NEWSದೇಶ-ವಿದೇಶ

ಭಾರತದ ಎಫ್‌ಡಿಐ ಮಾನದಂಡ ಮುಕ್ತ ವ್ಯಾಪಾರಕ್ಕೆ ವಿರುದ್ಧ

ಚೀನಾದ ರಾಯಭಾರ ಕಚೇರಿಯ ವಕ್ತಾರ ಜಿ ರಾಂಗ್ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ವಿದೇಶಿ ನೇರ ಬಂಡವಾಳ ಹೂಡಿಕೆಗಾಗಿ (ಎಫ್‌ಡಿಐ) ಭಾರತ ಮಾಡಿರುವ ಹೊಸ ಮಾನದಂಡಗಳು ವಿಶ್ವ ವ್ಯಾಪಾರ ಸಂಘಟನೆಯ ತಾರತಮ್ಯ ರಹಿತ ತತ್ವಗಳು ಹಾಗೂ ಮುಕ್ತ ವ್ಯಾಪಾರದ ಸಾಮಾನ್ಯ ಪ್ರವೃತ್ತಿಗಳಿಗೆ ವಿರುದ್ಧವಾಗಿವೆ ಎಂದು ಚೀನಾದ ರಾಯಭಾರ ಕಚೇರಿಯ ವಕ್ತಾರ ಜಿ ರಾಂಗ್ ಟೀಕಿಸಿದ್ದಾರೆ.

ಸೋಮವಾರ ಈ ಕುರಿತು ಹೇಳಿಕೆ ನೀಡಿರುವ ಚೀನಾ ಅಧಿಕಾರಿ ನಿರ್ದಿಷ್ಟ ದೇಶಗಳಿಂದ ವಿದೇಶಿ ನೇರ ಹೂಡಿಕೆಗಾಗಿ ಭಾರತ ಹೊಸದಾಗಿ ಪರಿಚಯಿಸಿರುವ ‘ಹೆಚ್ಚುವರಿ ಅಡೆತಡೆಗಳು’ ನೀತಿಗಳು ಮುಕ್ತ, ನ್ಯಾಯ ಸಮ್ಮತ, ತಾರತಮ್ಯ ರಹಿತ, ಪ್ರಾಮಾಣಿಕ ವಾತಾವರಣ ಸೃಷ್ಟಿಸಬೇಕು ಆದರೆ ಇವು ಜಿ-20 ಗುಂಪಿನಿಂದ ಹೊರಬಂದ ಒಮ್ಮತದ ನಿರ್ಣಯಗಳಿಗೂ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕ ರೋಗ ಉಲ್ಬಣದ ನಂತರ  ಭಾರತದೊಂದಿಗೆ ಭೂ ಗಡಿಯನ್ನು ಹಂಚಿಕೊಳ್ಳುವ ದೇಶಗಳಿಂದ ವಿದೇಶಿ ಹೂಡಿಕೆಗಳಿಗೆ ಅನುಮತಿಯನ್ನು ಭಾರತ ಕಳೆದ ವಾರ ಕಡ್ಡಾಯಗೊಳಿಸಿದೆ. ಇದರಿಂದ ಡಬ್ಲ್ಯುಟಿಒ ತತ್ವಗಳು ಉಲ್ಲಂಘನೆಯಾಗಿವೆ ಎಂದು ತಿಳಿಸಿದ್ದಾರೆ.

ನಿರ್ದಿಷ್ಟ ರಾಷ್ಟ್ರಗಳಿಂದ ವಿದೇಶಿ ನೇರ ಹೂಡಿಕೆಗಾಗಿ ಭಾರತ ರೂಪಿಸಿರುವ ಹೆಚ್ಚುವರಿ ಅಡೆತಡೆಗಳು ನೀತಿಯಿಂದಾಗಿ ಉದಾರೀಕರಣ ಮತ್ತು ವ್ಯಾಪಾರ ಮತ್ತು ಹೂಡಿಕೆಯ ಅನುಕೂಲತೆಯ ಸಾಮಾನ್ಯ ಪ್ರವೃತ್ತಿಗೆ ವಿರುದ್ಧವಾಗಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಕೊಟ್ಟು ಹಣ ಉಳಿಯುತ್ತದೆ : ಎಎಪಿ ಜೂ.24ರಂದು ಶಿವಮೊಗ್ಗದಲ್ಲಿ ರಾಷ್ಟ್ರ, ರಾಜ್ಯ ರೈತ ಮುಖಂಡರ ಸಮಾವೇಶ: ಕುರುಬೂರ್ ಶಾಂತಕುಮಾರ್ ಸಂತ್ರಸ್ತೆ ಅಪರಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು KSRTCಯಿಂದ 300ಕ್ಕೂ ಹೆಚ್ಚು ಹೊಸ ಮಾರ್ಗಗಳಲ್ಲಿ ಬಸ್‌ ಓಡಾಟ: ಸಚಿವ ರಾಮಲಿಂಗಾರೆಡ್ಡಿ BMTC: 50ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್​​ಗಳ ಚಾಲಕರಿಗೆ ಗೇಟ್‌ಪಾಸ್‌ ಅತ್ಯಾಚಾರ ಆರೋಪಿ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನ ಎಸ್‌ಐಟಿ ಕಸ್ಟಡಿ ಅಂತ್ಯ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಎಎಪಿ ಪ್ರತಿಭಟನೆ ನಟ ದರ್ಶನ್‌ ಸ್ಥಿತಿಗೆ ಮರುಗಿ ಅಭಿಮಾನಿ ಅನ್ನನೀರು ಬಿಟ್ಟು ಆತ್ಮಹತ್ಯೆಗೆ ಶರಣು? KSRTC ‘ಅಶ್ವಮೇಧ’ಗಳಿಂದ ಸಂಸ್ಥೆಗೆ ಶೇ.10ಕ್ಕೂ ಹೆಚ್ಚು ಲಾಭ : ಸಚಿವ ರಾಮಲಿಂಗಾರೆಡ್ಡಿ ಅತೀ ಶೀಘ್ರದಲ್ಲೇ NWKRTC ಒಡಲು ಸೇರಲಿವೆ 350 ಹೊಸ ಎಲೆಕ್ಟ್ರಿಕ್​ ಬಸ್‌ಗಳು