ಬೆಂಗಳೂರು: ಸುದೀಪ್ ಬಿಜೆಪಿಯ ಸ್ಟಾರ್ ಪ್ರಚಾರಕರಾಗಿದ್ದಾರೆ. ಹೀಗಾಗಿ ಸುದೀಪ್ ಅವರ ಚಿತ್ರಗಳೂ ಜನರ ಮೇಲೆ ಪ್ರಭಾವ ಬೀರಬಹುದು. ಆದ್ದರಿಂದ ಚುನಾವಣೆ ಮುಗಿಯುವವರೆಗೂ ಅವರ ಚಿತ್ರ ಪ್ರದರ್ಶಿಸಬಾರದು ಎಂದು ಚುನಾವಣಾ ಆಯೋಗಕ್ಕೆ ಜೆಡಿಎಸ್ ದೂರು ನೀಡಿದೆ.
ಬಿಜೆಪಿ ಪರ ನಟ ಕಿಚ್ಚ ಸುದೀಪ್ ಪ್ರಚಾರ ವಿಚಾರ ಮಾಡುವುದಾಗಿ ಈಗಾಗಲೇ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದಾರೆ. ಆದ್ದರಿಂದ ಸುದೀಪ್ ಅವರ ಜಾಹೀರಾತುಗಳ ಪ್ರಸಾರಕ್ಕೆ ತಡೆ ನೀಡಬೇಕು ಎಂದು ಜೆಡಿಎಸ್ ಕಾನೂನು ವಿಭಾಗದಿಂದ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ತಮ್ಮ ಪುತ್ರನಿಗೆ ಟಿಕೆಟ್ ಕೊಡಿಸಲು ಲಾಬಿ ಎಂಟಿಬಿ ಲಾಬಿ: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ಈ ನಡುವೆ ಸಚಿವ ಎಂಟಿಬಿ ನಾಗರಾಜ್ ತಮ್ಮ ಪುತ್ರನಿಗೆ ಟಿಕೆಟ್ ಕೊಡಿಸಲು ಲಾಬಿ ನಡೆಸುತ್ತಿದ್ದಾರೆ.
ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಎಂಟಿಬಿ ಪುತ್ರನಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದರು.
ಬಿಎಸ್ವೈ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಂಟಿಬಿ, ಮಗನಿಗೆ ಟಿಕೆಟ್ ನೀಡುವಂತೆ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದೇನೆ. ಕೋರ್ ಕಮಿಟಿ ಸಭೆಯಲ್ಲೂ ಚರ್ಚೆ ಮಾಡಿದ್ದೇನೆ. ನಾನು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲ್ಲ. ಹೀಗಾಗಿ ಹೊಸಕೋಟೆಯಿಂದ ನನ್ನ ಮಗನಿಗೆ ಟಿಕೆಟ್ ನೀಡಲಿದ್ದಾರೆ. ಈ ಬಾರಿ ನನ್ನ ಮಗ ಗೆಲ್ಲುತ್ತಾನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.