NEWSಕೃಷಿನಮ್ಮಜಿಲ್ಲೆನಮ್ಮರಾಜ್ಯ

ಭತ್ತಕ್ಕೆ 500 ರೂ. ಪ್ರೋತ್ಸಾಹ ಧನಕ್ಕೆ ಆಗ್ರಹಿಸಿ ಕುರುಬೂರು ಶಾಂತಕುಮಾರ್‌ ನೇತೃತ್ವದಲ್ಲಿ ರೈತರ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಬ್ಬು ಬೆಳೆಗಾರರ 18ನೇ ದಿನದ ಆಹೋ ರಾತ್ರಿ ಧರಣಿ ನಿರತ ರೈತರು ಭತ್ತ ಖರೀದಿ ಕನಿಷ್ಠ ಬೆಂಬಲ ಬೆಲೆಗೆ ಪ್ರೋತ್ಸಾಹ ಧನ ರೂ -500 ನೀಡುವಂತೆ ಹಾಗೂ ಕಬ್ಬಿಗೆ ಬೆಳೆ ವಿಮೆ ಜಾರಿಗೆ ತರಲು ಕೃಷಿ ಆಯುಕ್ತರ ಕಚೇರಿ ಎದುರು ಭತ್ತ ಸುರಿದು ವಿಸ್ತೃತ ರೀತಿಯಲ್ಲಿ ಪ್ರತಿಭಟನೆ ಮಾಡಿದರು.

ರಾಜ್ಯಾದ್ಯಂತ ನಿರಂತರ ಮಳೆ ಅತಿವೃಷ್ಟಿಯಿಂದ ಭತ್ತದ ಬೆಳೆಯಲ್ಲಿ ಇಳುವರಿ ಕುಂಠಿತವಾಗಿದ್ದು, ಭತ್ತ ಬೆಳೆದ ರೈತನ ಉತ್ಪಾದನೆ ವೆಚ್ಚ ಏರಿಕೆಯಾಗಿರುವ ಕಾರಣ ನಷ್ಟ ಅನುಭವಿಸುವಂತಾಗಿದೆ, ರಾಜ್ಯ ಸರ್ಕಾರ ಭತ್ತ ಖರೀದಿ ಕೇಂದ್ರಗಳನ್ನು ಆರಂಭಿಸಲು ಕ್ರಮ ಕೈಗೊಂಡಿದೆ, ಕೇಂದ್ರ ಸರ್ಕಾರ ನಿಗದಿ ಮಾಡಿದ ಕನಿಷ್ಠ ಬೆಂಬಲ ಬೆಲೆಗೆ ಭತ್ತ ಖರೀದಿ ಮಾಡಿದರೆ ರೈತನಿಗೆ ಯಾವುದೇ ಲಾಭ ಸಿಗುವುದಿಲ್ಲ.

ಹೀಗಾಗಿ ಪ್ರತಿ ಕಿಂಟಲ್ ಭತ್ತಕ್ಕೆ ಎಂಎಸ್‌ಪಿ ಗೆ ಹೆಚ್ಚುವರಿ ಪ್ರೋತ್ಸಾಹ ಧನವಾಗಿ-500 ರೂ. ಗಳನ್ನು ನೀಡುವ ಮೂಲಕ ರೈತರನ್ನು ರಕ್ಷಣೆ ಮಾಡಬೇಕು. ರಾಜ್ಯ ಸರ್ಕಾರ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಹಚ್ಚ ಬಾರದು, ಇದು ರೈತರನ್ನು ಒಡೆದಾಳುವ ನೀತಿಯಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭತ್ತ ಖರೀದಿ ಕೇಂದ್ರಗಳ ಮೂಲಕ ಗರಿಷ್ಠ 40 ಕ್ಕಿಂಟಲ್ ಖರೀದಿಸಲು ಆದೇಶ ಹೊರಡಿಸಿದ್ದೀರಿ, ಈ ಆದೇಶವನ್ನು ಮರುಪರಿಶೀಲನೆ ಮಾಡಿ ಪ್ರತಿ ರೈತರಿಂದ ಖರೀದಿ ಗರಿಷ್ಠ 100 ಕ್ವಿಂಟಲ್ ಗೆ ಹೆಚ್ಚಿಸಬೇಕು, ಭತ್ತ ಖರೀದಿ ಕೇಂದ್ರಗಳನ್ನು ತೆಲಂಗಾಣ, ತಮಿಳುನಾಡು ರಾಜ್ಯಗಳಲ್ಲಿ ಜಾರಿಯಲ್ಲಿರುವಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆರಂಭಿಸಬೇಕು ಎಂದು ಆಗ್ರಹಿಸಿದರು.

ಕಬ್ಬು ಉತ್ಪಾದನೆಗೆ ಎಕರೆಗೆ ಕನಿಷ್ಠ ಲಕ್ಷ ರೂ.ಖರ್ಚಾಗುತ್ತದೆ ಆದರೆ ಕಬ್ಬಿನ ಬೆಳೆಗೆ ಬೆಂಕಿ ಬಿದ್ದಾಗ ಸರ್ಕಾರ ನೀಡುವ ನಷ್ಟ ಪರಿಹಾರ 4ಸಾವಿರ ರೂ. ಇರುತ್ತದೆ. ಇದು ಕೂಲಿಗೆ ಕೊಟ್ಟಿರುವ ಹಣದ ಬಡ್ಡಿಗೂ ಸಾಲುವುದಿಲ್ಲ. ಹೀಗಾಗಿ ನಷ್ಟ ಪರಿಹಾರ ನೀಡುವ ಮಾನದಂಡ ಏರಿಕೆ ಮಾಡಬೇಕು ಎಂದು ಒತ್ತಾಯಿಸಿದರು.

ಮಳೆ ಹಾನಿಯಿಂದ ಬೆಳೆ, ಬೆಂಕಿ ಆಕಸ್ಮಿಕದಿಂದ ಕಬ್ಬು ಬೆಳೆ ನಾಶವಾದರೆ ಪರಿಹಾರ ಸಿಗುವುದಿಲ್ಲ, ಅಂತಹ ಸಂದರ್ಭದಲ್ಲಿ ರೈತ ಸಾಲ ತೀರಿಸಲು ಕಷ್ಟವಾಗುತ್ತಿದೆ ಆದಕಾರಣ ಕಬ್ಬು ಬೆಳೆ ವಿಮೆ ಜಾರಿಗೆ ತಂದು ನಷ್ಟ ತುಂಬಿ ಕೊಡುವಂತಹ ಯೋಜನೆ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಪ್ರಸಕ್ತ ಸಾಲಿನ ಕಬ್ಬು ಬೆಳೆ ಉತ್ಪಾದನಾ ವೆಚ್ಚ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿ ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ನಿಗದಿ ಮಾಡಲು ವರದಿ ನೀಡಬೇಕು ಎಂಬ ನಮ್ಮ ಈ ಎಲ್ಲ ಒತ್ತಾಯಗಳ ಬಗ್ಗೆ ರಾಜ್ಯ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಕಚೇರಿಯ ಮುಂದೆ ಭತ್ತ ಸುರಿದು ಪ್ರತಿಭಟನೆ ನಡೆಸಿದರು.

ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬುರ್ ಶಾಂತಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸುರೇಶ್ ಮಾ ಪಾಟೀಲ್, ಬಸವರಾಜ ಪಾಟೀಲ್, ಅತ್ತಹಳ್ಳಿ ದೇವರಾಜ್, ರಮೇಶ್ ಉಗಾರ್, ಜಗದೀಶ್, ಬರಡನಪುರ ನಾಗರಾಜ್, ಚೆನ್ನಪ್ಪ ಮುಂತಾದವರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ