NEWSಸಿನಿಪಥ

ಬುಲೆಟ್‌ ಫ್ರಕಾಶ್‌ ಪಾರ್ಥಿವ ಶರೀರದ ದರ್ಶನಕ್ಕೆ ಅವಕಾಶವಿಲ್ಲ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವ ಭಯದ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಸೋಮವಾರ ಸಂಜೆ ವಿಧಿವಶರಾದ ಖ್ಯಾತ ನಟ ಬುಲೆಟ್ ಪ್ರಕಾಶ್ (44) ಅವರ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶವಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಕೊರೊನಾ ಸೋಂಕು ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ​ಪ್ರಕಾಶ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಅವಕಾಶ ನಿರಾಕರಿಸಲಾಗಿದೆ. ಇದೇ ರೀತಿ ಸೆಲೆಬ್ರಿಟಿಗಳು ಸಹ  ಅಂತಿಮ ದರ್ಶನ ಪಡೆಯುವಂತಿಲ್ಲ. ಆದರೆ, ಸಂಬಂಧಿಕರಿಗಷ್ಟೇ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಸುದ್ದಿಗಾರರೊಂದಿಗೆ ಮಾಹಿತಿ ನೀಡಿದ್ದಾರೆ.

ಆದರೆ ಕಡಿಮೆ ಜನರು ಪೂಜೆ ಮತ್ತು ಅತ್ಯಕ್ರಿಯೆಯಲ್ಲಿ ಭಾಗಿಯಾಗಬಹುದು. ದೂರದಿಂದಲೇ ನಟ ಬುಲೆಟ್​​ ಪ್ರಕಾಶ್​ ಅವರಿಗೆ ನಮನ ಸಲ್ಲಿಸುವಂತೆ ಅಭಿಮಾನಿಗಳಲ್ಲಿ ಅಶೋಕ್‌ ಮನವಿ ಮಾಡಿದ್ದಾರೆ.

ಬುಲೆಟ್ ಪ್ರಕಾಶ್ ನನ್ನ ಗೆಳೆಯ
ಬುಲೆಟ್ ಪ್ರಕಾಶ್ ನನ್ನ ಒಳ್ಳೆಯ ಗೆಳೆಯರಲ್ಲಿ ಒಬ್ಬರಾಗಿದ್ದಾರೆ ಎಂದು ಅಶೋಕ್ ಹೇಳಿಕೊಂಡಿದ್ದಾರೆ. ಪ್ರತಿ ತಿಂಗಳು ನಾವಿಬ್ಬರು ಭೇಟಿ ಮಾಡುತ್ತಿದ್ದೇವು. ಕಿಡ್ನಿ ಟ್ರಾನ್ಸ್‌ಫಾರ್ಮೇಷನ್ ಆಗಬೇಕು ಸಹಾಯ ಮಾಡು ಎಂದು ಹೇಳಿದ್ದ. ನಾನು ಒಪ್ಪಿಕೊಂಡಿದ್ದೆ. ಮುಖ್ಯಮಂತ್ರಿಗಳು ಎರಡು ಲಕ್ಷ ರೂಪಾಯಿಯನ್ನು  ಆಪರೇಷನ್​​ಗೆ ಕೊಡುವುದಾಗಿ ಒಪ್ಪಿದ್ದರು. ಆದರೆ ಈಗ ಅವರೇ ಇಲ್ಲ ಅನ್ನೋದು ದುಃಖ ತಂದಿದೆ ಎಂದು ಕಣ್ಣಾಲೆಯನ್ನು ತೇವಮಾಡಿಕೊಂಡರು.

ಇವತ್ತು ಅವರ ದೇಹವನ್ನು ಮನೆಗೆ ತೆಗೆದುಕೊಂಡು ಹೋಗುತ್ತಿಲ್ಲ. ಬದಲಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗುತ್ತದೆ. ಅಂತ್ಯಕ್ರಿಯೆ  ಹೆಬ್ಬಾಳದಲ್ಲಿ ನಡೆಯಲಿದೆ. ಆದರೆ, ಅಂತಿಮ ದರ್ಶನಕ್ಕೆ ಯಾವುದೇ ವ್ಯವಸ್ಥೆ ಮಾಡಲಾಗುವುದಿಲ್ಲ ಎಂದು ಹೇಳಿದರು.

ಆಸ್ಪತ್ರೆ ಬಿಲ್‌ ಕಟ್ಟಿದ ಸಚಿವ ಅಶೋಕ್‌
ಇನ್ನು ಬುಲೆಟ್ ಪ್ರಕಾಶ್ ಅವರ ಆಸ್ಪತ್ರೆ ಬಿಲ್ ಅನ್ನು ಸಚಿವ ಆರ್.ಅಶೋಕ್ ಅವರೇ ಕಟ್ಟಿದ್ದಾರೆ ಎಂದು ನಟ ದುನಿಯಾ ವಿಜಯ್‌ ತಿಳಿಸಿದರು. ಅಲ್ಲದೆ ಅವರ ಸಹಾಯಕ್ಕೆ  ವಿಜಿ ಧನ್ಯವಾದ ತಿಳಿಸಿದರು.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...