CrimeNEWSನಮ್ಮರಾಜ್ಯ

ಪ್ರತಿಭಟನಾಕಾರರ ವಿರುದ್ಧ ದಾಖಲಾದ ಪ್ರಕರಣಗಳು ಹಿಂದಕ್ಕೆ

ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ l ಸನ್ನಡತೆ ಕೈದಿಗಳ ಬಿಡುಗಡೆಗೂ ಒಪ್ಪಿಗೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ವಿವಿಧೆಡೆಗಳಲ್ಲಿ ಹೂಡಿದ್ದ 46 ಪ್ರಕರಣಗಳನ್ನು ಹಿಂಪಡೆಯಲಾಗಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ  ರಾಜ್ಯ ಸಚಿವ ಸಂಪುಟ ಘಟನೋತ್ತರ ಅನುಮೋದನೆ ನೀಡಿದೆ. ಜೊತೆಗೆ, ಇಂತಹ ಸಾರ್ವಜನಿಕ ವಿಷಯಗಳಲ್ಲಿ ಹೋರಾಟ ಮಾಡಿದವರ ವಿರುದ್ಧ ದಾಖಲಾದ 152 ಪ್ರಕರಣಗಳನ್ನು ಹಿಂಪಡೆಯಲು ಸಚಿವ ಸಂಪುಟ ನಿರ್ಧರಿಸಿದೆ.

ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ರೈತರ ಮೇಲೆ ಹೂಡಲಾದ ಮೊಕದ್ದಮೆಗಳು ಟಿಪ್ಪು ಜಂಯಂತಿ ಸಂದರ್ಭದಲ್ಲಿ ಉಂಟಾದ ಗಲಭೆಯ ಸಂದರ್ಭದಲ್ಲಿ ಪ್ರತಿಭಟನಾಕಾರರ ವಿರುದ್ಧ ದಾಖಲಿಸಿದ ಪ್ರಕರಣಗಳು,  ಗಣೇಶೋತ್ಸವದಂತಹ ಸಾರ್ವಜನಿಕ ಸಮಾರಂಭದ ಸಂದರ್ಭದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಾವೆಗಳೂ ಒಳಗೊಂಡಂತೆ ಹಲವು ಪ್ರಕರಣಗಳನ್ನು ಇಂದು ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಸನ್ನಡತೆ ಕೈದಿಗಳ ಅವಧಿ ಪೂರ್ವ ಬಿಡುಗಡೆ : ಶಿಕ್ಷಾ ಅವಧಿ ಕಡಿಮೆ

ಜೀವಾವಧಿ ಶಿಕ್ಷೆಗೊಳಗಾಗಿ 14 ವರ್ಷ ಶಿಕ್ಷೆ ಪೂರ್ಣಗೊಳಿಸಿದ ಅಥವಾ 10 ವರ್ಷ ಶಿಕ್ಷೆ ಅನುಭವಿಸಿದ ಕೈದಿಗಳಿಗೆ ಸನ್ನಡತೆ ಆಧಾರದ ಮೇರೆಗೆ ಅವಧಿ ಪೂರ್ವ ಬಿಡುಗಡೆ ಮಾಡಲು ನಿಯಮಗಳ ಕರಡನ್ನು ರಾಜ್ಯ ಸಚಿವ ಸಂಪುಟದ ಅನುಮೋದಿಸಿದೆ. ಈ ಮುನ್ನ, ದಂಡ ಪ್ರಕ್ರಿಯಾ ಸಂಹಿತೆಯ ಪರಿಚ್ಛೇಧ 167 ( 1 )  ವ್ಯಾಪ್ತಿಗೊಳಪಡುವ ಪ್ರಕರಣಗಳನ್ನು ರಾಜ್ಯಪಾಲರಿಗೆ ಕಳುಹಿಸಿ ಬಿಡುಗಡೆಗೆ ಶಿಫಾರಸು  ಮಾಡಲಾಡಲಾಗುತ್ತಿತ್ತು. ಇದೀಗ ಸನ್ನಡತೆ ಆಧಾರದ ಮೇರೆಗೆ ಶಿಕ್ಷಾ ಅವಧಿಯನ್ನು ಕಡಿಮೆ ಮಾಡಲು ಸೂಕ್ತ ನಿಯಮ ರೂಪಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕು ದಾರೋಜಿ ಗ್ರಾಮಕ್ಕೆ 23.40 ಕೋಟಿ ರೂ ವೆಚ್ಚದಲ್ಲಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಮಂಜೂರು ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯ ಮೂರನೆಯ ಹಂತದಲ್ಲಿ ಕೇರಳ-ಕರ್ನಾಟಕದ ಗಡಿಯಲ್ಲಿ ರಸ್ತೆ ಅಭಿವೃದ್ಧಿಗೆ ಕೇಂದ್ರದ ಪಾಲು 1274 ಕೋಟಿ ರೂ ಒಳಗೊಂಡಂತೆ 2729.66 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಸಚಿವ ಸಂಪುಟ ಸಮ್ಮತಿಸಿದೆ.

ಕರ್ನಾಟಕ ರೈತ ಸುರಕ್ಷಾ ಫಸಲ್ ಭೀಮಾ ಯೋಜನೆಯಡಿ ಬ್ಯಾಂಕುಗಳಲ್ಲಿ ರೈತರ ಫಸಲುಗಳಿಗೆ ಮಾಡಿಸಲಾದ ವಿಮೆಯ ರಾಜ್ಯ ಸರ್ಕಾರದ ಪಾಲಿನ 2016 ಸಾಲಿನ ವಿಮಾ ಮೊತ್ತ 18.59 ಕೋಟಿಗಳನ್ನು ಭರಿಸಲು ಸಂಪುಟ ಒಪ್ಪಿಗೆ ನೀಡಿದೆ.

Leave a Reply

error: Content is protected !!
LATEST
ಸಾವಿರ ವರ್ಷಗಳ ಇತಿಹಾಸವಿರುವ ಈಶ್ವರ ದೇವಾಲಯ ಜೀರ್ಣೋದ್ಧಾರಕ್ಕೆ ಚಾಲನೆ: ನೇಮಿರಾಜ್ ಕೃಷಿ ಸಚಿವರ ತವರು ನೆಲದಲ್ಲೇ ಕೊಬ್ಬರಿ ಮಾರಿದ ರೈತರ ಪರದಾಟ : ರೈತ ಸಂಘ ಕಿಡಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಪಿಎಸ್ ಪಿಂಚಣಿಗಾರರ ಬೃಹತ್ ಪ್ರತಿಭಟನೆ- ಆಕ್ರೋಶ ಮಳೆ ನೀರ ನೇರವಾಗಿ ಒಳಚರಂಡಿಗೆ ಬಿಡುವವರ ವಿರುದ್ಧ ಜಲಮಂಡಳಿ ಕ್ರಮಕ್ಕೆ ಆಕ್ಷೇಪ: ಡಿಸಿಎಂ ಡಿಕೆಶಿಗೆ ಎಎಪಿ ಬಹಿರಂಗ ಪತ್ರ ಕಿಟಕಿ ಮೂಲಕ ನುಸುಳಿ ಹಣ ದೋಚುತ್ತಿದ್ದ ಖತರ್ನಾಕ್‌ ಅಕ್ಕ-ತಮ್ಮ ಅಂದರ್‌ KSRTC: ನೌಕರರ ಸಮಸ್ಯೆ ನೀಗಿಸುವ ಸಮರ್ಥ ಪಡೆಯೂ ಇಲ್ಲ ಸಮರ್ಥ ನಾಯಕನೂ ಇಲ್ಲ! ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ ಮಹರ್ಷಿ ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ: ಸಚಿವ ನಾಗೇಂದ್ರ ಸ್ಪಷ್... ಪಿ.ಚಂದ್ರಶೇಖರನ್‌ ಆತ್ಮಹತ್ಯೆ ಪ್ರಕರಣ: ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿರುವ ಮಂತ್ರಿಯ ಸಂಪುಟದಿಂದ ಕಿತ್ತುಹಾಕಿ: ಎಎಪಿ KKRTC: ಡಬಲ್ ಡ್ಯೂಟಿ, ದೂರದ ಪ್ರಯಾಣಕ್ಕೆ ವಿಶ್ರಾಂತಿ ಕಡ್ಡಾಯ ಆದರೆ ದೇವದುರ್ಗ ಘಟಕದ ನೌಕರರಿಗೆ ಮರೀಚಿಕೆ!