CrimeNEWS

ಪ್ರತ್ಯೇಕ ಜೂಜು ಅಡ್ಡೆಗಳ ಮೇಲೆ ದಾಳಿ

36 ಜನ ಆರೋಪಿಗಳ ಬಂಧನ l 31 ಸಾವಿರ ರೂ. ವಶ

ವಿಜಯಪಥ ಸಮಗ್ರ ಸುದ್ದಿ

ರಾಯಚೂರು:  ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಜೂಜಾಟದಲ್ಲಿ ನಿರತರಾಗಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ಸುಮಾರು 36 ಜನ ಆರೋಪಿಗಳನ್ನು ಬಂಧಿಸಿ, ಒಟ್ಟು 31 ಸಾವಿರ ರೂ. ನಗದು ವಶಪಡಿಸಿಕೊಂಡಿರುವ ಘಟನೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.

ಯಾಪಲದಿನ್ನಿ ಪೊಲೀಸ್ ಠಾಣೆಯಲ್ಲಿ ನಲ್ಲರೆಡ್ಡಿ, ಬೂದೆಪ್ಪ, ರಾಮಪ್ಪ, ಈರಣ್ಣ, ಮಹಾದೇವ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.

ತುರುವಿಹಾಳ ಠಾಣೆಯಲ್ಲಿ ರಾಘವೇಂದ್ರ, ಲಾಲಸಾಬ, ಬಾಲಪ್ಪ, ಸೋಮಣ್ಣ, ದ್ಯಾಮಣ್ಣ, ಚಂದುಸಾಬ, ಶ್ಯಾಮಣ್ಣ, ಹನುಮಂತ, ಮುತ್ತಣ್ಣ, ದೇವಪ್ಪ ಮತ್ತು ತಿಪ್ಪಣ್ಣ ಎಂಬುವರನ್ನು ಬಂಧಿಸಲಾಗಿದೆ. 1,860 ರೂ. ನಗದು ವಶಪಡಿಸಿಕೊಳ್ಳಲಾಗಿದೆ.

ಬಳಗಾನೂರು ಠಾಣೆಯಲ್ಲಿ ಸೂಗಪ್ಪ, ಬಸವಲಿಂಗಪ್ಪ, ಮೌನೇಶ ಮತ್ತು ಮಾನ್ವಿ ಠಾಣೆಯಲ್ಲಿ ರಾಮನಾಯಕ, ಮಲ್ಲಪ್ಪ, ಗೂಡುಸಾಬ್, ಬಸವರಾಜ, ಖಾಜಾ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.

ಒಟ್ಟು ನಾಲ್ಕು ಪ್ರಕರಣಗಳಲ್ಲಿ ಸುಮಾರು 36 ಜನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿತರಿಂದ 31,210 ರೂ ನಗದು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಆಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ