NEWSನಮ್ಮಜಿಲ್ಲೆ

ಬಸವೇಶ್ವರ ಪುತ್ಥಳಿಗೆ ಜಾಗ ಮಂಜೂರಿಗಾಗಿ ವೀರಶೈವ ಸಮಾಜದ ಮನವಿ

ವಿಜಯಪಥ ಸಮಗ್ರ ಸುದ್ದಿ

ಜೇವರ್ಗಿ: ಪಟ್ಟಣದ ವಿಜಯಪುರ ಸರ್ಕಲ್ ಬಳಿ ಇರುವ ಎಪಿಎಂಸಿ ವ್ಯಾಪ್ತಿ ಹಳೆಯ ಗೋಡೊನ್ ಜಾಗವನ್ನು ಬಸವೇಶ್ವರ ಪುತ್ಥಳಿಗೆ ಮಂಜೂರು ಮಾಡುವಂತೆ ಜೇವರ್ಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಸವಿತಾ ನಾಯಕ ಅವರಿಗೆ ತಾಲೂಕು ವೀರಶೈವ ಸಮಾಜದ ವತಿಯಿಂದ ಮನವಿ ಸಲ್ಲಿಸಲಾಯಿತು.

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ಸುಮಾರು 1.50 ಲಕ್ಷ ವೀರಶೈವ ಲಿಂಗಾಯತ ಸಮುದಾಯವಿದ್ದು, ಕಳೆದ ಹಲವಾರು ವರ್ಷಗಳಿಂದ ಪಟ್ಟಣದಲ್ಲಿ ವಿಶ್ವಗುರು ಬಸವಣ್ಣನವರ ಪುತ್ಥಳಿ ಇಲ್ಲದಿರುವುದು ದುರ್ದೈವದ ಸಂಗತಿ.

ಆದ್ದರಿಂದ ಜೇವರ್ಗಿ ಪಟ್ಟಣದ ಬಸವೇಶ್ವರ ಸರ್ಕಲ್ ಬಳಿ ಇರುವ ಬೀದರ್‌ ಬೆಂಗಳೂರು ಹೆದ್ದಾರಿಗೆ ಹೊಂದಿಕೊಂಡಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದ ಒಳಗೆ ಶಿಥಿಲಗೊಂಡಿರುವ ಹಳೆಯ ಗೋದಾಮು ಇರುವ ಸ್ಥಳ 100″100 ಅಡಿ ಅಳತೆಯ ಸ್ಥಳವನ್ನು ಜಗಜ್ಯೋತಿ ಬಸವೇಶ್ವರರ ಪುತ್ಥಳಿ ನಿರ್ಮಾಣಕ್ಕೆ ಸ್ಥಳಾವಕಾಶ ನೀಡಬೇಕೆಂದು ವೀರಶೈವ ಸಮಾಜದ ತಾಲೂಕು ಅಧ್ಯಕ್ಷ ಸಿದ್ದು ಅಂಗಡಿ ನೇತೃತ್ವದಲ್ಲಿ ಮನವಿ ಮಾಡಲಾಯಿತು.

ಸಂಘಟನೆ ಪ್ರಧಾನ ಕಾರ್ಯದರ್ಶಿ ಅಶೋಕ ಪಾಟೀಲ, ಕಾರ್ಯದರ್ಶಿ ಮಲ್ಲಿಕಾರ್ಜುನ ಬಿರಾದಾರ, ಪದಾಧಿಕಾರಿಗಳಾದ ವಿಶ್ವ ಪಾಟೀಲ, ಕೇದಾರಲಿಂಗಯ್ಯ ಹಿರೇಮಠ, ಸಾಹೇಬಗೌಡ ಪಾಟೀಲ, ವಿಶಾಲ ಬಂಕೂರ, ವಿಜಯಕುಮಾರ ನರಿಬೋಳ ವಕೀಲರು, ಸಿದ್ದಯ್ಯ ಸ್ಥಾವರಮಠ, ರವಿ ಅವಟಿ, ವೀರು ಪಾಟೀಲ, ಷಣ್ಮುಖ ಹಿರೇಗೌಡ, ವೀರೇಶ ನರಿಬೋಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು