NEWSನಮ್ಮರಾಜ್ಯಸಂಸ್ಕೃತಿ

ಬಿಎಂಟಿಸಿ 20ನೇ ಘಟಕ- ಕೆಕೆಆರ್‌ಟಿಸಿ ವಿಜಯಪುರ ಘಟಕದಲ್ಲಿ ಮಹಿಳಾ ದಿನಾಚರಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹೆಣ್ಣು ಇಂದು ಎಲ್ಲ ರಂಗದಲ್ಲೂ ತನ್ನ ಛಾಪನ್ನು ಮೂಡಿಸಿದ್ದಾಳೆ. ಹೀಗಾಗಿ ಹೆಣ್ಣಿಲ್ಲದ ಜಗತ್ತನ್ನು ಇಂದು ಉಹಿಸಿಕೊಳ್ಳುವುದು ಆಸಾಧ್ಯವಾಗಿದೆ ಎಂದು ಬಿಎಂಟಿಸಿ ಘಟಕ 20ರ ವ್ಯವಸ್ಥಾಪಕ ಬ್ರಹ್ಮದೇವ ತಿಳಿಸಿದ್ದಾರೆ.

ಇಂದು ಬನಶಂಕರಿಯಲ್ಲಿರುವ ಘಟಕದಲ್ಲಿ ಆಯೋಜಿಸಿದ್ದ “ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ”ಯಲ್ಲಿ ಮಾತನಾಡಿದ ಅವರು, ಮಹಿಳೆಯು ಕುಟುಂಬದಲ್ಲಿ ಹಲವಾರು ಪಾತ್ರಗಳನ್ನು ಸಮರ್ಥವಾಗಿ ನಿರ್ವಹಿಸುವುದರೊಂದಿಗೆ ಉದ್ಯೋಗ ಕ್ಷೇತ್ರದಲ್ಲೂ ಜವಾಬ್ದಾರಿಯುತದಿಂದ ಕಾರ್ಯನಿರ್ವಹಿಸಿ ಉತ್ತಮ ಸ್ಥಾನ ಪಡೆಯುವುದು ಹೆಣ್ಣಿಗೆ ಜನ್ಮದತ್ತವಾಗಿ ಬಂದ ಒಂದು ಕಲೆಯಾಗಿದೆ ಎಂದರು.

ಮಹಿಳೆಯರು ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಆರ್ಥಿಕವಾಗಿ ಸೇರಿದಂತೆ ಎಲ್ಲ ರಂಗಗಳಲ್ಲೂ ಮುಂಚೂಣಿಯಲ್ಲಿದ್ದಾರೆ. ಆದರೂ ಹಲವು ಮಹಿಳೆಯರು ಸಮಸ್ಯೆಗಳನ್ನು ಎದುರಿಸುತ್ತಿದ್ದು ಅವರು ಅಭಿವೃದ್ಧಿ ಹೊಂದಲು ಸರ್ಕಾರ ಜಾರಿಗೊಳಿಸಿರುವ ಮಹಿಳಾ ಸಬಲೀಕರಣ ಕಾರ್ಯಕ್ರಮಗಳ ಸೌಲಭ್ಯಗಳನ್ನು ಪಡೆದುಕೊಳ್ಳುವ ಮೂಲಕ ಸ್ವಾವಲಂಬಿಗಳಾಗಬೇಕು ಎಂದು ಹೇಳಿದರು.

ಇನ್ನು ಸಾರಿಗೆ ನಿಗಮಗಳಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿರುವ ಮಹಿಳೆಯರು ಭಾರಿ ಒತ್ತಡದಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ವೇಳೆ ತಾಳ್ಮೆಕಳ್ಳೆದುಕೊಳ್ಳುವುದು ಸಾಮಾನ್ಯ ಆದರೆ, ಒತ್ತಡದ ನಡುವೆ ಆದಷ್ಟು ತಾಳ್ಮೆಯನ್ನು ಕಳೆದುಕೊಳ್ಳದೆ ಕರ್ತವ್ಯ ನಿರ್ವಹಿಸಬೇಕು ಎಂದು ಕಿವಿ ಮಾತು ಹೇಳಿದರು.

ಈ ಕಾರ್ಯಕ್ರಮದಲ್ಲಿ, ಎಟಿಎಸ್‌ ದೀಪಾ, ಟಿಐಗಳಾದ ರೂಪಾ, ಮಹದೇವ್‌ ಹೊನ್ನಾಳಿ, ನಿರ್ವಾಹಕಿಯರು, ತಾಂತ್ರಿಕ ಶಿಲ್ಪಿಗಳು, ಕಚೇರಿ ಮತ್ತು ಭದ್ರತಾ ಸಿಬ್ಬಂದಿ ಸೇರಿದಂತೆ ಇತರರು ಭಾಗವಹಿಸಿದ್ದರು.

ಸಾರಿಗೆ ಸಂಸ್ಥೆಯ ಶುಚಿಗಾರರಿಗೆ ಸನ್ಮಾನ  

ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ವಿಜಯಪುರ ಘಟಕದಲ್ಲಿ ಕೆಲಸ ನಿರ್ವಹಿಸುತ್ತಿರುವ ವಿಶೇಷವಾಗಿ ಶುಚಿಗಾರರಿಗೆ ಸನ್ಮಾನ ಮಾಡಲಾಯಿತು.

ಈ ಸಮಾರಂಭದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಎ.ಮುಲ್ಲಾ, ವಿಭಾಗೀಯ ತಾಂತ್ರಿಕ ಶಿಲ್ಪಿ ಎ.ಎಚ್. ಮಧಬಾವಿ, ವಿಭಾಗೀಯ ಕಚೇರಿಯ ಅಧಿಕಾರಿಗಳು, ಘಟಕ ವ್ಯವಸ್ಥಾಪಕರು, ಕಾರ್ಮಿಕ ಮುಖಂಡರು, ಮಹಿಳಾ ಕಾರ್ಮಿಕರು ಮತ್ತಿತರರು ಭಾಗವಹಿಸಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು