NEWSಬೆಂಗಳೂರುರಾಜಕೀಯ

ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರವಹಿಸಿ: ಪ್ರೀತಿ ಗೆಹ್ಲೋಟ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷದವರಿಗೆ ವಿವಿಧ ಮಾಧ್ಯಮಗಳಲ್ಲಿ ಪ್ರಸಾರ ಮಾಡುವ ಜಾಹೀರಾತುಗಳಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಮುಂಜಾಗ್ರತೆ ವಹಿಸುವಂತೆ ಜಿಲ್ಲಾ ಎಂಸಿಎಂಸಿ ನೋಡಲ್ ಅಧಿಕಾರಿ ಪ್ರೀತಿ ಗೆಹ್ಲೋಟ್ ತಿಳಿಸಿದ್ದಾರೆ.

ಇಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಚೇರಿ ಸಭಾಂಗಣದಲ್ಲಿ ಮಾಧ್ಯಮ ಪ್ರಮಾಣೀಕರಣ ಹಾಗೂ ಮೇಲುಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳು ತಮ್ಮ ಪಕ್ಷದ ಮತ್ತು ಅಭ್ಯರ್ಥಿಗಳು ಪರ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಕಟವಾಗುವ ಧ್ವನಿ/ ದೃಶ್ಯ (ಆಡಿಯೋ / ವಿಷುಯಲ್) ಜಾಹೀರಾತುಗಳನ್ನು ಪ್ರಕಟಿಸುವ ಮೊದಲು ಮಾಧ್ಯಮ ಪ್ರಮಾಣೀಕರಣ ಹಾಗೂ ಮೇಲುಸ್ತುವಾರಿ ಸಮಿತಿಯ ಪೂರ್ವ ಪ್ರಮಾಣೀಕರಣ ಹೊಂದಿರಬೇಕು ಎಂದು ತಿಳಿಸಿದರು.

ಯಾವುದೇ ನೋಂದಾಯಿತ ಹಾಗೂ ಮಾನ್ಯತೆ ಪಡೆದ ರಾಜಕೀಯ ಪಕ್ಷ/ ಅಭ್ಯರ್ಥಿಯು ಜಾಹೀರಾತು ಪ್ರಸಾರವಾಗುವ 03 ದಿನಗಳ ಮುನ್ನ ಹಾಗೂ ನೋಂದಾಯಿತ, ಮಾನ್ಯವಲ್ಲದ ರಾಜಕೀಯ ಪಕ್ಷ ಜಾಹೀರಾತಿಗೆ ಪೂರ್ವ ಪ್ರಮಾಣೀಕರಣ ಅರ್ಜಿಯನ್ನು 7 ದಿನಗಳ ಮುಂಚಿತವಾಗಿ ಸಲ್ಲಿಸಬೇಕು ಎಂದರು.

ರಾಜಕೀಯ ಪಕ್ಷಗಳು ಜಾಹೀರಾತು ಪೂರ್ವ ಪ್ರಮಾಣೀಕರಣಕ್ಕಾಗಿ ಜಿಲ್ಲಾ ಎಂ.ಸಿ.ಎಂ.ಸಿ ಸಮಿತಿಗೆ ಅರ್ಜಿ ಸಲ್ಲಿಸಬಹುದು. ಅಲ್ಲದೇ, ಬೆಂಗಳೂರು ನಗರ ಜಿಲ್ಲೆಯಲ್ಲಿರುವ ಒಟ್ಟು 28 ಕ್ಷೇತ್ರಗಳನ್ನು 4 ವಿಭಾಗಗಳಲ್ಲಿ ವಿಂಗಡಿಸಿ ಆಯಾ ವಿಭಾಗಗಳ ವ್ಯಾಪ್ತಿಗೆ ಬರುವ ಕ್ಷೇತ್ರದ ಅಭ್ಯರ್ಥಿ ಅಥವಾ ಪಕ್ಷ ನಿಗದಿತ ವಿಭಾಗದ ಸಹಾಯಕ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಜಾಹೀರಾತು ಪೂರ್ವ ಪ್ರಮಾಣೀಕರಣಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಸಹ ಪ್ರಸಾರವಾಗುವ ರಾಜಕೀಯ ಜಾಹೀರಾತುಗಳಿಗೆ ಪೂರ್ವ ಪ್ರಮಾಣೀಕರಣ ಅಗತ್ಯವಿದ್ದು, ಅದರ ವೆಚ್ಚದ ಲೆಕ್ಕಪತ್ರವನ್ನು ಆಯಾ ಅಭ್ಯರ್ಥಿ ಹಾಗೂ ಪಕ್ಷಗಳು ಸಮರ್ಪಕವಾಗಿ ನಿರ್ವಹಿಸಬೇಕು ಎಂದ ಅವರು ಚುನಾವಣೆ ನಂತರದ ಆಡಿಟ್ ಸಂದರ್ಭದಲ್ಲಿ ಆದನ್ನು ಪ್ರಸ್ತುತ ಪಡಿಸಬೇಕು ಎಂದರು.

ಯಾವುದೇ ಧ್ವನಿ/ ದೃಶ್ಯ ಮಾಧ್ಯಮದ ರಾಜಕೀಯ ಜಾಹೀರಾತು /ಪ್ರಚಾರ ವಿಷಯದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗುವಂತಹ ಅಂಶಗಳನ್ನು ಇರಬಾರದು. ಉಲ್ಲಂಘನೆಯಾದ ಸಂದರ್ಭದಲ್ಲಿ ಸಂಬಂಧಿಸಿದ ಕ್ಷೇತ್ರ ಚುನಾವಣಾಧಿಕಾರಿಗಳು ಅಂತಹ ಅಭ್ಯರ್ಥಿಗೆ ವಿವರಣೆ ಕೇಳುವ ನೋಟಿಸ್ ಜಾರಿ ಮಾಡುತ್ತಾರೆ ಎಂದರು.

ಸುದ್ದಿ ಸ್ವರೂಪದ ಬಗ್ಗೆ ವಿವರಿಸಿದ ಅವರು ಜಾಹೀರಾತಿನ ಪಾವತಿ ವೆಚ್ಚದ ಲೆಕ್ಕ ತಪ್ಪಿಸಲು ರಾಜಕೀಯ ಪಕ್ಷಗಳು ಸುದ್ದಿ ರೂಪದಲ್ಲಿ ಪ್ರಚಾರ ಕೈಗೊಳ್ಳಲು ಪ್ರಯತ್ನಿಸುತ್ತವೆ. ಜಿಲ್ಲಾ ಮಾಧ್ಯಮ ಮೇಲುಸ್ತುವಾರಿ ತಂಡಗಳು ನಿರಂತರ ಎಲ್ಲ ರೀತಿಯ ಮಾಧ್ಯಮ ಪ್ರಸಾರದ ಮೇಲೆ ನಿಗಾ ವಹಿಸುತ್ತಿದ್ದು, ಸಂಶಯಾಸ್ಪದ ಪಾವತಿ ಸುದ್ದಿ ಕಂಡುಬಂದಲ್ಲಿ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ಮಾದರಿ ನೀತಿ ಸಂಹಿತೆ ಅನುಸಾರ, ಪ್ರಚಾರ ಕಾರ್ಯಗಳನ್ನು ನಡೆಸುವ ಮೂಲಕ ಚುನಾವಣೆ ಪ್ರಕ್ರಿಯೆ ಸುಗಮವಾಗಿ ನಡೆಸಲು ರಾಜಕೀಯ ಪಕ್ಷಗಳು ಸಹಕರಿಸಬೇಕು ಎಂದು ಕೋರಿದರು.

ಈ ಸಭೆಯಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರಾದ ಎಸ್. ರಮೇಶ್, ಕಾಂಗ್ರೆಸ್ ಪಕ್ಷದ ಪ್ರಶಾಂತ ಬಿ ಮತ್ತು ಮಹೆಬೂಬ್ ಪಾಷಾ, ಬಿಎಸ್ಪಿ ಪಕ್ಷದ ಅರುಣ ಪ್ರಸಾದ್, ಜಿಲ್ಲಾ ಎಂಸಿಎಂಸಿ ಸದಸ್ಯ ಕಾರ್ಯದರ್ಶಿಗಳಾದ ಪಲ್ಲವಿ ಹೊನ್ನಾಪುರ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು