NEWSನಮ್ಮಜಿಲ್ಲೆನಮ್ಮರಾಜ್ಯ

ಬಿಜೆಪಿ ಸರ್ಕಾರದಲ್ಲಿ ನಿರಂತರವಾಗಿ ವರ್ಷಕ್ಕೆ ಎರಡೆರಡು ಬಾರಿ ಬಸ್ ಟಿಕೆಟ್‌ ದರ ಹೆಚ್ಚಳ: ಪಟ್ಟಿ ರಿಲೀಸ್​ ಮಾಡಿದ ಸಾರಿಗೆ ಸಚಿವ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ 4 ನಿಗಮಗಳ ಬಸ್​​ ಪ್ರಯಾಣ ದರದಲ್ಲಿ ಶೇ.15ರಷ್ಟು ಏರಿಕೆ ಮಾಡಿರುವುದನ್ನು ಮೆಜೆಸ್ಟಿಕ್​ನ ಕೆಂಪೇಗೌಡ ಬಸ್​ ನಿಲ್ದಾಣದಲ್ಲಿ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ಮಾಡಿದ್ದಾರೆ. ನಾವು ಕಳೆದ 10 ವರ್ಷದಿಂದ ಏರಿಕೆ ಮಾಡಿರಲಿಲ್ಲ. ಹೀಗಾಗಿ ಮಾಡಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಇದರ ಜತೆಗೆ ಇದೀಗ ಆರ್​​. ಅಶೋಕ್ ಅವಧಿಯಲ್ಲಿ ಟಿಕೆಟ್​ ದರ ಏರಿಕೆ ಪಟ್ಟಿಯನ್ನು ಬಿಡುಗಡೆ ಮಾಡುವ ಮೂಲಕ ಸಾರಿಗೆ ಸಚಿವತು ಟಾಂಗ್​ ಕೊಟ್ಟಿದ್ದು ಯಾವಯಾವ ವರ್ಷದಲ್ಲಿ ಎಷ್ಟೆಷ್ಟು ಬಾರಿ ಏರಿಕೆ ಮಾಡಿದ್ದಾರೆ ಎಂಬುವುದನ್ನು ಪಟ್ಟಿ ಸಹಿತ ತಿಳಿಸಿದ್ದಾರೆ.

ಸಾರಿಗೆ ನಿಗಮಗಳ ಶೇ.15ರಷ್ಟು ಬಸ್ ಟಿಕೆಟ್ ದರ ಏರಿಕೆ ಸಂಬಂಧ ಸರ್ಕಾರದ ವಿರುದ್ದ ಬಿಜೆಪಿಯವು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರು. ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಗುಲಾಬಿ ಹೂ ನೀಡಿ ಪ್ರತಿಭಟನೆ ಕೂಡ ಮಾಡಿದ್ದರು.

ಇದರ ಬೆನ್ನಲ್ಲೇ ಬಿಜೆಪಿ ಸರ್ಕಾರ ಇದ್ದಾಗ ಅಂದಿನ ಸಾರಿಗೆ ಸಚಿವ ಇಂದಿನ ವಿಪಕ್ಷ ನಾಯಕ ಆರ್​​. ಅಶೋಕ್ ಅವಧಿಯಲ್ಲಿ ಯಾವ್ಯಾವ ವರ್ಷದಲ್ಲಿ ಎಷ್ಟೆಷ್ಟು ದರ ಏರಿಕೆ‌ ಮಾಡಿದ್ದಾರೆ ಎಂಬ ಪಟ್ಟಿ ರಿಲೀಸ್​ ಮಾಡಿದ್ದಾರೆ.

ದಿನಾಂಕ             ಬಸ್ ದರ ಹೆಚ್ಚಳ
29/8/2008——— 12.01%
7/7/2009———-  3.56%
3/3/2010——— 4.76%
23/6/2010 ——–  3.50%
26/6/2011——-  6.95%
19/12/2011—– 5.01%
30/09/2012——– 12%

ಹೊಸ ವರ್ಷದ ಆರಂಭದಲ್ಲಿ ಬಸ್ ಪ್ರಯಾಣಿಕರಿಗೆ ಬಿಸಿ ಮುಟ್ಟಿಸಿರುವ ಸರ್ಕಾರ, ನಾಲ್ಕು ನಿಗಮಗಳ ಬಸ್ ಪ್ರಯಾಣ ದರ ಏರಿಕೆ ಮಾಡುವ ಮೂಲಕ ಜನರ ಜೇಬಿಗೆ ಕತ್ತರಿ ಹಾಕೋಕೆ ಹೊರಟಿದೆ.

ಶಕ್ತಿ ಯೋಜನೆ ಮೂಲಕ ಮಹಿಳೆಯರಿಗೆ ಫ್ರೀ ಬಸ್ ಪ್ರಯಾಣದ ಭಾಗ್ಯ ನೀಡಿದ್ದ ಸರ್ಕಾರ, ಇದೀಗ ಪರ-ವಿರೋಧದ ಮಧ್ಯೆ ಟಿಕೆಟ್ ದರವನ್ನ ಶೇ.15 ರಷ್ಟು ಏರಿಕೆ ಮಾಡಿ ಆದೇಶ ಹೊರಡಿಸಿದೆ.

KSRTC, BMTC ಸೇರಿದಂತೆ 4 ನಿಗಮಗಳ ಟಿಕೆಟ್ ದರ ಏರಿಕೆಯಾಗಿದ್ದು, ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಜಾರಿ ಮಾಡೋಕೆ ಸಾರಿಗೆ ಇಲಾಖೆ ಸಜ್ಜಾಗಿದೆ.

ಬಸ್ ದರ ಏರಿಕೆಯ ನಿರ್ಧಾರದ ವಿರುದ್ಧ ವಿಪಕ್ಷಗಳು, ಸಾರ್ವಜನಿಕರಿಂದ ವಿರೋಧ ಕೇಳಿಬಂದಿದ್ರೂ ಕೂಡ ಇದೀಗ ಸರ್ಕಾರ ಕೊನೆಗೂ ಬಸ್ ಪ್ರಯಾಣ ದರಕ್ಕೆ ಸರ್ಜರಿ ಮಾಡಿಬಿಟ್ಟಿದೆ.

ಸದ್ಯ ಒಂದೆಡೆ ಮಹಿಳೆಯರಿಗೆ ಫ್ರೀ ಬಸ್ ಅಂತಾ ಖುಷಿಪಟ್ಟಿದ್ದ ರಾಜ್ಯದ ಜನರು ಇದೀಗ ಹೊಸ ಟಿಕೆಟ್ ದರ ಕೊಟ್ಟು ಸಾರಿಗೆ ಬಸ್ ಹತ್ತುವ ಸ್ಥಿತಿ ಎದುರಾಗಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ