NEWSದೇಶ-ವಿದೇಶಸಿನಿಪಥ

ಬಾಲಿವುಡ್‌ ನಟ ಇಫಾರ್ನ್‌ ಖಾನ್‌ ಇನ್ನಿಲ್ಲ

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಬಾಲಿವುಡ್ ಖ್ಯಾತ ನಟ ಇರ್ಫಾನ್ ಖಾನ್ (53) ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ.

ಖಾನ್ ನಿಧನ ಬಾಲಿವುಡ್ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಿನಿಮಾ, ರಂಗಭೂಮಿ, ರಾಜಕೀಯ ಮತ್ತುಉದ್ಯಮಿಗಳು ಸೇರಿದಂತೆ ಎಲ್ಲಾ ರಂಗದ ಗಣ್ಯರು  ಕಂಬನಿ ಮಿಡಿದಿದ್ದಾರೆ.

ದೊಡ್ಡ ಕರುಳು ಸಮಸ್ಯೆಯಿಂದ ಬಳಲುತ್ತಿದ್ದ ಇರ್ಫಾನ್ ಖಾನ್ ಅವರನ್ನು ಮಂಗಳವಾರ ಮಧ್ಯಾಹ್ನ ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಇಂದು ಬೆಳಗ್ಗೆ ಅಸುನೀಗಿದ್ದಾರೆ ಎಂದು ಕುಟುಂಬ ಮೂಲಗಳು ಖಚಿತಪಡಿಸಿವೆ.

ಇತ್ತೀಚೆಗೆ ಇರ್ಫಾನ್ ತಾಯಿ ಸಯೀದಾ ಬೇಗಂ(95ವರ್ಷ) ಅವರು ವಯೋಸಹಜ ಕಾಯಿಲೆಯಿಂದ ಜೈಪುರದಲ್ಲಿ ನಿಧನರಾಗಿದ್ದರು. ಆದರೆ ಪುತ್ರ ಇರ್ಫಾನ್‌ಗೆ ಲಾಕ್ ಡೌನ್‌ನಿಂದಾ ಮುಂಬೈನಲ್ಲಿ ಇದ್ದಿದ್ದು, ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ವಾಟ್ಸ್‌ಆಪ್‌ ವೀಡಿಯೋ ಮೂಲಕ ತನ್ನ ಮೃತ ತಾಯಿಯ ಅಂತಿಮ ದರ್ಶನ ಪಡೆದಿದ್ದರು.

ಈ ಹಿಂದೆ ನಟ ಇರ್ಫಾನ್ ಖಾನ್ ನ್ಯೂರೋಎಂಡೋಕ್ರೈನ್ ಸಮಸ್ಯೆಯಿಂದ ಬಳಲುತ್ತಿದ್ದು, ಇದಕ್ಕಾಗಿ ತಾನು ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು 2018ರಲ್ಲಿ ಘೋಷಿಸಿದ್ದರು. ಅದಕ್ಕಾಗಿ ಅವರು ವಿದೇಶಕ್ಕೆ ತೆರಳಿ ಚಿಕಿತ್ಸೆಯನ್ನು ಪಡೆದಿದ್ದರು.

ಬಾಲಿವುಡ್ ನ ವಾರಿಯರ್, ಮಕ್ಬೂಲ್, ಹಾಸಿಲ್, ಪಾನ್ ಸಿಂಗ್ ತೋಮರ್, ರೋಗ್. ಲೈಫ್ ಆಫ್ ಪೈ, ನೇಮ್ ಸೇಕ್, ಸೇರಿದಂತೆ ಹಲವು ಚಿತ್ರಗಳ ಮೂಲಕ ಇರ್ಫಾನ್ ಚಿತ್ರಪ್ರೇಮಿಗಳ ಮನಗೆದ್ದಿದ್ದರು.

ಇರ್ಫಾನ್ ಖಾನ್ ನಿಧನಕ್ಕೆ ಗಣ್ಯರ ಸಂತಾಪ

ನಟನ ಅಗಲಿಕೆಯ ಸುದ್ದಿ ತಿಳಿದ ಸಿನಿಮಾ ತಾರೆಯರು, ರಾಜಕೀಯ ವ್ಯಕ್ತಿಗಳು, ಉದ್ಯಮಿಗಳು ಸೇರಿ ಎಲ್ಲಾ ರಂಗದ ಗಣ್ಯರು ಇರ್ಫಾನ್ ಖಾನ್ ಅವರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವಂತ ಶಕ್ತಿಯನ್ನು ದೇವರು ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುವ ಮೂಲಕ ಸಂತಾಪ ಸೂಚಿಸಿದ್ದಾರೆ.

#IrrfanKhan.

Leave a Reply

error: Content is protected !!
LATEST
ಸಾವಿರ ವರ್ಷಗಳ ಇತಿಹಾಸವಿರುವ ಈಶ್ವರ ದೇವಾಲಯ ಜೀರ್ಣೋದ್ಧಾರಕ್ಕೆ ಚಾಲನೆ: ನೇಮಿರಾಜ್ ಕೃಷಿ ಸಚಿವರ ತವರು ನೆಲದಲ್ಲೇ ಕೊಬ್ಬರಿ ಮಾರಿದ ರೈತರ ಪರದಾಟ : ರೈತ ಸಂಘ ಕಿಡಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಪಿಎಸ್ ಪಿಂಚಣಿಗಾರರ ಬೃಹತ್ ಪ್ರತಿಭಟನೆ- ಆಕ್ರೋಶ ಮಳೆ ನೀರ ನೇರವಾಗಿ ಒಳಚರಂಡಿಗೆ ಬಿಡುವವರ ವಿರುದ್ಧ ಜಲಮಂಡಳಿ ಕ್ರಮಕ್ಕೆ ಆಕ್ಷೇಪ: ಡಿಸಿಎಂ ಡಿಕೆಶಿಗೆ ಎಎಪಿ ಬಹಿರಂಗ ಪತ್ರ ಕಿಟಕಿ ಮೂಲಕ ನುಸುಳಿ ಹಣ ದೋಚುತ್ತಿದ್ದ ಖತರ್ನಾಕ್‌ ಅಕ್ಕ-ತಮ್ಮ ಅಂದರ್‌ KSRTC: ನೌಕರರ ಸಮಸ್ಯೆ ನೀಗಿಸುವ ಸಮರ್ಥ ಪಡೆಯೂ ಇಲ್ಲ ಸಮರ್ಥ ನಾಯಕನೂ ಇಲ್ಲ! ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ ಮಹರ್ಷಿ ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ: ಸಚಿವ ನಾಗೇಂದ್ರ ಸ್ಪಷ್... ಪಿ.ಚಂದ್ರಶೇಖರನ್‌ ಆತ್ಮಹತ್ಯೆ ಪ್ರಕರಣ: ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿರುವ ಮಂತ್ರಿಯ ಸಂಪುಟದಿಂದ ಕಿತ್ತುಹಾಕಿ: ಎಎಪಿ KKRTC: ಡಬಲ್ ಡ್ಯೂಟಿ, ದೂರದ ಪ್ರಯಾಣಕ್ಕೆ ವಿಶ್ರಾಂತಿ ಕಡ್ಡಾಯ ಆದರೆ ದೇವದುರ್ಗ ಘಟಕದ ನೌಕರರಿಗೆ ಮರೀಚಿಕೆ!