ಬೆಳಗಾವಿ: ಅರಭಾವಿ ಮಠದ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠದ ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ (64) ಅವರು ಹೃದಯಾಘಾತದಿಂದ ಭಾನುವಾರ ರಾತ್ರಿ ಲಿಂಗೈಕ್ಯರಾದರು.
vijayapatha.in - ವಿಜಯಪಥ.ಇನ್ ನಿಮಗೆ ವಿಶ್ವಾಸನೀಯ ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ ಎಂದು ಅನಿಸಿದರೆ ನಮಗೆ ಆರ್ಥಕವಾಗಿ ಬಲ ನೀಡಿ. ಇನ್ನಷ್ಟು ಸತ್ಯನಿಷ್ಠ ವರದಿಗಳನ್ನು ಮಾಡುವುದಕ್ಕೆ ಬೆಂಬಲ ನೀಡಿ. ಕನಿಷ್ಠ 100 ರೂ. ಒಮ್ಮೆಗೆ ಹಾಕಿ. ನಮ್ಮನ್ನು ಪ್ರೋತ್ಸಾಹಿಸಿ.
ಮಠದಲ್ಲಿರುವಾಗಲೇ ಸ್ವಾಮೀಜಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಗೋಕಾಕ್‌ನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಲಿಂಗೈಕ್ಯರಾಗಿದ್ದಾರೆ.
ಅರಭಾವಿ ಮಠ ಕರ್ನಾಟಕ ಅಷ್ಟೇ ಅಲ್ಲದೆ ಹೊರ ರಾಜ್ಯಗಳಲ್ಲಿಯೂ ಅಪಾರ ಭಕ್ತ ಸಮೂಹವನ್ನು ಹೊಂದಿದೆ. ಸಾವಿನ ಸುದ್ದಿ ತಿಳಿದು ಮಠಕ್ಕೆ ವಿವಿಧ ಮಠಾಧೀಶರು, ಗಣ್ಯರು ಭೇಟಿ ನೀಡಿದ್ದಾರೆ.
ಇಂದು ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯೆ ನಡೆಸುವ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಮಠದ ಮೂಲಗಳು ತಿಳಿಸಿವೆ.
![](https://vijayapatha.in/wp-content/uploads/2024/02/QR-Code-VP-1-1-300x62.png)