NEWSನಮ್ಮರಾಜ್ಯ

ಬನ್ನೂರಿನಲ್ಲಿ ನಾಯಿ ಹೊತ್ತೊಯ್ದ ಚಿರತೆ

ವಿಜಯಪಥ ಸಮಗ್ರ ಸುದ್ದಿ

ಬನ್ನೂರು (ಮೈಸೂರು ಜಿಲ್ಲೆ):  ಬನ್ನೂರಿನಲ್ಲಿ ಎರಡು ಚಿರತೆಗಳು ಪ್ರತ್ಯಕ್ಷವಾಗಿ ಒಂದು ನಾಯಿಯನ್ನು ಹೊತ್ತೊಯ್ದದ ಘಟನೆ ಜರುಗಿದ್ದು ಜನರಲ್ಲಿ ಆತಂಕ  ಉಂಟಾಗಿದೆ.

ಪಟ್ಟಣ ರತ್ನಮಹಲ್‌ ಥಿಯೇಟರ್‌ ಹಿಂಬಾಗದಲ್ಲಿ ಶುಕ್ರವಾರ ರಾತ್ರಿ  ನಾಯಿಯನ್ನು ಕಚ್ಚಿಕೊಂಡು ಹೋಗುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇದಕ್ಕೂ ಮೊದಲು ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಚಿರತೆಗಳನ್ನು ನೋಡಿದ ರೈತರು ಗಾಬರಿಗೊಂಡಿದ್ದರು.  ನಂತರ  ಬನ್ನೂರಿನ ಪಟ್ಟಣಕ್ಕೂ ಅವು ಬಂದಿವೆ ಎಂದು ಪೊಲೀಸರು ಜನರಲ್ಲಿ ಅರಿವು ಮೂಡಿಸಿದರು.

ನಂತರ ಈ ವಿಷಯವನ್ನು ಬನ್ನೂರು ಠಾಣೆ ಪೊಲೀಸರು ಚಿರತೆಗಳನ್ನು ಸೆರೆ ಹಿಡಿಯಲು ಅರಣ್ಯಾಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದಾರೆ. ಈ ನಡುವೆ ಅಕ್ಕಪಕ್ಕದ ಗ್ರಾಮಗಳಲ್ಲೂ ಚಿರತೆ ಬಂದಿರುವ ಬಗ್ಗೆ ಲೌಡ್ ಸ್ಪೀಕರ್ ಹಾಕಿಕೊಂಡು ಮನೆಯಿಂದ ಹೊರಬರದಂತೆ ಎಚ್ಚರಿಕೆ ನೀಡುತ್ತಿದ್ದಾರೆ.

ಚಿರತೆಗಳು ಬನ್ನೂರಿನ ಒಳಗಡೆ ಬಂದಿರುವುದನ್ನು ಸಿಸಿ ಕ್ಯಾಮೆರಾದ ಮೂಲಕ ನೋಡಿ ಗಾಬರಿಗೊಂಡಿರುವ ಜನತೆ ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ. ಹೀಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯ ಪ್ರವೃತ್ತರಾಗಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ KSRTC ಬಸ್‌-ಬೈಕ್ ನಡುವೆ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್...