NEWS

ಮತ್ತೊಂದು ಕೋವಿಡ್-19 ಪ್ರಕರಣ ದೃಢ

ವಿಜಯಪಥ ಸಮಗ್ರ ಸುದ್ದಿ

ದಾವಣಗೆರೆ: ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ವೈರಸ್ ಸೋಂಕು ಪಾಸಿಟಿವ್ ಪ್ರಕರಣ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಮಾ 24 ರಂದು ಜಿಲ್ಲಾ ಸರ್ವೆಕ್ಷಣಾ ಘಟಕ ಚಿತ್ರದುರ್ಗದಿಂದ ವ್ಯಕ್ತಿಯೊಬ್ಬರು ಚಿಕಾಗೊನಿಂದ ಬಂದಿರುವ ಮಾಹಿತಿಯನ್ನು ದಾವಣಗೆರೆ ಜಿಲ್ಲಾ ಸರ್ವೇಕ್ಷಣಾ ಘಟಕ ನೀಡಿದ್ದು, ಈ ಸೋಂಕಿತ ವ್ಯಕ್ತಿಯು ಚಿತ್ರದುರ್ಗ ತಾಲೂಕಿನ ಭೀಮಸಮುದ್ರ ಗ್ರಾಮದ ಮನೆಯಲ್ಲಿ ಮಾ. 17 ರಿಂದ 23 ರವರೆಗೆ ಪ್ರತ್ಯೇಕ ಅವಲೋಕನದಲ್ಲಿ ಇದ್ದರು ಎಂದು ತಿಳಿಸಿದರು.

ಜಿಲ್ಲಾಡಳಿತದಿಂದ ತಕ್ಷಣದಿಂದ ಜಾರಿಗೆ ಬರುವಂತೆ ತೆಗೆದುಕೊಂಡ ಕ್ರಮ

  • ಈಗಾಗಲೇ ಕೇಂದ್ರ /ರಾಜ್ಯ ಸರ್ಕಾರದ ಆದೇಶದಂತೆ ಏ.14 ರವರೆಗೆ ಲಾಕ್ ಡೌನ್ ಘೋಷಣೆ ಅಗಿರುತ್ತದೆ.
  • ಜಿಲ್ಲಾಡಳಿತದಿಂದ ಲಾಕ್‍ಡೌನ್ ಆದೇಶವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿದೆ.
  • ಈವರೆಗೆ ಜಿಲ್ಲೆಯಲ್ಲಿ ವಿದೇಶ ಪ್ರಯಾಣ ಹಿನ್ನಲೆ ಇರುವ ಎಲ್ಲಾ ವ್ಯಕ್ತಿಗಳನ್ನು ಸಂಪರ್ಕಿಸಿ ರೋಗ ಲಕ್ಷಣ ಇರುವ ವ್ಯಕ್ತಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿರುತ್ತದೆ.
  • ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗದೆ ಈಗಾಗಲೇ ಜಿಲ್ಲಾಡಳಿತದಿಂದ ಹೊರಡಿಸಿರುವ ಆದೇಶ ಮತ್ತು ಸುತ್ತೋಲೆಗಳ ಅನ್ವಯ ಮನೆಗಳಲ್ಲೆ ಇದ್ದು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ವಹಿಸಲು ಸೂಚಿಸಿದೆ ಮತ್ತು ಕೋವಿಡ್-19 ನಿಯಂತ್ರಣ ತರುವಲ್ಲಿ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...