NEWSನಮ್ಮರಾಜ್ಯರಾಜಕೀಯ

ಬಿಎಂಟಿಸಿ ಮಾಜಿ ಕಂಡಕ್ಟರ್‌ ಸೇರಿ 60 ಅಭ್ಯರ್ಥಿಗಳನ್ನೊಳಗೊಂಡ ಎರಡನೇ ಪಟ್ಟಿ ಬಿಡುಗಡೆ ಮಾಡಿದ ಆಮ್‌ ಆದ್ಮಿ ಪಾರ್ಟಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಳೆದ ವಾರವಷ್ಟೇ 80 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಆಮ್‌ ಆದ್ಮಿ ಪಾರ್ಟಿಯು 60 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿತು.

ಇಂದು (ಮಾ.31) ನಗರದಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ದಿಲೀಪ್‌ ಪಾಂಡೆ ಹಾಗೂ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು.

ಬಳಿಕ ಮಾತನಾಡಿದ ಪೃಥ್ವಿ ರೆಡ್ಡಿ, “ಬೇರೆಲ್ಲ ಪಕ್ಷಗಳಿಗಿಂತ ಮೊದಲೇ ನಾವು ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದೆವು. ನಂತರ ಪ್ರಣಾಳಿಕೆಯನ್ನೂ ಬಿಡುಗಡೆ ಮಾಡಿದ್ದೆವು. ಈಗ 60 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನೂ ಬಿಡುಗಡೆ ಮಾಡಿದ್ದೇವೆ. ಬೇರೆಲ್ಲ ಪಕ್ಷಗಳಿಗಿಂತ ನಾವು ಮುಂದಿದ್ದೇವೆ ಎಂಬುದನ್ನು ಇದು ಸೂಚಿಸುತ್ತದೆ ಎಂದರು.

ಇನ್ನು ಆಮ್‌ ಆದ್ಮಿ ಪಾರ್ಟಿಯು ಜನಸಾಮಾನ್ಯರಿಗೆ ಅವಕಾಶ ನೀಡುತ್ತಿದೆ. ಮೊದಲಪಟ್ಟಿಯಂತೆ ಎರಡನೇ ಪಟ್ಟಿಯಲ್ಲಿ ಕೂಡ ಅಭ್ಯರ್ಥಿಗಳ ಸರಾಸರಿ ವಯಸ್ಸು 45 ದಾಟಿಲ್ಲ. ಎರಡು ಪಟ್ಟಿಯಲ್ಲಿ ಒಟ್ಟು 14 ರೈತರಿಗೆ, 11 ಮಹಿಳೆಯರಿಗೆ, 18 ವಕೀಲರು, 6 ವೈದ್ಯರು, 23 ಇಂಜಿನಿಯರ್‌ಗಳು ಹಾಗೂ 4 ಐಟಿ ವೃತ್ತಿಪರರು ಹಾಗೂ ಐದು ಮಂದಿ ಡಾಕ್ಟರೇಟ್‌ ಪಡೆದವರು ಇದ್ದಾರೆ. 29 ಜನರು ಸ್ನಾತಕೋತ್ತರ ಪದವೀಧರರು, 68 ಪದವೀಧರರು, 6 ಎಂಬಿಎ ಪದವೀಧರರನ್ನು ಈ ಎರಡು ಪಟ್ಟಿಗಳು ಒಳಗೊಂಡಿವೆ ಎಂದು ಹೇಳಿದರು.

ಬಿಎಂಟಿಸಿ ಮಾಜಿ ಕಂಡಕ್ಟರ್‌ಗೆ ಕೂಡ ನಾವು ಟಿಕೆಟ್‌ ಕೊಡುತ್ತಿದ್ದು, ಇದು ರಾಜ್ಯದ ರಾಜಕೀಯ ಇತಿಹಾಸದಲ್ಲೇ ಮಹತ್ವದ ಬೆಳವಣಿಗೆಯಾಗಿದೆ. ಎರಡನೇ ಪಟ್ಟಿಯ 60 ಅಭ್ಯರ್ಥಿಗಳಲ್ಲಿ 59 ಅಭ್ಯರ್ಥಿಗಳು ಇದೇ ಮೊದಲ ಬಾರಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ರಾಜ್ಯದಲ್ಲಿ ನಡೆದ ಸಮೀಕ್ಷೆಯಲ್ಲಿ 46% ಜನರು ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಬದಲು ಹೊಸ ಪಕ್ಷ ಬೇಕೆಂದು ಅಭಿಪ್ರಾಯಪಟ್ಟಿದ್ದಾರೆ.

ನಾವು ಹೊಸ ಪಕ್ಷ ಮಾತ್ರವಲ್ಲದೇ ಹೊಸ ಮುಖಗಳನ್ನು ರಾಜಕೀಯಕ್ಕೆ ಕರೆತಂದು ಜನರಿಗೆ ಆಯ್ಕೆ ನೀಡಿದ್ದೇವೆ. ಪಂಜಾಬ್‌ ಚುನಾವಣೆಯಲ್ಲಿ ಅಲ್ಲಿನ ಆಗಿನ ಮುಖ್ಯಮಂತ್ರಿಯನ್ನು ಮೊಬೈಲ್‌ ಶಾಪ್‌ನಲ್ಲಿ ಕೆಲಸ ಮಾಡುವವರೊಬ್ಬರು ಸೋಲಿಸಿದ್ದರು. ನಾವು ಅದರಿಂದ ಸ್ಫೂರ್ತಿ ಪಡೆದಿದ್ದು, ಇಲ್ಲಿಯೂ ಅಂತಹ ಮ್ಯಾಜಿಕ್‌ಗಳು ನಡೆಯುವ ನಿರೀಕ್ಷೆಯಿದೆ ಎಂದು ಪೃಥ್ವಿ ರೆಡ್ಡಿ ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್‌ ಕಾಳಪ್ಪ, ರಾಜ್ಯ ಉಪಾಧ್ಯಕ್ಷರಾದ ವಿಜಯ್‌ ಶರ್ಮ ಹಾಗೂ ವಕ್ತಾರರಾದ ಉಷಾ ಮೋಹನ್ ಭಾಗವಹಿಸಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ