NEWSನಮ್ಮಜಿಲ್ಲೆರಾಜಕೀಯ

ಮತದಾನ ಜಾಗೃತಿ ಚಟುವಟಿಕೆಗಳ ಚುರುಕುಗೊಳಿಸಿ : ಜಿಲ್ಲಾಧಿಕಾರಿ ಆರ್.ಲತಾ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಜಾಗೃತಿ ಚಟುವಟಿಕೆಗಳನ್ನು ಚುರುಕುಗೊಳಿಸಬೇಕು.ಸಾರ್ವಜನಿಕ ಮತದಾರರಿಗೆ ಮತಚಲಾವಣೆಯ ಕುರಿತ ಮಾಹಿತಿ ನೀಡಲು ಎಲ್ಲ ಮತಗಟ್ಟೆಗಳಲ್ಲಿ ಇವಿಎಂ ಪ್ರಾತ್ಯಕ್ಷಿಕೆ ನಡೆಸಿ ಅರಿವು ಮೂಡಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.

ಬೀರಸಂದ್ರದ ಜಿಲ್ಲಾಡಳಿತ ಭವನದಲ್ಲಿ ಇಂದು ಜಿಲ್ಲೆಯ ನೋಡಲ್ ಅಧಿಕಾರಿಗಳು,ಕಂದಾಯ ನಿರೀಕ್ಷಕರು,ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಏರ್ಪಡಿಸಿದ್ದ ಇವಿಎಂ ಹಾಗೂ ವಿವಿಪ್ಯಾಟ್ ಬಳಕೆ ಕುರಿತ ತರಬೇತಿ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು,

ಜಿಲ್ಲೆಯಲ್ಲಿ 65 ಇವಿಎಂ ಯಂತ್ರಗಳನ್ನು ಪ್ರಾತ್ಯಕ್ಷಿಕೆಗೆ ಮೀಸಲಿಡಲಾಗಿದೆ. ಜಿಲ್ಲೆಯಾದ್ಯಂತ ಎಲ್ಲ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಮತದಾರರ ಬಳಿ ಅವುಗಳನ್ನು ಆಯೋಗದ ಮಾರ್ಗದರ್ಶಿ ಸೂತ್ರಗಳ ಪ್ರಕಾರ ಸುರಕ್ಷಿತವಾಗಿ ತೆಗೆದುಕೊಂಡು ಹೋಗಿ, ಮಾಹಿತಿ ನೀಡಬೇಕು.

ತರಬೇತಿ ನೀಡುವ ಅಧಿಕಾರಿ, ಸಿಬ್ಬಂದಿ ಸರಿಯಾದ ಮಾಹಿತಿಯೊಂದಿಗೆ ಜನರ ಬಳಿಗೆ ಹೋಗಬೇಕು. ಇವಿಎಂ ಹಾಗೂ ವಿವಿಪ್ಯಾಟ್ ಮತಯಂತ್ರಗಳ ಕಾರ್ಯವಿಧಾನ, ಚಲಾವಣೆಗೊಂಡ ಮತದ ಕುರಿತು ವಿವಿಪ್ಯಾಟ್ ಯಂತ್ರದಲ್ಲಿ ಖಚಿತಪಡಿಸಿಕೊಳ್ಳುವ ವಿಧಾನಗಳು ಮತ್ತಿತರ ಮಾಹಿತಿಗಳನ್ನು ಪ್ರಾತ್ಯಕ್ಷಿಕೆ ಮೂಲಕ ನೀಡಬೇಕು. ಸ್ವೀಪ್ ಚಟುವಟಿಕೆಗಳನ್ನು ವಿಭಿನ್ನವಾಗಿ ಕೈಗೊಂಡು ಮತದಾನದ ಮಹತ್ವ ಮನವರಿಕೆ ಮಾಡಿಕೊಡಬೇಕು ಎಂದರು.

ಜಿಪಂ ಉಪಕಾರ್ಯದರ್ಶಿ ‌ಡಾ‌.ನಾಗರಾಜ ಮಾತನಾಡಿ,ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ಜಂಟಿಯಾಗಿ ಜಿಲ್ಲೆಯಾದ್ಯಂತ ಇವಿಎಂ ಹಾಗೂ ವಿವಿಪ್ಯಾಟ್‌ಗಳ ಬಳಕೆ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಉಪವಿಭಾಗಾಧಿಕಾರಿ ತೇಜಸ್ ಕುಮಾರ ಮಾತನಾಡಿ, ಜಿಲ್ಲೆಯಾದ್ಯಂತ ಒಟ್ಟು 1337 ಮತಗಟ್ಟೆಗಳು ಸ್ಥಾಪನೆಯಾಗಲಿವೆ. ಭಾರತ ಚುನಾವಣಾ ಆಯೋಗವು ಮತದಾರರಲ್ಲಿ ವ್ಯಾಪಕ ಅರಿವು ಮೂಡಿಸಿ ಮತದಾನದ ಪ್ರಮಾಣ ಹೆಚ್ಚಿಸಲು ಸೂಚಿಸಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಅಧಿಕಾರಿಗಳು, ಸಿಬ್ಬಂದಿ ಜನರ ಬಳಿಗೆ ತೆರಳಿ ಇವಿಎಂ, ವಿವಿಪ್ಯಾಟ್ ಬಳಕೆಗಳ ಕುರಿತು ಸಮರ್ಪಕ ಮಾಹಿತಿ ನೀಡಬೇಕು ಎಂದರು‌.

ಭೂದಾಖಲೆಗಳ ಉಪನಿರ್ದೇಶಕ ಹನುಮೇಗೌಡ ಮಾತನಾಡಿ,ಜನರಲ್ಲಿ ಇವಿಎಂ, ವಿವಿಪ್ಯಾಟ್ ಮತಯಂತ್ರಗಳ ಬಳಕೆ ಕುರಿತು ಆತ್ಮವಿಶ್ವಾಸ ಮೂಡಿಸಬೇಕು. ಆಯೋಗದ ನಿರ್ದೇಶನಗಳ ಅನುಸಾರವಾಗಿ ಈ ತಂತ್ರಗಳನ್ನು ತೆಗೆದುಕೊಂಡು ಹೋಗಿ, ಸುರಕ್ಷತೆಗೆ ಆದ್ಯತೆ ನೀಡಬೇಕು. ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ಎಚ್ಚರವಹಿಸಬೇಕು ಎಂದು ಸಲಹೆ ನೀಡಿದರು.

ತಹಸೀಲ್ದಾರ್‌ ಶಿವರಾಜ, ರಾಜ್ಯ ಮಟ್ಟದ ತರಬೇತಿದಾರ ಅಮೀರ್‌ಪಾಷಾ, ಉಪ ಕೃಷಿ ನಿರ್ದೇಶಕಿ ವಿನುತಾ ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು