VIJAYAPATHA.IN > ವಿಜಯಪಥ > NEWS > ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ದೆಹಲಿಗೆ ಪ್ರಯಾಣ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದು, ಬಿಜೆಪಿ ನಾಯಕರ ಭೇಟಿ ಕುರಿತು ಸ್ಪಷ್ಟನೆಯನ್ನೂ ನೀಡಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬುಧವಾರ ದೆಹಲಿಗೆ ಪ್ರಯಾಣ ಬೆಳೆಸಿದ ಅವರು, ಈ ವೇಳೆ ಮಾತನಾಡಿ, ದೆಹಲಿ ಬಿಜೆಪಿ ನಾಯಕರ ಭೇಟಿ ವಿಚಾರವನ್ನು ಅಲ್ಲಗಳೆದರು.
ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸಂಬಂಧ ಯಾವುದೇ ಸೀಟು ಹಂಚಿಕೆ ಕುರಿತು ಚರ್ಚಗೆ ಹೋಗ್ತಿಲ್ಲ. ಬದಲಾಗಿ ವೈಯಕ್ತಿಕ ಕೆಲಸದ ನಿಮಿತ್ತ ಹೋಗುತ್ತಿದ್ದೇನೆ. ದೆಹಲಿಗೆ ಹೋಗೋದು ಏನ್ ವಿಶೇಷನಾ ಎಂದು ಕೇಳಿದರು.
ಸೀಟು ಹಂಚಿಕೆ ಕುರಿತು ಬಿಜೆಪಿ ನಾಯಕರ ಜತೆ ಚರ್ಚೆಗೆ ತೆರಳುತ್ತಿದ್ದಾರೆ ಎನ್ನಲಾಗಿತ್ತು. ಆದರೆ ಅದನ್ನು ಕುಮಾರಸ್ವಾಮಿ ಅವರು ಅಲ್ಲಗಳೆದಿದ್ದಾರೆ. ಆದರೂ ದೆಹಲಿಯತ್ತ ಬಿಳಿ ಶರ್ಟ್, ಪಂಚೆ ಉಡುಗೆಯಲ್ಲಿ ಪ್ರಯಾಣ ಬೆಳೆಸಿದ್ದಾರೆ.
![](https://vijayapatha.in/wp-content/uploads/2024/02/QR-Code-VP-1-1-300x62.png)
Related
Deva