NEWSನಮ್ಮರಾಜ್ಯಶಿಕ್ಷಣ-

ಫೀಸ್ ಇಳಿಸಿ ಮಕ್ಕಳ ಭವಿಷ್ಯ ಉಳಿಸಿ:ಸರ್ಕಾರದ ವಿರುದ್ಧ ಜು.5ರಿಂದ ರಾಜ್ಯಾದ್ಯಂತ ಎಎಪಿ ಸಹಿ ಸಂಗ್ರಹ ಅಭಿಯಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪ್ರಸ್ತುತ ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಅನೇಕ ಗೊಂದಲಗಳ ಬಗ್ಗೆ ಫೀಸ್ ಇಳಿಸಿ ಮಕ್ಕಳ ಭವಿಷ್ಯ ಉಳಿಸಿ ಎಂಬ ಆಮ್ ಆದ್ಮಿ ಪಕ್ಷದ ಜನಜಾಗೃತಿ ಹಾಗೂ ಸಹಿ ಸಂಗ್ರಹ ಅಭಿಯಾನವನ್ನು ರಾಜ್ಯಾದ್ಯಂತ ಜು.5ರಂದು ಚಾಲನೆ ನೀಡಲಾಗುವುದು ಎಂದು ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ತಿಳಿಸಿದ್ದಾರೆ.

ಶುಕ್ರವಾರ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ರಾಜ್ಯದಲ್ಲಿ ತಲೆದೋರಿರುವ ಶೈಕ್ಷಣಿಕ ಶುಲ್ಕಗಳು , ಸರ್ಕಾರಿ ಶಾಲೆಗಳ ದುರ್ವ್ಯವಸ್ಥೆ , ಖಾಸಗಿ ಶಿಕ್ಷಕರ ಸಮಸ್ಯೆ , ಶುಲ್ಕ ನಿಯಂತ್ರಣ ಪ್ರಾಧಿಕಾರದ ರಚನೆ ಸೇರಿದಂತೆ ಹಲವಾರು ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರವು ಸಂಪೂರ್ಣ ವೈಫಲ್ಯಗೊಂಡಿದೆ ಎಂದು ದೂರಿದರು.

ಸರ್ಕಾರದ ಹೊಣೆಗೇಡಿತನದ ಪರಿಣಾಮವಾಗಿ ಇಂದು ರಾಜ್ಯದಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ವ್ಯವಸ್ಥೆ ಸಾಕಷ್ಟು ಸಂಕಷ್ಟಕ್ಕೀಡಾಗಿದೆ. ಶಾಲಾ ಶುಲ್ಕಗಳ ವಿಚಾರದಲ್ಲಿಯೂ ಸಹ ಪೋಷಕ ವರ್ಗ ಸಮಸ್ಯೆಗೀಡಾಗಿದೆ. ಈ ಎಲ್ಲ ಗೊಂದಲಗಳಿಂದಾಗಿ ಲಕ್ಷಾಂತರ ಮಕ್ಕಳು ಶಿಕ್ಷಣ ವಂಚಿತರಾಗುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರದ ಈ ಎಲ್ಲಾ ವೈಫಲ್ಯಗಳ ವಿರುದ್ಧ ಆಮ್ ಆದ್ಮಿ ಪಕ್ಷದ ಸಾವಿರಾರು ಕಾರ್ಯಕರ್ತರು ಸತತ 15 ದಿವಸಗಳ ಕಾಲ ರಾಜ್ಯದಾದ್ಯಂತ ಎಲ್ಲ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಕನಿಷ್ಠ 5 ಲಕ್ಷ ಮನೆಗಳಿಗೆ ತೆರಳಿ ಸಹಿ ಸಂಗ್ರಹಣೆ ಹಾಗೂ ಬೃಹತ್ ಜನಾಂದೋಲನ ಕಾರ್ಯ ಕ್ರಮವನ್ನು ನಡೆಸುತ್ತೇವೆ ಎಂದರು.

ಕರಪತ್ರ, ಎಲ್.ಇ.ಡಿ ವಾಹನ, ವಿಚಾರಗೋಷ್ಠಿಗಳು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಈ ಅಭಿಯಾನವನ್ನು ಯಶಸ್ವಿಯಾಗಿಸಲು ಈಗಾಗಲೇ ಹಲವು ರೂಪುರೇಷೆಗಳನ್ನು ಪಕ್ಷವು ಕೈಗೊಂಡಿದೆ ಎಂದು ತಿಳಿಸಿದರು.

ಈ ಬೃಹತ್ ಅಭಿಯಾನದ ಭಾಗವಾಗಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಅವರು ಜುಲೈ 5ರ ಸೋಮವಾರ ಬೆಳಗ್ಗೆ 9 ಗಂಟೆಗೆ ಬೆಂಗಳೂರಿನ ಸಂಪಂಗಿ ರಾಮನಗರ ವಾರ್ಡ್ ನಲ್ಲಿ ಮನೆ ಮನೆಗೆ ತೆರಳುವ ಮೂಲಕ ಚಾಲನೆ ನೀಡಲಿದ್ದಾರೆ.

ಜತೆಗೆ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ, ಪ್ರಚಾರ ಸಮಿತಿ ಅಧ್ಯಕ್ಷೆ ಶಾಂತಲಾ ದಾಮ್ಲೆ ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಇದೇ ಸಮಯದಲ್ಲಿ ರಾಜ್ಯದಾದ್ಯಂತ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಸಹ ಈ ಅಭಿಯಾನಕ್ಕೆ ಚಾಲನೆ ದೊರಕಲಿದೆ ಎಂದು ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ತಿಳಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು