CrimeNEWSಸಿನಿಪಥ

ಫೈಟರ್ ವಿವೇಕ್ ಸಾವಿನ ಪ್ರಕರಣ ಸಂಬಂಧ ಬಿಡದಿ ಠಾಣೆಯಲ್ಲಿ ರಚಿತಾ ರಾಮ್ ವಿಚಾರಣೆ ಇಂದು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಫೈಟರ್ ವಿವೇಕ್ ಅವರು ಲವ್ ಯೂ ರಚ್ಚು ಚಿತ್ರದ ವೇಳೆ ವಿದ್ಯುತ್‌ ತಗುಲಿ ಮೃತಪಟ್ಟ ಪ್ರಕರಣ  ಸಂಬಂಧ ಮಂಗಳವಾರ ಸ್ಯಾಂಡಲ್​ವುಡ್  ನಟಿ, ಚಿತ್ರದ ನಾಯಕಿ ರಚಿತಾ ರಾಮ್ ವಿಚಾರಣೆಗೆ ಹಾಜರಾಗಲಿದ್ದಾರೆ.

ಆಗಸ್ಟ್ 9 ರಂದು ‘ಲವ್ ಯೂ ರಚ್ಚು’ ಚಿತ್ರದ ಚಿತ್ರೀಕರಣದ ವೇಳೆ ರಾಮನಗರ ತಾಲೂಕಿನ ಜೋಗನಪಾಳ್ಯ ಗ್ರಾಮದ ಬಳಿ ಕ್ರೇನ್ 11 ಕೆವಿ ವಿದ್ಯುತ್ ತಂತಿಗೆ ತಗುಲಿ ಫೈಟರ್ ವಿವೇಕ್ (27)ಸಾವನ್ನಪ್ಪಿದ್ದರು. ಅಲ್ಲದೆ ತಂಡದ ಮತ್ತೊಬ್ಬ ರಂಜಿತ್ ಎಂಬುವವರಿಗೂ ಗಂಭೀರ ಗಾಯವಾಗಿತ್ತು. ಈ ಸಂಬಂಧ ಬಿಡದಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಂದು ಸಂಜೆ 6 ಗಂಟೆಗೆ  ಠಾಣೆಗೆ ಹಾಜರಾಗಿ ಈ ಸಂಬಂಧ ಹೇಳಿಕೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ..

ಈ ಪ್ರಕರಣ ಸಂಬಂಧ  ಚಿತ್ರದ ನಿರ್ದೇಶಕ ಶಂಕರಯ್ಯ, ನಿರ್ಮಾಪಕ ಗುರುದೇಶ್ ಪಾಂಡೆ, ಸಾಹಸ ನಿರ್ದೇಶಕ ವಿನೋದ್ ಕುಮಾರ್, ಮ್ಯಾನೇಜರ್ ಫರ್ನಾಂಡೀಸ್, ಕ್ರೇನ್ ಆಪರೇಟರ್ ಮಹದೇವ್ ವಿರುದ್ಧ ಬಿಡದಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಈಗಾಗಲೇ ಶಂಕರಯ್ಯ, ವಿನೋದ್ ಕುಮಾರ್ ಹಾಗೂ ಮಹದೇವ್ ಅವರ ಬಂಧನವಾಗಿದ್ದು, ಚಿತ್ರದ ನಿರ್ಮಾಪಕ ಗುರುದೇಶ್ ಪಾಂಡೆ ಹಾಗೂ ಫರ್ನಾಂಡೀಸ್ ತಲೆ ಮರೆಸಿಕೊಂಡಿದ್ದಾರೆ.

ಪ್ರಕರಣದ ಕುರಿತು ಮೌನ ಮುರಿದಿದ್ದ ರಚಿತಾ: ಫೈಟರ್​ ವಿವೇಕ್ ಸಾವಿನ ಕುರಿತು ಸಾಮಾಜಿಕ ಜಾಲತಾಣದಲ್ಲಿ ರಚಿತಾ ರಾಮ್ ವಿರುದ್ಧ ಹಲವು ಆರೋಪಗಳನ್ನು ಮಾಡಲಾಗಿತ್ತು. ಈ ಕುರಿತಂತೆ ರಚಿತಾ ಇನ್ಸ್ಟಾಗ್ರಾಂನಲ್ಲಿ ದೀರ್ಘ ಪೋಸ್ಟ್​ನಲ್ಲಿ ಉತ್ತರ ಬರೆದು, ತಮ್ಮ ವಿಚಾರಗಳನ್ನು ಹಂಚಿಕೊಂಡಿದ್ದರು.

ಎಲ್ಲರಿಗೂ ನಮಸ್ಕಾರ. ನೀವೆಲ್ಲರೂ ಕ್ಷೇಮವಾಗಿದ್ದೀರಿ ಅಂತ ನಂಬಿದ್ದೇನೆ. ದಯವಿಟ್ಟು ಎಲ್ಲರೂ ಹುಷಾರಾಗಿರಿ ಅಂತ ನಾನು ರಿಕ್ವೆಸ್ಟ್​ ಮಾಡ್ತೀನಿ. ಲವ್​ ಯೂ ರಚ್ಚು ಸಿನಿಮಾ ಸೆಟ್​ನಲ್ಲಿ ಒಂದು ನಡೆಯಬಾರದ ಘಟನೆ ನಡೆದಾಗಿನಿಂದ ಆ ಆಘಾತ ನನ್ನನ್ನು ಸೈಲೆಂಟ್​ ಆಗಿರುವಂತೆ ಮಾಡಿತ್ತು. ನನ್ನ ಮೌನ ಕೆಲವರಿಗೆ ತಪ್ಪಾಗಿ ಅರ್ಥವಾಗಿದೆ. ತಪ್ಪಾಗಿ ಬಳಕೆ ಆಗ್ತಾ ಇದೆ. ಇದು ನನಗೆ ನಿಜಕ್ಕೂ ನೋವು ಕೊಟ್ಟಿದೆ ಎಂದು ರಚಿತಾ ರಾಮ್​ ಬರೆದುಕೊಂಡಿದ್ದರು.

ದುರ್ಘಟನೆ ನಡೆದಾಗ ನಾನು ಸೆಟ್​ನಲ್ಲಿ ಇರಲಿಲ್ಲ. ಅದಂತೂ ಸತ್ಯ. ಆಗಸ್ಟ್​ 2ನೇ ತಾರೀಕಿನಿಂದ ನಾನು ‘ಶಬರಿ’ ಸಿನಿಮಾ ಶೂಟಿಂಗ್​ಗೋಸ್ಕರ ಮೈಸೂರಿನಲ್ಲಿದ್ದೆ. ಸತ್ಯವನ್ನು ಒಂದೇ ಒಂದು ಸಲ ಪುನರ್​ ಪರಿಶೀಲಿಸಿದ್ರೆ ನನ್ನ ಬಗ್ಗೆ ಕೆಟ್ಟ ಕಮೆಂಟ್​ಗಳನ್ನು ಬರೆಯುವ, ನನ್ನ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುವ ಪ್ರಮೇಯ ಒದಗಿಬರುತ್ತಿರಲಿಲ್ಲ ಎನಿಸುತ್ತೆ’ ಎಂದು ರಚಿತಾ ಹೇಳಿದ್ದರು.

‘ಆ ಜಾಗದಲ್ಲಿ ನಾನು ಇರಲಿ, ಇಲ್ಲದಿರಲಿ. ನಮ್ಮ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದ ಸಹೋದ್ಯೋಗಿಯೊಬ್ಬರು ದುರ್ಘಟನೆಗೆ ಬಲಿಯಾಗಿದ್ದಾರೆ ಎನ್ನುವ ನೋವು ನನ್ನನ್ನು ಕಾಡ್ತಿದೆ. ಆ ಕುಟುಂಬಕ್ಕೆ ಆಗಿರುವ ನಷ್ಟಕ್ಕೆ ನನ್ನ ವಿಷಾದವಿದೆ. ಈ ದುಃಖವನ್ನು ಭರಿಸುವ ಶಕ್ತಿ ಆ ಕುಟುಂಬಕ್ಕೆ ಭಗವಂತ ನೀಡಲಿ ಅಂತ ನಾನು ಬೇಡಿಕೊಳ್ತೀನಿ.

ನನ್ನ ಬೆಳೆಸಿರುವ ಜನರು ನನ್ನ ಮಾತುಗಳನ್ನು, ನನ್ನನ್ನು ನಂಬುತ್ತಾರೆ ಅಂತ ನಂಬಿದ್ದೇನೆ. ಆರೋಪಗಳು ಏನೇ ಇದ್ರೂ, ಸರಿ-ತಪ್ಪುಗಳ ಲೆಕ್ಕ ಆ ಭಗವಂತನ ಬಳಿ ಇರುತ್ತೆ ಅಂತಾನೂ ನಂಬಿದ್ದೇನೆ’ ಎಂದು ರಚಿತಾ ಪೋಸ್ಟ್​ ಮಾಡಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು