NEWSನಮ್ಮಜಿಲ್ಲೆಬೆಂಗಳೂರು

ಬಿಬಿಎಂಪಿ: 13 ಕೆರೆಗಳ ಒತ್ತುವರಿ ತೆರವು- ₹242.5 ಕೋಟಿ ಮೌಲ್ಯದ 7 ಎಕರೆ ಪ್ರದೇಶ ವಶ -ಪ್ರೀತಿ ಗೆಹ್ಲೋಟ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೆರೆಗಳ ಒತ್ತುವರಿಯಾಗಿರುವುದನ್ನು ಗುರುತಿಸಿ ತೆರವು ಕಾರ್ಯಾಚರಣೆ ನಡೆಸುವ ಕಾರ್ಯವನ್ನು ಸಕ್ರಿಯವಾಗಿ ನಡೆಸಲಾಗುತ್ತಿದೆ ಎಂದು ಅರಣ್ಯ, ಪರಿಸರ ಮತ್ತು ಹವಾಮಾನ ವೈಪರೀತ್ಯ ನಿರ್ವಹಣೆಯ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್ ತಿಳಿಸಿದರು.

vijayapatha.in - ವಿಜಯಪಥ.ಇನ್‌ ನಿಮಗೆ ವಿಶ್ವಾಸನೀಯ ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ ಎಂದು ಅನಿಸಿದರೆ ನಮಗೆ ಆರ್ಥಕವಾಗಿ ಬಲ ನೀಡಿ. ಇನ್ನಷ್ಟು ಸತ್ಯನಿಷ್ಠ ವರದಿಗಳನ್ನು ಮಾಡುವುದಕ್ಕೆ ಬೆಂಬಲ ನೀಡಿ.   ಕನಿಷ್ಠ 100 ರೂ. ಒಮ್ಮೆಗೆ ಹಾಕಿ. ನಮ್ಮನ್ನು ಪ್ರೋತ್ಸಾಹಿಸಿ. 

ಉಚ್ಚನ್ಯಾಯಾಲಯದ ಆದೇಶದಂತೆ ಪಾಲಿಕೆ ವಶದಲ್ಲಿರುವ ಕೆರೆಗಳ ಒತ್ತುವರಿ ತೆರವಿಗೆ ಒತ್ತುವರಿ ಸರ್ವೆ ಹಾಗೂ ತೆರವುಗೊಳಿಸುವ ಕಾರ್ಯ ಜಾರಿಯಲ್ಲಿದೆ. ಇದುವರೆವಿಗೂ 202 ಕೆರೆಗಳ ಪೈಕಿ 162 ಕೆರೆಗಳ ಸರ್ವೆ ಕಾರ್ಯವು ಪೂರ್ಣಗೊಂಡಿದ್ದು, ಅದರಲ್ಲಿ 49 ಕೆರೆಗಳು ಒತ್ತುವರಿ ಮುಕ್ತವಾಗಿದೆ. ಇನ್ನು 23 ಕೆರೆಗಳಲ್ಲಿ ಸರ್ಕಾರಿ ಒತ್ತುವರಿಯನ್ನು ಒಳಗೊಂಡಿದ್ದು, ವಲಯಗಳೊಂದಿಗೆ ಸಮನ್ವಯ ಸಾಧಿಸಿ ಒತ್ತುವರಿಗಳನ್ನು ತೆರವುಗೊಳಿಸಲಾಗುವುದು ಎಂದರು.

ಒತ್ತುವರಿ ತೆರವು ವಿವರ: ಪಾಲಿಕೆಯ 4 ವಲಯಗಳ 13 ಕೆರೆಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದ್ದು, ಒಟ್ಟಾರೆಯಾಗಿ 242.5 ಕೋಟಿ ರೂ. ಮೌಲ್ಯದ 7 ಎಕರೆ 03 ಗುಂಟೆ ಒತ್ತುವರಿ ಪ್ರದೇಶವನ್ನು ತೆರವುಗೊಳಿಸಿ, ತಂತಿ-ಬೇಲಿಯನ್ನು ಅಳವಡಿಸಲು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.

1. ಮಹದೇವಪುರ ವಲಯ – (02 ಕೆರೆ): ದೊಡ್ಡನೆಕ್ಕುಂದಿ ಕೆರೆಯ 02 ಎಕರೆ 06 ಗುಂಟೆ ಖಾಲಿ ಪ್ರದೇಶವನ್ನು ಒತ್ತುವರಿ ಮುಕ್ತಗೊಳಿಸಿ, ತಂತಿ-ಬೇಲಿಯನ್ನು ಅಳವಡಿಸಲು ಕ್ರಮಕೈಗೊಳ್ಳಲಾಗಿದೆ. ಸದರಿ ಜಾಗದ ಪ್ರಸ್ತುತ ಮಾರುಕಟ್ಟೆ ದರವು 75 ಕೋಟಿ ರೂ.ಗಳಾಗಿರುತ್ತದೆ.

ವಿಭೂತಿಪುರ ಕೆರೆಯಲ್ಲಿ ಒತ್ತುವರಿಯಾಗಿದ್ದ 08 ಗುಂಟೆ ಪ್ರದೇಶವನ್ನು ತೆರವುಗೊಳಿಸಲಾಗಿದ್ದು, ತಂತಿ-ಬೇಲಿಯನ್ನು ಅಳವಡಿಸಲು ಕ್ರಮಕೈಗೊಳ್ಳಲಾಗಿದೆ. ಸದರಿ ಜಾಗದ ಪ್ರಸ್ತುತ ಮಾರುಕಟ್ಟೆ ದರವು 8 ಕೋಟಿ ರೂ. ಗಳಾಗಿರುತ್ತದೆ

2. ಪೂರ್ವ ವಲಯ – (01 ಕೆರೆ): ಕಗ್ಗದಾಸಪುರ ಕೆರೆಯ 2.5 ಗುಂಟೆ ಜಮೀನಿನಲ್ಲಿದ್ದ ಶೆಡ್ ಅನ್ನು ತೆರವುಗೊಳಿಸಿ ಹಾಗೂ 22.5 ಗುಂಟೆ ಖಾಲಿ ಜಾಗಕ್ಕೆ ತಂತಿ ಬೇಲಿಯನ್ನು ಅಳವಡಿಸಲು ಕ್ರಮವಹಿಸಲಾಗಿದೆ. ಸದರಿ ಜಾಗದ ಪ್ರಸ್ತುತ ಮಾರುಕಟ್ಟೆ ದರವು 22.50 ಕೋಟಿ ರೂ. ಗಳಾಗಿರುತ್ತದೆ

3. ಬೊಮ್ಮನಹಳ್ಳಿ ವಲಯ – (03 ಕೆರೆ): ಕೋಣನಕುಂಟೆ ಕೆರೆಯ ಖಾಲಿ ಜಾಗದ 30 ಗುಂಟೆ ಜಾಗವನ್ನು ವಶಕ್ಕೆ ಪಡೆಯಲಾಗಿದ್ದು ತಂತಿ ಬೇಲಿಯನ್ನು ಅಳವಡಿಸಲಾಗಿದೆ. ಸದರಿ ಜಾಗದ ಪ್ರಸ್ತುತ ಮಾರುಕಟ್ಟೆ ದರವು 30 ಕೋಟಿ ರೂ. ಗಳಾಗಿರುತ್ತದೆ.

ಅರೆಕೆರೆ ಕೆರೆಯಲ್ಲಿ ಒತ್ತುವರಿಯಾಗಿದ್ದ 12 ಗುಂಟೆ ಜಾಗವನ್ನು ವಶಕ್ಕೆ ಪಡೆಯಲಾಗಿದ್ದು, ತಂತಿ ಬೇಲಿಯನ್ನು ಅಳವಡಿಸಲಾಗಿದೆ. ಸದರಿ ಜಾಗದ ಪ್ರಸ್ತುತ ಮಾರುಕಟ್ಟೆ ದರವು 12 ಕೋಟಿ ರೂ. ಗಳಾಗಿರುತ್ತದೆ.

ಸುಬ್ಬರಾಯನ ಕೆರೆಯ 24 ಗುಂಟೆ ಖಾಲಿ ಜಾಗವನ್ನು ಮತ್ತು 4 ಗುಂಟೆ ಶೀಟ್ ಜಾಗವು ಸೇರಿದಂತೆ ಒಟ್ಟು 28 ಗುಂಟೆ ಜಾಗವನ್ನು ವಶಕ್ಕೆ ಪಡೆಯಲಾಗಿದ್ದು, ತಂತಿ ಬೇಲಿಯನ್ನು ಅಳವಡಿಸಲಾಗಿದೆ. ಸದರಿ ಜಾಗದ ಪ್ರಸ್ತುತ ಮಾರುಕಟ್ಟೆ ದರವು 15 ಕೋಟಿ ರೂ. ಗಳಾಗಿರುತ್ತದೆ.

4. ಯಲಹಂಕ ವಲಯ – (07 ಕೆರೆ): ಯಲಹಂಕ ವಲಯದಲ್ಲಿ ಆವಲಹಳ್ಳಿ ಕೆರೆಯಲ್ಲಿ 2 ಗುಂಟೆ, ಯಲಹಂಕ ಕೆರೆಯಲ್ಲಿ 24 ಗುಂಟೆ, ಮೇಡಿ ಅಗ್ರಹಾರ ಕೆರೆಯಲ್ಲಿ 8 ಗುಂಟೆ, ಅಗ್ರಹಾರ ಕೆರೆಯಲ್ಲಿ 4 ಗುಂಟೆ, ಕಟ್ಟಿಗೇನಹಳ್ಳಿ ಕೆರೆಯಲ್ಲಿ 1.50 ಗುಂಟೆ, ನರಸೀಪುರ ಕೆರೆಯಲ್ಲಿ 25 ಗುಂಟೆ, ಸಿಂಗಾಪುರ ಕೆರೆಯಲ್ಲಿ 29.50 ಗುಂಟೆ ಸೇರಿ 07 ಕೆರೆಗಳಲ್ಲಿ 2 ಎಕರೆ 14 ಗುಂಟೆ ಒತ್ತುವರಿ ಪ್ರದೇಶವನ್ನು ತೆರವುಗೊಳಿಸಲಾಗಿರುತ್ತದೆ. ಸದರಿ ಜಾಗದ ಪ್ರಸ್ತುತ ಮಾರುಕಟ್ಟೆ ದರವು 80 ಕೋಟಿ ರೂ. ಗಳಾಗಿದೆ.

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು!