NEWSನಮ್ಮರಾಜ್ಯ

ಪಾಸ್ ದುರುಪಯೋಗ ಮದುವೆಗೆ ತೆರಳಿದವರಿಗೆ ಹೋಮ್ ಕ್ವಾರಂಟೈನ್ ಶಿಕ್ಷೆ

 ಇನೋವಾ ವಾಹನ ಜಪ್ತಿ ಮಾಡಿದ ಡಿವೈಎಸ್‍ಪಿ ರವಿ ನಾಯಕ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಧಾರವಾಡ:  ಲಾಕ್‍ಡೌನ್ ಹಿನ್ನೆಲೆಯಲ್ಲಿ ವಾಹನ ಸಂಚಾರ, ಜನರ ಓಡಾಟ ನಿರ್ಬಂಧಿಸಿರುವದರಿಂದ ಆರೋಗ್ಯ, ತುರ್ತು ವೈದ್ಯಕೀಯ ತಪಾಸಣೆಗಾಗಿ ಮಾನವೀಯತೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅಗತ್ಯವಿರುವವರಿಗೆ ಪಾಸ್ ನೀಡುವ ಸೌಲಭ್ಯ ಕಲ್ಪಿಸಿದೆ.

ಆದರೆ ಇಂದು (ಏ.15) ಬೆಳಗ್ಗೆ 8:30 ಕ್ಕೆ ನರೇಂದ್ರ ಗ್ರಾಮದಲ್ಲಿ ಡಿವೈಎಸ್‍ಪಿ ರವಿನಾಯಕ್ ರೌಂಡ್ಸ್ ನಲ್ಲಿದ್ದಾಗ ವೈದ್ಯಕೀಯ ಪಾಸ್ ಪಡೆದು ಮದುವೆ ಕಾರ್ಯ ಮುಗಿಸಿ ಬಂದ ವಾಹನವನ್ನು ಜಪ್ತಿ ಮಾಡಿದ್ದಾರೆ. ಪಾಸ್ ದುರಪಯೋಗ ಪಡಿಸಿಕೊಂಡಿರುವವರು ವಧುವಿನ ಕಡೆಯವರಾಗಿದ್ದು, ಉಪ್ಪಿನ ಬೇಟಗೇರಿ ಗ್ರಾಮದವರೆಂದು ತಿಳಿಸಿದ್ದಾರೆ.

ನಿನ್ನೆ ದಿನ ಹುಬ್ಬಳ್ಳಿಯಲ್ಲಿ ಮದುವೆ ಕಾರ್ಯ ಮುಗಿಸಿಕೊಂಡು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸ್ಥಾಪಿಸಿರುವ ಚೆಕ್ ಪೋಸ್ಟ್‌ಗಳನ್ನು ತಪ್ಪಿಸಿ, ಹುಬ್ಬಳ್ಳಿಯಿಂದ ಇನೋವಾ ವಾಹನದಲ್ಲಿ ಒಂದು ಮಗು ಸೇರಿದಂತೆ ಒಟ್ಟು 9 ಜನ ಹೊರಟಿದ್ದರು. ಡಿವೈಎಸ್‍ಪಿ ವಾಹನ ನಿಲ್ಲಿಸಿ ಪರಿಶಿಲಿಸಿದಾಗ ತುರ್ತು ವೈದ್ಯಕೀಯ ಅಗತ್ಯಕ್ಕಾಗಿ ನೀಡಿದ್ದ ಪಾಸ್ ದುರುಪಯೋಗ ಮಾಡಿಕೊಂಡಿದ್ದು ಅವರ ಗಮನಕ್ಕೆ ಬಂದಿದೆ.

ಎಸ್‍ಪಿ ವರ್ತಿಕಾ ಕಟಿಯಾರ್ ಅವರ ಮಾರ್ಗದರ್ಶನದಲ್ಲಿ ತಕ್ಷಣ ಕಾರ್ಯಪ್ರವೃತರಾದ ಡಿವೈಎಸ್‍ಪಿ ರವಿ ನಾಯಕ ಅವರು ಇನೋವಾ ವಾಹನದಲ್ಲಿದ್ದ 9 ಜನರನ್ನು ವೈದ್ಯಕೀಯ ತಪಾಸಣೆಗಾಗಿ ಪೊಲೀಸ್ ವಾಹನದಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿ, ಇನೋವಾ ವಾಹನವನ್ನು ಜಪ್ತಿ ಮಾಡಿದ್ದಾರೆ. ಅಲ್ಲದೇ ತಪಾಸಣೆ ನಂತರ ಈ ಎಲ್ಲ 9 ಜನರಿಗೆ ಹೋಮ್ ಕ್ವಾರಂಟೈನ್ ಕಡ್ಡಾಯಗೊಳ್ಳಿಸಿ, ಸಂಬಂಧಿಸಿದವರಿಗೆ ನಿರ್ದೇಶನ ನೀಡಿದ್ದಾರೆ.

ಮಾನವೀಯ ಹಿನ್ನೇಲೆಯಲ್ಲಿ ಅಗತ್ಯ ಮತ್ತು ತುರ್ತು ನೇರವಿಗಾಗಿ ಜಿಲ್ಲಾಡಳಿತ ನೀಡುವ ಪಾಸ್‍ಗಳನ್ನು ದುರುಪಯೋಗಪಡಿಸಿಕೊಂಡರೆ ಅಂತಹವರ ವಾಹನಗಳನ್ನು ಜಪ್ತಿ ಮಾಡಿ ವಶಕ್ಕೆ ಪಡೆದು, ಹೆಚ್ಚಿನ ಮೊತ್ತದ ದಂಡ ವಿಧಿಸಲಾಗುವುದು ಮತ್ತು ಸರ್ಕಾರದ ಆದೇಶ ಉಲ್ಲಂಘನೆ ಮಾಡಿದ್ದರಿಂದ ಅಂತವರ ವಿರುದ್ಧ ಐಪಿಸಿ ಸೆಕ್ಷನ್ 188 ರಡಿ ಪ್ರಕರಣ ದಾಖಲಿಸಲಾಗುವದು ಎಂದು ಡಿವೈಎಸ್‍ಪಿ ಎಚ್ಚರಿಸಿದ್ದಾರೆ.

ಧಾರವಾಡ ಗ್ರಾಮೀಣ ಜಿಲ್ಲೆಯಲ್ಲಿ ಲಾಕ್‍ಡೌನ್ ಉಲ್ಲಂಘಿಸಿ, ಅನಗತ್ಯವಾಗಿ ರಸ್ತೆಗಿಳಿದ  ಒಂದು ಸಾವಿರಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಈಗಾಗಲೇ ಜಪ್ತಿ ಮಾಡಲಾಗಿದೆ. ಇನ್ನೂ ಮುಂದೆ ಜಿಲ್ಲಾಡಳಿತ ಅಥವಾ ಇತರ ಇಲಾಖೆಗಳು ಅಗತ್ಯ ಸೇವೆಗಾಗಿ ನೀಡುವ ಪಾಸ್‍ಗಳನ್ನು ದುರುಪಯೋಗ ಪಡಿಸಿಕೊಂಡಿದ್ದು ಕಂಡು ಬಂದರೆ ಅಂತವರ ವಿರುದ್ಧ ಕ್ರೀಮಿನಲ್ ಪ್ರಕರಣ ದಾಖಲಿಸಿ, ನಿರ್ಧಾಕ್ಷಿಣ್ಯವಾಗಿ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ