NEWSದೇಶ-ವಿದೇಶನಮ್ಮರಾಜ್ಯ

ಫೆ.1ರ ಬಜೆಟ್ ಬಳಿಕ ತೀವ್ರ ರೀತಿಯಲ್ಲಿ ಷೇರು ಮಾರುಕಟ್ಟೆ ಕುಸಿಯುತ್ತದೆಯೇ? ಸ್ಪಷ್ಟನೆ ನೀಡಿದ ಫಂಡ್ ಮ್ಯಾನೇಜರ್‌

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕಳೆದ ಆರು ತಿಂಗಳಿಂದಲೂ ಸಾಕಷ್ಟು ಅಲುಗಾಟದಲ್ಲಿರುವ ಷೇರು ಮಾರುಕಟ್ಟೆ ಫೆಬ್ರುವರಿ 1ರ ಬಜೆಟ್ ಬಳಿಕ ತೀವ್ರ ರೀತಿಯಲ್ಲಿ ಕುಸಿತ ಕಾಣಬಹುದು ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ವಿಚಾರವಾಗಿ ಹಲವು ಫಂಡ್ ಮ್ಯಾನೇಜರ್‌ಗಳು ಹಾಗೂ ಆರ್ಥಿಕ ತಜ್ಞರು ತಮ್ಮ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು ಅವರ ಪ್ರಕಾರ, ಬಜೆಟ್ ಬಳಿಕ ಮಾರ್ಕೆಟ್ ಕರೆಕ್ಷನ್ ಸಣ್ಣ ಮಟ್ಟದಲ್ಲಿ ಆಗಬಹುದು. ಆದರೆ, ದೊಡ್ಡ ಮಟ್ಟದಲ್ಲಿ ಮಾರುಕಟ್ಟೆ ಕುಸಿಯುವ ಸಾಧ್ಯತೆ ಇಲ್ಲ ಎಂದು ಬಹುತೇಕ ಎಲ್ಲರು ಹೇಳಿಕೆ ನೀಡಿದ್ದಾರೆ.

ಇನ್ನು ಈಗಾಗಲೇ ಷೇರು ಮಾರುಕಟ್ಟೆ ಸಾಕಷ್ಟು ಪ್ರತಿರೋಧ ತೋರಿದೆ. ಹೂಡಿಕೆದಾರರು ಸಕಾರಾತ್ಮಕವಾಗಿ ಭಾಗಿಯಾಗುತ್ತಿದ್ದಾರೆ. ಮೂಲಭೂತ ಅಂಶಗಳು ಉತ್ತಮಗೊಳ್ಳುತ್ತಿವೆ. ಹಲವು ಷೇರುಗಳ ಮೌಲ್ಯ ಅಧಿಕ ಮಟ್ಟದಲ್ಲಿದ್ದರೂ, ಅತಿರೇಕ ಎನಿಸುವ ಮಟ್ಟದಲ್ಲಿಲ್ಲ ಎಂದು ಹೇಳಿದ್ದಾರೆ.

ಇತ್ತ ಈಗಲೂ ಸಹ ಕಾರ್ಪೊರೇಟ್ ಸಂಸ್ಥೆಗಳ ಆದಾಯ ಉತ್ತಮವಾಗಿಯೇ ಇದೆ. ವಿದೇಶೀ ಸಾಂಸ್ಥಿಕ ಹೂಡಿಕೆದಾರರ ಉಪಸ್ಥಿತಿ ಕಡಿಮೆ. ಇದು ಮಾರುಕಟ್ಟೆಯ ಆರೋಗ್ಯ ಸ್ಥಿತಿಗೆ ದ್ಯೋತಕವಾಗಿದೆ. ಕಿರು ಅವಧಿಯಲ್ಲಿ ಮಾರುಕಟ್ಟೆಯಲ್ಲಿ ವಿಚಲನೆಗಳಾದರೂ, ಬಜೆಟ್​ನಲ್ಲಿ ಹಣಕಾಸು ಶಿಸ್ತು ಕಾಯ್ದುಕೊಂಡರೆ ಮತ್ತು ಇನ್​ಫ್ರಾಸ್ಟ್ರಕ್ಚರ್​​ಗಳಲ್ಲಿ ಹೂಡಿಕೆಗೆ ಒತ್ತುಕೊಟ್ಟರೆ ದೀರ್ಘಾವಧಿಯಲ್ಲಿ ಮಾರುಕಟ್ಟೆ ಸರಾಗವಾಗಿರುತ್ತದೆ ಎನ್ನುವುದು ಫಂಡ್ ಮ್ಯಾನೇಜರ್‌ಗಳ ಅಭಿಪ್ರಾಯವಾಗಿದೆ.

ಡೊನಾಲ್ಡ್ ಟ್ರಂಪ್ ಅವರು ಅಮೆರಿಕ ಅಧ್ಯಕ್ಷರಾಗಿರುವುದು ಭಾರತದ ಮಾರುಕಟ್ಟೆಯಲ್ಲಿ ಅನಿಶ್ಚಿತ ಪರಿಣಾಮ ತರುವ ಸಾಧ್ಯತೆ ಇದೆ. ಆದರೆ, ಭಾರತದಲ್ಲಿ ದೇಶೀಯವಾಗಿ ಉತ್ತಮವಾಗಿರುವ ಅಂಶಗಳು ಬಾಹ್ಯ ಆಘಾತಗಳನ್ನು ನಿಷ್ಕ್ರಿಯಗೊಳಿಸಬಲ್ಲುವು. ಅಮೆರಿಕದ ನೀತಿಗಳು ದೀರ್ಘಾವಧಿಯಲ್ಲಿ ಭಾರತದ ಮೇಲೆ ಬೀರಬಹುದಾದ ಪರಿಣಾಮ ಕಡಿಮೆಯೇ ಇರುತ್ತದೆ ಎನ್ನಲಾಗಿದೆ.

ಇಪಿಎಫ್​ಒ ಕನಿಷ್ಠ ಪಿಂಚಣಿಯನ್ನು 1,000 ರೂ.ಗಳಿಂದ 5,000 ರೂ.ಗೆ ಏರಿಸಬಹುದು. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 10 ಲಕ್ಷ ರೂ.ಗೆ ಏರಿಸಬಹುದು. ಅತಿ ಶ್ರೀಮಂತರಿಗೆ ಹೆಚ್ಚುವರಿ ಶೇ. 2ರಷ್ಟು ತೆರಿಗೆ ಹಾಕಬಹುದು. ಆ ಹಣವನ್ನು ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಬಳಸಬಹುದು ಎಂದು ಹೇಳುತ್ತಿದ್ದಾರೆ.

ಒಟ್ಟಾರೆ ಫೆಬ್ರುವರಿ 1ರ ಬಜೆಟ್ ಬಳಿಕ ತೀವ್ರ ರೀತಿಯಲ್ಲಿ ಷೇರು ಮಾರುಕಟ್ಟೆ ಕುಸಿತ ಕಾಣಬಹುದು ಎನ್ನುವುದಂತ ಸದ್ಯಕ್ಕೆ ದೂರದ ಮಾತೆ ಎಂದು ಹೇಳುವ ಮೂಲಕ ಯಾವುದೇ ತೊಂದರೆ ಆಗದು ಎಂಬ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ