ಬೆಂಗಳೂರು: ದಕ್ಷಿಣ ವಿಧಾನಸಭಾ ಕ್ಷೇತ್ರದ ಅಮ್ ಆದ್ಮಿ ಪಾರ್ಟಿಯ ಅಭ್ಯರ್ಥಿಯಾಗಿರುವ ಅಶೋಕ್ ಮೃತ್ಯುಂಜಯ ಅವರು ಇಂದು ತಮ್ಮ ಕಾರ್ಯಕರ್ತರೊಂದಿಗೆ ನಾಮಪತ್ರ ಸಲ್ಲಿಸಿದರು.
ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಮ್ ಆದ್ಮಿ ಪಕ್ಷದ ಅಭ್ಯರ್ಥಿ ಅಶೋಕ್ ಮೃತ್ಯುಂಜಯ ಅವರು ನಾಮಪತ್ರ ಸಲ್ಲಿಕೆಗೂ ಮೊದಲು ಬೆಳ್ಳಂದೂರು ಬಳಿ ಇರುವ ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿ ಪ್ರಾರ್ಥಿಸಿದ್ದಾರೆ.
ಬಳಿಕ ಆಪ್ ಪಕ್ಷದ ಅಭ್ಯರ್ಥಿ ಅಶೋಕ್ ಮೃತ್ಯುಂಜಯ ಸೇರಿದಂತೆ ಅಮ್ ಆದ್ಮಿ ಪಕ್ಷದ ಕಾರ್ಯಕರ್ತರು ವೆಂಕಟೇಶ್ವರ ದೇವಸ್ಥಾನದಿಂದ ಕೆಜಿ ರಸ್ತೆಯಲ್ಲಿರುವ ಕಂದಾಯ ಭವನದಲ್ಲಿ ನಾಮಪತ್ರವನ್ನು ಸಲ್ಲಿಸಿದ್ದಾರೆ.
ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಅಮ್ ಆದ್ಮಿ ಪಕ್ಷದ ಅಭ್ಯರ್ಥಿ ಸೀತಾರಾಮ್ ಗುಂಡಪ್ಪ ನಾಮಪತ್ರ ಸಲ್ಲಿಕೆ: ರಾಜ್ಯದಲ್ಲಿ ನಾಮಪತ್ರ ಸಲ್ಲಿಕೆಗೆ 2 ದಿನಗಳು ಬಾಕಿ ಇದ್ದು. ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಅಮ್ ಆದ್ಮಿ ಪಾರ್ಟಿಯ ಅಭ್ಯರ್ಥಿಯಾಗಿರುವ ಸೀತಾರಾಮ್ ಗುಂಡಪ್ಪ ಅವರು ಇಂದು ನಾಮಪತ್ರ ಸಲ್ಲಿಕೆಯನ್ನ ಮಾಡಿದ್ದಾರೆ.
ಇಂದು ಬೆಳಿಗ್ಗೆ 10 ಗಂಟೆಗೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಆಪ್ ಅಭ್ಯರ್ಥಿ ಸೀತಾರಾಮ್ ಗುಂಡಪ್ಪ ಸೇರಿದಂತೆ ಅಮ್ ಆದ್ಮಿ ಪಕ್ಷದ ಕಾರ್ಯಕರ್ತರು ಬೊಮ್ಮನಹಳ್ಳಿ ಜಾಕಿ ಶೋರೂಂ ರಸ್ತೆಯಿಂದ ಪಾದಯಾತ್ರೆ ಮೂಲಕ ಬೊಮ್ಮನಹಳ್ಳಿ ಸಿಎಂಸಿ ಬಿಲ್ಡಿಂಡ್ ಬಳಿಯ ಬಿಬಿಎಂಪಿ ಕಚೇರಿಗೆ ತೆರಳಿ ನಾಮಪತ್ರವನ್ನ ಸಲ್ಲಿಕೆ ಮಾಡಿದ್ದಾರೆ.
ಯಶವಂತಪುರ ವಿಧಾನಸಭಾ ಕ್ಷೇತ್ರದ ಅಮ್ ಆದ್ಮಿ ಪಕ್ಷದ ಅಭ್ಯರ್ಥಿ ಶಶಿಧರ್ ಸಿ.ಆರಾಧ್ಯ ನಾಮಪತ್ರ ಸಲ್ಲಿಕೆ: ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿರುವ ಶಶಿಧರ್ ಸಿ ಆರಾಧ್ಯ ಅವರು ತಮ್ಮ ಸಾವಿರಾರು ಅಭಿಮಾನಿಗಳು, ಕಾರ್ಯಕರ್ತರೊಟ್ಟಿಗೆ ತೆರಳಿ ತಮ್ಮ ನಾಮಪತ್ರ ಸಲ್ಲಿಕೆಯನ್ನ ಮಾಡಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ಯಶವಂತಪುರ ವಿಧಾನಸಭಾ ಕ್ಷೇತ್ರದ ಅಮ್ ಆದ್ಮಿ ಪಕ್ಷದ ಅಭ್ಯರ್ಥಿ ಶಶಿಧರ್ ಸಿ ಆರಾಧ್ಯ ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ಕೆಂಗೇರಿ ಬಳಿ ಇರುವ ಕೋಟೆ ಸೋಮೇಶ್ವರ ಸ್ವಾಮಿಯ ಆಶೀರ್ವಾದ ಪಡೆದಿದ್ದಾರೆ.
ಬಳಿಕ ಆಪ್ ಪಕ್ಷದ ಅಭ್ಯರ್ಥಿ ಶಶಿಧರ್ ಸಿ ಆರಾಧ್ಯ ಸೇರಿದಂತೆ ಅಮ್ ಆದ್ಮಿ ಪಕ್ಷದ ಕಾರ್ಯಕರ್ತರು ಅಂಜನಾ ನಗರದ ಶ್ರೀರಾಮಾಂಜನೇಯ ಸ್ವಾಮಿ ದೇವಸ್ಥಾನದ ಬಳಿಯಿಂದ ನೂರಾರು ಕಾರ್ಯಕರ್ತರೊಂದಿಗೆ ಪಾದಯಾತ್ರೆ ಮೂಲಕ ತೆರಳಿ ಭಾರತ್ ನಗರದ ಬಿಬಿಎಂಪಿ ಕಚೇರಿಯ ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದ್ದಾರೆ.