ಬಂಟ್ವಾಳ : ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ ನಡೆಸಿ ಗರ್ಭಾವತಿಯನ್ನಾಗಿ ಮಾಡಿದ ಮಲತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆ ಎಂಬಲ್ಲಿ ಘಟನೆ ನಡೆದಿದ್ದು, ತುಂಬೆ ರಾಮನಿವಾಸ ನಿವಾಸಿ ವೆಂಕಟೇಶ ಕಾರಂತ ಆರೋಪಿ ಮಲತಂದೆ.
ವೆಂಕಟೇಶ ಕಾರಂತ ಅವರು ತುಂಬೆಯಲ್ಲಿ ಪುರೋಹಿತ ಕೆಲಸ ಮಾಡುತ್ತಿದ್ದು, ಮಗಳ ಮೇಲೆಯೇ ಕಳೆದ 4 ತಿಂಗಳಿನಿಂದ ನಿರಂತರವಾಗಿ ಅತ್ಯಾಚಾರ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬಾಲಕಿಗೆ ವೆಂಕಟೇಶ ಕಾರಂತ ಮಲತಂದೆಯಾಗಿದ್ದಾನೆ. ಬಾಲಕಿಯ ತಂದೆ ಅಪಘಾತವೊಂದರಲ್ಲಿ ಮೃತಪಟ್ಟಿದ್ದರಿಂದ ಬಾಲಕಿಯ ತಾಯಿ ಎರಡನೇ ಮದುವೆಯಾಗಿದ್ದಾರೆ. ಈ ಬಾಲಕಿಯೂ ಇವರ ಜೊತೆಯಲ್ಲೇ ವಾಸವಾಗಿದ್ದಾಳೆ.
ಆದರೆ, ತಂದೆಯ ಸ್ಥಾನದಲ್ಲಿ ಇರುವ ಪಾಪಿ ಅಪ್ರಾಪ್ತ ಬಾಲಕಿಯನ್ನು 4 ತಿಂಗಳ ಗರ್ಭವತಿ ಮಾಡಿದ ಆರೋಪದ ಮೇಲೆ ಪೊಲೀಸರು ವಶಕ್ಕೆ ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.
![](https://vijayapatha.in/wp-content/uploads/2024/02/QR-Code-VP-1-1-300x62.png)