NEWSನಮ್ಮರಾಜ್ಯ

ಬಂಡೀಪುರ ಪ್ರವಾಸಿಗರಿಗೆ ಸಿಹಿ ಸುದ್ದಿ: ಕೋಟಿ ವಿಮೆ ಸೌಲಭ್ಯ ಕೊಟ್ಟ ಅರಣ್ಯ ಇಲಾಖೆ

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಬಂಡೀಪುರಕ್ಕೆ ಆಗಮಿಸುವ ಪ್ರವಾಸಿಗರ ಸುರಕ್ಷತಾ ದೃಷ್ಟಿಯಿಂದ ಅರಣ್ಯ ಇಲಾಖೆಯು ನೂತನ ವಿಮಾ ಯೋಜನೆಯನ್ನು ಆರಂಭಿಸಿದ್ದು, ಸಫಾರಿ ವೇಳೆ ಪ್ರವಾಸಿಗರು ಕಾಡು ಪ್ರಾಣಿ ದಾಳಿಯಿಂದ ಮೃತಪಟ್ಟರೆ ಈ ಯೋಜನೆ ಅಡಿಯಲ್ಲಿ ಒಂದು ಕೋಟಿ ರೂಪಾಯಿ ಪರಿಹಾರ ದೊರೆಯಲಿದೆ.

ದೇಶದ ಪ್ರಮುಖ ಸಫಾರಿ ಕೇಂದ್ರಗಳಲ್ಲಿ ಬಂಡೀಪುರವೂ ಒಂದು. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ಸಫಾರಿ ಮೂಲಕ ಇಲ್ಲಿನ ಪ್ರಾಕೃತಿಕ ಸೌಂದರ್ಯವನ್ನು ಸವಿಯುತ್ತಾರೆ.

ಕೆಲವೊಂದು ಸಂದರ್ಭಗಳಲ್ಲಿ ಪ್ರವಾಸಿಗರ ಮೇಲೆ ಪ್ರಾಣಿಗಳು ದಾಳಿ ನಡೆಸುವುದು, ಅಟ್ಟಾಡಿಸಿಕೊಂಡು ಬರುವ ಘಟನೆಗಳು ನಡೆಯುತ್ತವೆ. ಈ ಹಿನ್ನೆಲೆ ಪ್ರವಾಸಿಗರ ಸುರಕ್ಷತಾ ದೃಷ್ಟಿಯಿಂದ ಬಂಡೀಪುರಕ್ಕೆ ಆಗಮಿಸುವ ಸಫಾರಿಗರಿಗೆ ಒಂದು ಕೋಟಿ ರೂ. ಮೊತ್ತದ ವಿಮಾ ಸೌಲಭ್ಯವನ್ನು ಅರಣ್ಯ ಇಲಾಖೆ ಕಲ್ಪಿಸಿದೆ.

ಬಂಡೀಪುರಕ್ಕೆ ಆಗಮಿಸುವ ಎಲ್ಲರಿಗೂ ಈ ವಿಮಾ ಸೌಲಭ್ಯ ಅನ್ವಯವಾಗಲಿದೆ. ಈ ಯೋಜನೆಗೆ ಅರ್ಹರಾಗಲು ಪ್ರತ್ಯೇಕ ನೋಂದಣಿ ಅಗತ್ಯ ಇಲ್ಲ. ಸಫಾರಿಗೆ ತೆರಳಿರುವ ಟಿಕೆಟ್ ಇದ್ದರೆ ಈ ವಿಮಾ ಸೌಲಭ್ಯಕ್ಕೆ ಅರ್ಹರಾಗುತ್ತಾರೆ. ಕಾಡಿನೊಳಗೆ ಪ್ರಾಣ ಹಾನಿ ಸಂಭವಿಸಿದರೆ ಅರಣ್ಯ ಇಲಾಖೆಯಿಂದ ಆರ್ಥಿಕ ನೆರವು ಸಿಗಲಿದೆ ಎಂದು ಬಂಡೀಪುರ ಸಿಎಫ್ ರಮೇಶ್ ಕುಮಾರ್ ತಿಳಿಸಿದ್ದಾರೆ.

ಸಫಾರಿಗೆ ವೇಳೆ ಪ್ರಾಣ ಹಾನಿ ಸಂಭವಿಸಿದರೆ ಅಥವಾ ಸಫಾರಿ ವೇಳೆ ಕಾಡು ಪ್ರಾಣಿಗಳ ದಾಳಿಯಿಂದ ಮೃತಪಟ್ಟರೆ 1 ಕೋಟಿ ರೂಪಾಯಿ ಆರ್ಥಿಕ ನೆರವು ಸಿಗಲಿದೆ. ಪ್ರತಿವರ್ಷ 1 ರಿಂದ 1.5 ಲಕ್ಷ ಮಂದಿ ಸಫಾರಿ ಮೂಲಕ ಬಂಡೀಪುರವನ್ನು ವೀಕ್ಷಣೆ ಮಾಡುತ್ತಾರೆ.

ಕಳೆದ ಎರಡು ತಿಂಗಳ ಹಿಂದೆ ನಡೆದ ಸಮೀಕ್ಷೆಯ ವರದಿಯಂತೆ, ಹುಲಿ ಗಣತಿಯಲ್ಲಿ ರಾಜ್ಯದಲ್ಲೇ ಅಗ್ರಸ್ಥಾನ ಪಡೆದುಕೊಂಡಿದ್ದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಆನೆಗಳ ಸಂಖ್ಯೆಯಲ್ಲೂ ಮೊದಲ ಸ್ಥಾನ ಪಡೆದಿತ್ತು. ಜಿಲ್ಲೆಯ ಬಂಡೀಪುರವು ರಾಜ್ಯದಲ್ಲೇ ಅತಿ ಹೆಚ್ಚು ಆನೆಗಳಿರುವ ಅರಣ್ಯ ಪ್ರದೇಶವಾಗಿದ್ದು, 1116 ಗಜಗಳಿವೆ ಎಂದು ಅಂಕಿ ಅಂಶಗಳಿಂದ ತಿಳಿದುಬಂದಿತ್ತು.

ಬಿಳಿಗಿರಿರಂಗನಾಥ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ 484 ಆನೆಗಳು, ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ 557 ಆನೆಗಳು, ಕಾವೇರಿ ವನ್ಯಜೀವಿ ಧಾಮದಲ್ಲಿ 236 ಆನೆಗಳಿವೆ ಎಂದು ವರದಿಯಲ್ಲಿ ಹೇಳಲಾಗಿತ್ತು. ಒಟ್ಟು ರಾಜ್ಯದಲ್ಲಿ 6395 ಆನೆಗಳಿವೆ ಎಂದು ವರದಿ ತಿಳಿಸಿತ್ತು. 2023ರ ಮೇ 17ರಿಂದ 19ರ ವರೆಗೆ ರಾಜ್ಯದ ವಿವಿಧೆಡೆ 3400 ಮಂದಿ ಆನೆ ಗಣತಿ ಕಾರ್ಯ ನಡೆಸಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು