NEWSದೇಶ-ವಿದೇಶ

ಬಾಗಲಕೋಟೆಯಲ್ಲಿ ಕೊರೊನಾಗೆ ವ್ಯಕ್ತಿ ಬಲಿ

ರಾಜ್ಯದಲ್ಲಿ ನಾಲ್ಕಕ್ಕೆ ಏರಿದ ಮೃತರ ಸಂಖ್ಯೆ l 128 ಸೋಂಕಿತರು

ವಿಜಯಪಥ ಸಮಗ್ರ ಸುದ್ದಿ

ಬಾಗಲಕೋಟೆ: ಕೋವಿಡ್ ಸೋಂಕಿತ ವ್ಯಕ್ತಿ ಮೃತಪಟ್ಟಿದಾರೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಹೇಳಿದ್ದಾರೆ.

ಮೃತನ ಅಂತ್ಯಕ್ರಿಯೆಯನ್ನು ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿಯ ನಿಯಮಗಳಂತೆ ನೆರವೇರಿಸಲಾಗುವುದು ಎಂದು ಡಿಸಿ ತಿಳಿಸಿದ್ದಾರೆ.

ಮೃತರು ಪ್ರಾವಿಜನ್‌ ಸ್ಟೋರ್‌ ಇಟ್ಟುಕೊಂಡಿದ್ದ ವ್ಯಕ್ತಿಯಾಗಿದ್ದು ಕೊರೊನಾ ಬಗ್ಗೆ ಎಚ್ಚರಿಕೆ ವಹಿಸದ ಪರಿಣಾಮ ಅದರ ಸುಳಿಗೆ ಸಿಲುಕಿ ಕೊನೆಯುಸಿರೆಳೆದಿದ್ದಾರೆ. ಇನ್ನು ಮೃತನ ಸಂಪರ್ಕದಲ್ಲಿದ್ದವರ ವಿವರವನ್ನು ಕಲೆಹಾಕಲಾಗುತ್ತಿದ್ದು, ಆ ಎಲ್ಲರನ್ನು ಪತ್ತೆಮಾಡಿ ಕ್ವಾರಂಟೈನ್‌ನಲ್ಲಿ ಇರಿಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇದಕ್ಕೂ ಮೊದಲು ಸುದ್ದಿಗೋಷ್ಠಿ ಆಯೋಜಿಸಿದ್ದ ಜಿಲ್ಲಾಧಿಕಾರಿ ರಾಜೇಂದ್ರ ಅವರು ಜಿಲ್ಲೆಯಲ್ಲಿ ಓರ್ವ ವ್ಯಕ್ತಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದ್ದರು.

ರಾಜ್ಯದಲ್ಲಿ ಈವರೆಗೆ ಕೊರೊನಾಗೆ ನಾಲ್ವರು ಬಲಿಯಾಗಿದ್ದು 128 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ಅದರಂತೆ ದೇಶದಲ್ಲಿ ಈವರೆಗೆ 2547 ಮಂದಿಯಲ್ಲಿ ಸೋಂಕಿದ್ದು, ಅವರಲ್ಲಿ 63 ಮಂದಿ ಮೃತಪಟ್ಟಿದ್ದಾರೆ, 163ಮಂದಿ ಗುಣಮುಖರಾಗಿದ್ದಾರೆ, ಇನ್ನೂ 2322 ಸೋಂಕಿತರಲ್ಲಿ ಆಸ್ಪತ್ರೆಯಲ್ಲೇ ಇರಿಸಿಕೊಂಡು ಸಿಕಿತ್ಸೆ ನೀಡಲಾಗುತ್ತಿದೆ.

ವಿಶ್ವಾದ್ಯಂತ 1097909 ಮಂದಿಗೆ ಸೋಂಕು

ವಿಶ್ವಾದ್ಯಂತ 1097909 ಮಂದಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಅವರಲ್ಲಿ 225942 ಸೋಂಕಿತರು ಗುಣಮುಖರಾಗಿದ್ದಾರೆ, ಇನ್ನು 59132 ಮಂದಿ ಮೃತಪಟ್ಟಿದ್ದಾರೆ.

ಮನೆಯಿಂದ ಹೊರಬರದಂತೆ ಮನವಿ

ಬಾಗಲಕೋಟೆಯಲ್ಲಿ 75 ವರ್ಷದ ಓರ್ವ ವೃದ್ಧನಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತ ವ್ಯಕ್ತಿಯು ವಾಸಿಸುವ ಸುತ್ತಮುತ್ತಲಿನ ವ್ಯಾಪ್ತಿಯ 0.5 ಕಿಮೀ ಪ್ರದೇಶವನ್ನು ಸಂಪೂರ್ಣವಾಗಿ ನಿರ್ಬಂಧ ಹೇರಲಾಗಿದ್ದು, ಸಾರ್ವಜನಿಕರು ಮನೆ ಬಿಟ್ಟು ಹೊರಬರದಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದರು. ಆದರೆ ಶುಕ್ರವಾರ ರಾತ್ರಿ 10.30ರ ಸುಮಾರಿಗೆ ಆತ ಮೃತಪಟ್ಟಿದ್ದಾರೆ. ಇದರಿಂದ ಎಚ್ಚೆತ್ತ ಜಿಲ್ಲಾಡಳಿತ ಮೃತರ ಅಂತ್ಯಕ್ರಿಯೆಗೆ ಬೇಕಾದ ಸಿದ್ಧತೆ ಮಾಡಿಕೊಂಡಿದೆ.

  ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸುದ್ಧಿಗೋಷ್ಠಿ

ಜಿಲ್ಲೆಯಲ್ಲಿ ಇದು ಮೊದಲ ಪ್ರಕರಣವಾಗಿದ್ದು, ಸೋಂಕಿತ ವ್ಯಕ್ತಿಯನ್ನು ಜಿಲ್ಲಾ ಆಸ್ಪತ್ರೆಯ ಐಸೋಲೇಶನ್ ವಾರ್ಡ್‌ ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯಾಗಿ ಮಾಡಲಾಗಿದ್ದು, ಅಲ್ಲಿರುವ ರೋಗಿಗಳನ್ನು ಹಳೇ ಬಾಗಲಕೋಟೆಯಲ್ಲಿರುವ 50 ಹಾಸಿಗೆಯ ಆಸ್ಪತ್ರೆ ಹಾಗೂ ಕುಮಾರೇಶ್ವರ ಆಸ್ಪತ್ರೆಗೆ ರವಾನಿಸಿ ಆಯುಷನ್ಮಾನ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸೆ ನೀಡಲಾಗುವುದೆಂದು ತಿಳಿಸಿದ್ದರು.

ಸೋಂಕಿತ ವ್ಯಕ್ತಿಯನ್ನು ಕಳೆದ 15 ದಿನಗಳಲ್ಲಿ ಯಾರು ಸಂಪರ್ಕ ಹೊಂದಿದ್ದಾರೆಯೋ ಅವರನ್ನು ಪತ್ತೆ ಹಚ್ಚು ಕಾರ್ಯ ಮಾಡಲಾಗುತ್ತಿದೆ. ಅಲ್ಲದೇ ಸೋಂಕಿತ ವ್ಯಕ್ತಿಯನ್ನು ಸಂಪರ್ಕಿಸಿದವರು ಸ್ವಯಂ ಪ್ರೇರಿತರಾಗಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪ್ರಕಾಶ ಬಿರಾದಾರ (9449843160) ಅವರನ್ನು ಕೂಡಲೇ ಸಂಪರ್ಕಿಸಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳು ಕೋರಿದರು. ಡಯಾಲಿಸಿಸ್ ಮಾಡುವಂತ ರೋಗಿಗಳನ್ನು ಕುಮಾರೇಶ್ವರ, ಸುಭಾಷ ಮತ್ತು ಕೆರೂಡಿ ಆಸ್ಪತ್ರೆಗಳಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಕೊರೊನಾಗೆ ಉತ್ತಮ ಔಷಧಿ ಎಂದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದ ಮತ್ತು ಸ್ಟೇಹೋಮ್ ಎಂದರು.

ಕೋವಿಡ್-19 ಸೋಂಕು ಹರಡುವದನ್ನು ತಡೆಗಟ್ಟಬೇಕಾದರೆ ಮನೆಯಿಂದ ಹೊರಗಡೆ ಯಾರು ಅನಾವಶ್ಯಕವಾಗಿ ಬರಕೂಡದು. ನಿಯಮ ಉಲ್ಲಂಘಿಸಿ ಅನಗತ್ಯವಾಗಿ ತಿರುಗಾಡುತ್ತಿರುವುದು ಕಂಡುಬಂದಲ್ಲಿ ಕಾನೂನು ರೀತಿಯಲ್ಲಿ ಸೂಕ್ತ ಕ್ರಮಕೈಗೊಳ್ಳಲಾಗುವುದು.

l  ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಬಾಗಲಕೋಟೆ ಜಿಲ್ಲಾಧಿಕಾರಿ

Leave a Reply

error: Content is protected !!
LATEST
ಸೆ.12ರಂದು 5 ಭಾಷೆಗಳಲ್ಲಿ ಬೆಳ್ಳಿತೆರೆ ಮೇಲೆ ARM- ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಬೇಕೇಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರು: ಕಲುಷಿತ ನೀರು ಸೇವಿಸಿ 12ಮಂದಿಗೆ ವಾಂತಿ, ‌ಭೇದಿ, ಓರ್ವ ಮೃತ ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ KSRTC ನೌಕರರ ಕಿತ್ತು ತಿನ್ನುವ ಭ್ರಷ್ಟರು: ಹೋಟೆಲ್‌ಗೆ ತಿನ್ನಲು ಹೋಗಿ ನೌಕರನಿಗೆ ಫೋನ್‌ ಪೇ ಮಾಡಲು ಹೇಳಿದ ಎಟಿಐ ಗಂಗಾಧ... KSRTC ಮಂಡ್ಯ: ಓವರ್‌ಟೇಕ್‌ ನೆಪದಲ್ಲಿ ತಾನೇ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆಸಿ ಅಪಘಾತದ ಹೈಡ್ರಾಮ ಮಾಡಿದ ಬೈಕ್‌ ಸವಾರ ಯೋಗ... KSRTC: ಆ‌ರ್‌ಟಿಒ ಚಾಲನಾ ಪರವಾನಗಿ ಅಮಾನತುಗೊಳಿಸಿದ ಚಾಲಕರಿಗೆ ಡ್ಯೂಟಿ ಕೊಟ್ಟರೆ ಕ್ರಮ- ಡಿಸಿ ಸೂಚನೆ ಆರೋಗ್ಯ ಶಿಬಿರ ಸಾಮಾಜಿಕ ಜವಾಬ್ದಾರಿ: ನ್ಯಾಯ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ : ಬಿವೈವಿ