Please assign a menu to the primary menu location under menu

NEWSನಮ್ಮಜಿಲ್ಲೆರಾಜಕೀಯ

ಬಿಎಂಟಿಸಿ ಯಲ್ಲಿ ಟಿಕೆಟ್ ರಹಿತ ಪ್ರಯಾಣ:  9.23 ಲಕ್ಷ ರೂ. ದಂಡ

ಸಂಸ್ಥೆಯ ನಿರ್ವಾಹಕರ ವಿರುದ್ಧ 2373 ಪ್ರಕರಣಗ ದಾಖಲು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೆಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡಿದವರಿಂದ   9.23 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.

ಅನಧಿಕೃತವಾಗಿ ಪ್ರಯಾಣ ಮಾಡುವುದು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ಸಂಸ್ಥೆಯ ತನಿಖಾ ತಂಡಗಳು ಫೆಬ್ರವರಿ-2020 ರ ಮಾಹೆಯಲ್ಲಿ  ಒಟ್ಟು 17,134 ಟ್ರಿಪ್ ಗಳನ್ನು ತಪಾಸಿಸಿ, 5127 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆಹಚ್ಚಿ, ಅವರಿಂದ ಒಟ್ಟು   8,96,150 ರೂ.ದಂಡ ವಸೂಲಿ ಮಾಡಿ ಸಂಸ್ಥೆಯ ನಿರ್ವಾಹಕರ ವಿರುದ್ದ 2373 ಪ್ರಕರಣಗಳನ್ನು ದಾಖಲಿಸಿದ್ದಾರೆ.

ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 274 ಪುರುಷ ಪ್ರಯಾಣಿಕರಿಂದ ಒಟ್ಟು  27,400 ರೂ. ಗಳನ್ನು ಮೋಟಾರು ವಾಹನ ಕಾಯ್ದೆ 1988 ಕಲಂ 177 ಮತ್ತು 94 ರ ಪ್ರಕಾರ ದಂಡ ವಿಧಿಸಲಾಗಿದೆ.

ಒಟ್ಟಾರೆ ಫೆಬ್ರವರಿಯಲ್ಲಿ 5401 ಪ್ರಯಾಣಿಕರಿಂದ ಒಟ್ಟು   9,23,550 ರೂ. ದಂಡವನ್ನು ವಸೂಲಿ ಮಾಡಲಾಗಿದೆ.

ಪ್ರಯಾಣಿಕರು ಬೆಂಗಳುರು ಮಹಾನಗರ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೆಟ್, ದಿನದ ಪಾಸು,  ಮಾಸಿಕ ಪಾಸುಗಳನ್ನು ಹೊಂದಿ ಪ್ರಯಾಣಿಸುವುದು. ಇದರಿಂದ ಅನಗತ್ಯ ದಂಡ ಕಟ್ಟುವುದನ್ನು ತಡೆಯಬಹುದಾಗಿದೆ . ಜತೆಗೆ  ಇಂತಹ ಪ್ರವೃತ್ತಿಯಿಂದ ಸಂಸ್ಥೆಯು ಉತ್ತಮ ಸೇವೆಯನ್ನು ಪ್ರಯಾಣಿಕರಿಗೆ ನೀಡಲು ಸಹಾಯವಾಗುತ್ತದೆ. ಮಹಿಳಾ ಪ್ರಯಾಣಿಕರಿಗೆಂದೇ  ಮೀಸಲಾಗಿರುವ ಅಸನಗಳಲ್ಲಿ ಪುರುಷ ಪ್ರಯಾಣಿಕರು ಆಸನಗಳನ್ನು ತೆರವು ಮಾಡಿಕೊಡುವ ಮೂಲಕ ಅವರಿಗೆ ಕುಳಿತುಕೊಳ್ಳಲು ಅವಕಾಶ ನೀಡಬೇಕೆಂದು ಸಂಸ್ಥೆ ಅಧಿಕಾರಿಗಳು ಮನವಿ ಮಾಡಿದ್ದಾರೆ. .

Leave a Reply

error: Content is protected !!
LATEST
ಹೆಂಡತಿ, ಮಾವನ ಕಾಟ: ರೈಲಿಗೆ ತಲೆಕೊಟ್ಟು ಹೆಡ್‌ಕಾನ್‌ಸ್ಟೇಬಲ್ ಆತ್ಮಹತ್ಯೆ 9 ಸಾವಿರ ರೂ. ಲಂಚ ಪ್ರಕರಣ: ಪಿಡಿಒಗೆ 3 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ.ದಂಡ KSRTC ತುಮಕೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಚಾಲಕನಿಗೆ ಧೈರ್ಯ ತುಂಬಿದ ಡಿಸಿ, ಅಧಿಕಾರಿಗಳು KSRTC: ಡಿ.31ರ ಮುಷ್ಕರ ಬೆಂಬಲಿಸುವಂತೆ ಕೂಟಕ್ಕೆ ಜಂಟಿ ಕ್ರಿಯಾ ಸಮಿತಿ ಮನವಿ ಸರ್ಕಾರದ ನಡೆಯೇ  BMTC ಆರ್ಥಿಕವಾಗಿ ಕುಸಿಯಲು ಕಾರಣ: ವರದಿ ಕೊಟ್ಟ CAG KSRTC ಕುಣಿಗಲ್‌: ಹಲ್ಲೆಕೋರರ ವಿರುದ್ಧ ಕ್ರಮ ಜರುಗಿಸದಿರುವುದಕ್ಕೆ ಮನನೊಂದ ಚಾಲಕ ಆತ್ಮಹತ್ಯೆಗೆ ಯತ್ನ KSRTC: ಈ ಅಧಿವೇಶನದಲ್ಲಾದರೂ ಸಿಎಂ ಸರಿ ಸಮಾನ ವೇತನ ಬಗ್ಗೆ ದಿಟ್ಟ ಹೆಜ್ಜೆ ಇಡಲಿ BMTC: ಆಧಾರ್‌ ಕಾರ್ಡ್‌ ಯಾವ ಭಾಷೆಯಲ್ಲೇ ಇರಲಿ ಕರ್ನಾಟಕದ ವಿಳಾಸವಿದ್ದರೆ ಉಚಿತ ಪ್ರಯಾಣ ಹಾವೇರಿ: ಸರ್ಕಾರಿ ಬಸ್ ಹತ್ತಲು ಹೋದ ವೃದ್ಧೆ ಕಾಲುಗಳ ಮೇಲೆ ಹಿಂಬದಿ ಚಕ್ರ ಹರಿದು ಕಾಲುಗಳು ಕಟ್‌ KSRTC ಮಡಿಕೇರಿ: ಸಹೋದ್ಯೋಗಿ ಕಂಡಕ್ಟರ್‌ ಕೊಲ್ಲುವ ಬೆದರಿಕೆ ಹಾಕಿ ಗಾಳಿಯಲ್ಲಿ ಗುಂಡ್ಹಾರಿಸಿದ ಡ್ರೈವರ್‌ ಬಂಧನ