದ ತಗಡುಗಳನ್ನು ಕಿತ್ತು ಹಾಕಿದ್ದಾರೆ. ಈ ವೇಳೆ ಗಲಾಟೆ ಹೆಚ್ಚಾಗುವುದನ್ನು ಅರಿತ ಸಿಬ್ಬಂದಿ 33 ಜನರನ್ನ ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಅಷ್ಟರಲ್ಲೇ  ಗಲಾಟೆ ಮಾಡಿದ 100ಕ್ಕೂ ಹೆಚ್ಚು ಮಂದಿ ಸ್ಥಳೀಯರು ಪೊಲೀಸರ ಮೇಲೆಯೇ   ಹಲ್ಲೆ ಮಾಡಿದ್ದಾರೆ. ಪೊಲೀಸ್ ಬ್ಯಾರಿಕೇಡ್ ಗಳನ್ನು ಎಳೆದು ಬಿಸಾಡಿ‌ ಗಲಾಟೆ ಮಾಡಿ ಕೂಗಾಡಿದ್ದಾರೆ.

ಇದರಿಂದ ಪಾದರಾಯನಪುರ ವಾರ್ಡ್ ನಲ್ಲಿ ಉದ್ವಿಗ್ನ ಪರಿಸ್ಥಿತಿ ಇದ್ದು, ಸದ್ಯ ಎಲ್ಲಾ ಕಡೆ ಬ್ಯಾರಿಕೇಡ್ ಹಾಕಿ ನಿರ್ಬಂಧ ಹೇರಿದ್ದಾರೆ. ಇನ್ನು ಸ್ಥಳೀಯರು ಹೊರಗಡೆ ಹೋಗೋಕೆ ಆಗ್ತಿಲ್ಲ. ಊಟ ಸಿಗ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಾದರಾಯನಪುರ ವಾರ್ಡ್ ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಹಲ್ಲೆಕೊರರ ವಿರುದ್ಧ ಎಫ್‌ಐರ್‌ ದಾಖಲಿಸುವ ಕಾರ್ಯವನ್ನು ಮುಂದುವರಿಸಿಸದ್ದಾರೆ.

Leave a Reply

error: Content is protected !!
LATEST
ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಕೊಟ್ಟು ಹಣ ಉಳಿಯುತ್ತದೆ : ಎಎಪಿ ಜೂ.24ರಂದು ಶಿವಮೊಗ್ಗದಲ್ಲಿ ರಾಷ್ಟ್ರ, ರಾಜ್ಯ ರೈತ ಮುಖಂಡರ ಸಮಾವೇಶ: ಕುರುಬೂರ್ ಶಾಂತಕುಮಾರ್ ಸಂತ್ರಸ್ತೆ ಅಪರಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು KSRTCಯಿಂದ 300ಕ್ಕೂ ಹೆಚ್ಚು ಹೊಸ ಮಾರ್ಗಗಳಲ್ಲಿ ಬಸ್‌ ಓಡಾಟ: ಸಚಿವ ರಾಮಲಿಂಗಾರೆಡ್ಡಿ BMTC: 50ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್​​ಗಳ ಚಾಲಕರಿಗೆ ಗೇಟ್‌ಪಾಸ್‌ ಅತ್ಯಾಚಾರ ಆರೋಪಿ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನ ಎಸ್‌ಐಟಿ ಕಸ್ಟಡಿ ಅಂತ್ಯ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಎಎಪಿ ಪ್ರತಿಭಟನೆ ನಟ ದರ್ಶನ್‌ ಸ್ಥಿತಿಗೆ ಮರುಗಿ ಅಭಿಮಾನಿ ಅನ್ನನೀರು ಬಿಟ್ಟು ಆತ್ಮಹತ್ಯೆಗೆ ಶರಣು? KSRTC ‘ಅಶ್ವಮೇಧ’ಗಳಿಂದ ಸಂಸ್ಥೆಗೆ ಶೇ.10ಕ್ಕೂ ಹೆಚ್ಚು ಲಾಭ : ಸಚಿವ ರಾಮಲಿಂಗಾರೆಡ್ಡಿ ಅತೀ ಶೀಘ್ರದಲ್ಲೇ NWKRTC ಒಡಲು ಸೇರಲಿವೆ 350 ಹೊಸ ಎಲೆಕ್ಟ್ರಿಕ್​ ಬಸ್‌ಗಳು