NEWSನಮ್ಮಜಿಲ್ಲೆರಾಜಕೀಯ

ಮಂಡ್ಯ ಜಿಲ್ಲಾ ಉಸ್ತುವಾರಿಯಿಂದ ಕಂದಾಯ ಸಚಿವ ಆರ್‌. ಅಶೋಕ್‌ ಔಟ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಂಡ್ಯದ ನೂತನ ಜಿಲ್ಲಾ ಉಸ್ತುವಾರಿಯಾಗಿ ನೇಮಕಗೊಂಡಿದ್ದ ಕಂದಾಯ ಸಚಿವ ಆರ್‌.ಅಶೋಕ್‌ ಅವರನ್ನು ಬದಲಾವಣೆ ಮಾಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ.

ಈ ಮೂಲಕ ಜಿಲ್ಲೆಯ ಉಸ್ತುವಾರಿಯಿಂದ ಸಚಿವ ಅಶೋಕ್ ಔಟ್ ಆಗಿದ್ದಾರೆ. ಇವರ ವಿರುದ್ಧ ಗೋಬ್ಯಾಕ್ ಅಭಿಯಾನ (Go Back campaign), ಹೊಂದಾಣಿಕೆ ರಾಜಕೀಯ ಆರೋಪ (Compromise is politically charged) ಕೇಳಿ ಬಂದ ಬೆನ್ನಲ್ಲೇ ಮಂಡ್ಯ ಉಸ್ತುವಾರಿ ಜವಾಬ್ದಾರಿಯಿಂದ ವಿಮುಕ್ತಿಗೊಳಿಸುವಂತೆ ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಶೋಕ್ ಪತ್ರ ಬರೆದಿದ್ದರು.

ಅಶೋಕ್ ಪತ್ರ ಸಿಎಂ ಅವರ ಕಚೇರಿ ತಲುಪಿದ ಬೆನ್ನಲ್ಲೇ ಮಂಡ್ಯ ಜಿಲ್ಲಾ ಉಸ್ತುವಾರಿ ಬದಲಾವಣೆಗೆ ಆದೇಶ ಹೊರಡಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ನಾರಾಯಣಗೌಡ ಅಥವಾ ಗೋಪಾಲಯ್ಯ ಅವರಲ್ಲಿ ಯಾರಿಗೆ ಮತ್ತೆ ಈ ಜಿಲ್ಲೆಯ ಹೊಣೆ ನೀಡಲಾಗುತ್ತದೆ ಎಂಬ ಕುತೂಹಲ ಈಗ ಎದ್ದಿದೆ.

ಸಿಎಂಗೆ ಅಶೋಕ್‌ ಬರೆದ ಪತ್ರದಲ್ಲಿ ಏನಿದೆ?: ಒಂದು ತಿಂಗಳಲ್ಲಿ ದಾವಣಗೆರೆಯ ದಾಖಲೆರಹಿತ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿಸಿ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಬೇಕಿದೆ. ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಸುಮಾರು ಹತ್ತು ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಕಾರ್ಯಕ್ರಮಕ್ಕೆ ನಗರದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು ಅದರ ಜವಬ್ದಾರಿ ನನ್ನ ಮೇಲಿದೆ.

ಕಂದಾಯ ಇಲಾಖೆ ಆರಂಭಿಸಿದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಜನಪ್ರಿಯವಾಗಿ ಹೊರಹೊಮ್ಮಿದೆ. ಪಕ್ಷದ ಶಾಸಕರು ಅವರ ಕ್ಷೇತ್ರಗಳಲ್ಲಿ ಗ್ರಾಮ ವಾಸ್ತವ್ಯಕ್ಕೆ ಪಾಲ್ಗೊಳ್ಳುವಂತೆ ಒತ್ತಡ ಹೇರುತ್ತಿದ್ದಾರೆ. ಇನ್ನೂ ಎರಡರಿಂದ ಮೂರು ಜಿಲ್ಲೆಗಳಲ್ಲಿ ನಾನು ಪಾಲ್ಗೊಳ್ಳಬೇಕಿದೆ.

ಬಸವಣ್ಣ ಹಾಗೂ ಕೆಂಪೇಗೌಡರ ಪುತ್ಥಳಿ ಸ್ಥಾಪಿಸುವ ಉಸ್ತುವಾರಿ ಸಮಿತಿಯಲ್ಲಿ ಅಧ್ಯಕ್ಷನಾಗಿರುವ ನಾನು ಒಂದು ತಿಂಗಳೊಳಗೆ ಕೆಲಸ ಪೂರ್ಣಗೊಳಿಸಿ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಬೇಕಿದೆ. 14ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಸಂಘಟನಾ ಸಮಿತಿಯ ಅಧ್ಯಕ್ಷನಾಗಿರುವ ನಾನು ಮುಂದಿನ ಮಾರ್ಚ್ 23 ರಿಂದ 30 ರವರೆಗೆ ಚಿತ್ರ ಪ್ರದರ್ಶನವನ್ನು ಯಶಸ್ವಿಯಾಗಿ ನಡೆಸಬೇಕಿದೆ ಎಂಬುವುದು ಸೇರಿ ಇತರ ವಿವರಣೆಯನ್ನು ನೀಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ KSRTC ಬಸ್‌-ಬೈಕ್ ನಡುವೆ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ