NEWSನಮ್ಮಜಿಲ್ಲೆವಿಜ್ಞಾನಶಿಕ್ಷಣ-ಸಂಸ್ಕೃತಿ

ಪಾರದರ್ಶಕವಾಗಿ ಎಸ್ಎಸ್ಎಲ್‌ಸಿ ಪರೀಕ್ಷೆ ನಡೆಸಿ

ತ‌ುಮಕೂರು ಶಿಕ್ಷಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್ ಸಲಹೆ

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ಮಾರ್ಚ್ 27ರಿಂದ ಎಸ್ಎಸ್ಎಲ್‌ಸಿ  ಪರೀಕ್ಷೆಗಳು ಆರಂಭವಾಗಲಿದ್ದು, ಪರೀಕ್ಷೆಗಳು ಯಾವುದೇ ಲೋಪದೋಷವಿಲ್ಲದೇ ಪಾರದರ್ಶಕವಾಗಿ ನಡೆಯುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಕೇಶ್‌ ಕುಮಾರ್  ಸಲಹೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಎಸ್ಎಸ್ಎಲ್‌ಸಿ  ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಪರೀಕ್ಷಾ ಕೇಂದ್ರಗಳಲ್ಲಿ ಟೇಬಲ್, ಕುಡಿಯುವ ನೀರು ಮತ್ತು ಎಲ್ಲಾ ರೀತಿಯ ಮೂಲ  ಸೌಕರ್ಯ ಕಲ್ಪಿಸಬೇಕು ಅಲ್ಲದೇ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಾಗಲಿ, ಪರೀಕ್ಷಾ ಕೇಂದ್ರಗಳಲ್ಲಿ ಗುಂಪಾಗಿ ಸೇರದಂತೆ ನೋಡಿಕೊಳ್ಳುವುದು ಎಲ್ಲಾ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಜವಾಬ್ದಾರಿ ಎಂದು ಸೂಚಿಸಿದರು.

ಪ್ರಶ್ನೆ ಪತ್ರಿಕೆಗಳನ್ನು ಸಾಗಿಸುವಾಗ,ಉತ್ತರ ಪತ್ರಿಕೆಗಳನ್ನು ತರುವಾಗ ಸೂಕ್ತ ಭದ್ರತೆಗಳಿಂದ ಪೊಲೀಸ್ ಇಲಾಖೆ ಕ್ರಮವಹಿಸಬೇಕು.  ಅಲ್ಲದೇ ಪರೀಕ್ಷಾ ಕಾರ್ಯಕ್ಕಾಗಿ ಸೂಕ್ತ ವಾಹನಗಳ ವ್ಯವಸ್ಥೆ ಕಲ್ಪಿಸಬೇಕು ಎಂದು ಆರ್‌ಟಿಒ  ಅಧಿಕಾರಿಗಳಿಗೆ ಸೂಚಿಸಿದರು.

ಎಕ್ಸಾ ಕೊಠಡಿಗಳಲ್ಲಿ ಸ್ಯಾನಿಟೈಸರ್‌ ಇಟ್ಟು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಕಾರ್ಯಕ್ಕೆ ಹಾಜರಾಗುವ ಎಲ್ಲಾ ಅಧಿಕಾರಿ, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಕೈಗಳನ್ನು ಸ್ವಚ್ಛಗೊಳಿಸಿಕೊಂಡು ಪರೀಕ್ಷೆ ಕೊಠಡಿಗೆ ತೆರಳುವಂತೆ ವ್ಯವಸ್ಥೆ ಮಾಡಬೇಕು ಎಂದರು.

ಜ್ವರ, ಕೆಮ್ಮು, ನೆಗಡಿಯಿಂ ಬಳಲುತ್ತಿದ್ದರೆ ಅಂತಹವರಿಗೆ  ಮಕ್ಕಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಿ ಪರೀಕ್ಷೆಗೆ ಅವಕಾಶ ಕಲ್ಪಿಸಬೇಕು. ಅಲ್ಲದೇ  ಕೊಠಡಿಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಮಾಡಿ ಮಕ್ಕಳು  ಅಂತರ  ಕಾಯ್ದುಕೊಳ್ಳುವಂತೆ ಎಚ್ಚರಿಕೆ  ಎಂದು ನಿರ್ದೇಶನ ನೀಡಿದರು.

ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಗಳಲ್ಲಿ 2020ರ ಎಸ್ಎಸ್ಎಲ್‌ಸಿ  ಪರೀಕ್ಷೆಗೆ ಒಟ್ಟು 36782 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು,  ಒಟ್ಟು 144 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.

ಜಿಪಂ ಸಿಇಒ ಶುಭಾ ಕಲ್ಯಾಣ್, ಉಪವಿಭಾಗಾಧಿಕಾರಿಗಳು, ಡಿಡಿಪಿಐಗಳಾದ ಎಂ.ಆರ್.ಕಾಮಾಕ್ಷಿ, ರೇವಣಸಿದ್ಧಪ್ಪ, ಡಯಟ್ ಪ್ರಿನ್ಸಿಪಾಲ್ ಮಂಜುನಾಥ, ರಂಗಧಾಮಯ್ಯ, ಎಲ್ಲಾ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಕೊಟ್ಟು ಹಣ ಉಳಿಯುತ್ತದೆ : ಎಎಪಿ ಜೂ.24ರಂದು ಶಿವಮೊಗ್ಗದಲ್ಲಿ ರಾಷ್ಟ್ರ, ರಾಜ್ಯ ರೈತ ಮುಖಂಡರ ಸಮಾವೇಶ: ಕುರುಬೂರ್ ಶಾಂತಕುಮಾರ್ ಸಂತ್ರಸ್ತೆ ಅಪರಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು KSRTCಯಿಂದ 300ಕ್ಕೂ ಹೆಚ್ಚು ಹೊಸ ಮಾರ್ಗಗಳಲ್ಲಿ ಬಸ್‌ ಓಡಾಟ: ಸಚಿವ ರಾಮಲಿಂಗಾರೆಡ್ಡಿ BMTC: 50ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್​​ಗಳ ಚಾಲಕರಿಗೆ ಗೇಟ್‌ಪಾಸ್‌ ಅತ್ಯಾಚಾರ ಆರೋಪಿ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನ ಎಸ್‌ಐಟಿ ಕಸ್ಟಡಿ ಅಂತ್ಯ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಎಎಪಿ ಪ್ರತಿಭಟನೆ ನಟ ದರ್ಶನ್‌ ಸ್ಥಿತಿಗೆ ಮರುಗಿ ಅಭಿಮಾನಿ ಅನ್ನನೀರು ಬಿಟ್ಟು ಆತ್ಮಹತ್ಯೆಗೆ ಶರಣು? KSRTC ‘ಅಶ್ವಮೇಧ’ಗಳಿಂದ ಸಂಸ್ಥೆಗೆ ಶೇ.10ಕ್ಕೂ ಹೆಚ್ಚು ಲಾಭ : ಸಚಿವ ರಾಮಲಿಂಗಾರೆಡ್ಡಿ ಅತೀ ಶೀಘ್ರದಲ್ಲೇ NWKRTC ಒಡಲು ಸೇರಲಿವೆ 350 ಹೊಸ ಎಲೆಕ್ಟ್ರಿಕ್​ ಬಸ್‌ಗಳು