ಹನೂರು : ಮೈಸೂರು ದಕ್ಷಿಣ ವಲಯ ಐಜಿಪಿ ಪ್ರವೀಣ್ ಪವಾರ್ ಮಧುಕರ್ ಮಂಗಳವಾರ ಕುಟುಂಬ ಸಮೇತರಾಗಿ ಮಹದೇಶ್ವರ ಬೆಟ್ಟಕ್ಕೆ ಭೇಟಿ ಮಾದಪ್ಪನಿಗೆ ವಿಶೇಷ ಪೂಜೆ ನೆರವೇರಿಸಿದರು.
ಇದೇ ವೇಳೆ ಮಲೆಮಹದೇಶ್ವರ ಬೆಟ್ಟ ಪ್ರಾಧಿಕಾರದ ಅಧಿಕಾರಿಗಳು ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.
ತಮ್ಮ ಕುಟುಂಬಸ್ಥರ ಜೊತೆ ಆಗಮಿಸಿದ್ದ ಪ್ರವೀಣ್ ಪವಾರ್ ಅವರು ಶ್ರೀ ಕ್ಷೇತ್ರದಲ್ಲಿ ಮಹದೇಶ್ವರನ ದರ್ಶನ ಪಡೆದರು.
ಈ ವೇಳೆ ಚಾಮರಾಜನಗರ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್, ಸಬ್ಇನ್ಸ್ಪೆಕ್ಟರ್ ಉಪಸ್ಥಿತರಿದ್ದರು.
![](https://vijayapatha.in/wp-content/uploads/2024/02/QR-Code-VP-1-1-300x62.png)