NEWSಆರೋಗ್ಯ

ಮದ್ಯ ಪ್ರಿಯರಿಗೆ ಚೀಯರ್‌ ಎಂದ ಸರ್ಕಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮದ್ಯಪ್ರಿಯರಿಗೆ ಸರ್ಕಾರ ಮುಕ್ತ ಅವಕಾಶ ನೀಡಿದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವೈನ್‌ಶಾಪ್‌ ಮುಂದೆ ಕುಡುಕರು ಸರತಿ ಸಾಲಿನಲ್ಲಿ ನಿಂತು ಮದ್ಯಖರೀದಿಯಲ್ಲಿ ತೊಡಗಿದ್ದಾರೆ.

ಇನ್ನು ಕೆಲಕಡೆ ನೂಕುನುಗ್ಗಲು ಉಂಟಾಗಿ ಪೊಲೀಸರು ಲಾಠಿಯನ್ನು ಬೀಸಿರುವ ಘಟನೆಯು ನಡೆದಿದೆ. ಬೆಂಗಳೂರಿನ ಆನೇಕಲ್‌ನಲ್ಲಿ ಕೆಲ ಮದ್ಯಪ್ರಿಯರು ಸರತಿ ಸಾಲಿನಲ್ಲಿ ನಿಲ್ಲುವ ಬದಲು ಗುಂಪುಗುಂಪಾಗಿ ಬಂದಿದ್ದರಿಂದ ಪೊಲೀಸರು ಲಾಠಿಗೆ ಕೆಲಸ ಕೊಡಬೇಕಾಯಿತು.

ಒಬ್ಬರಿಗೆ ಒಂದು ಪುಲ್‌ಬಾಟಲ್‌ ಕೊಡುತ್ತಿದ್ದಾರೆ. ಆದರೆ ಕೆಲವರು ಇನ್ನು ಹೆಚ್ಚು ಬೇಕು ಎಂದು ಕೇಳುತ್ತಿದ್ದರೆ. ಇನ್ನು ಕೆಲವರು ಕೋಟ್ರುಬಾಟಲ್‌ ಸಾಕು ನಮ್ಮಲ್ಲಿ ಹಣ ಇಲ್ಲ ಎಂದು ಹೇಳುತ್ತಿದ್ದಾರೆ.

ನಾವು ಕುಡಿಯದಿದ್ದರೆ ಮೈಂಡ್‌ ಬ್ಲಾಕ್‌ ಆಗುತ್ತದೆ. ಇಲ್ಲಂದರೆ ಕೆಲಸ ಮಾಡುವುದಕ್ಕೂಆಗುವುದಿಲ್ಲ. ನಾವು ಬೆಳಗ್ಗೆ ಎದ್ದ ಕೂಡಲೇ ಕುಡಿಯಲೇ ಬೇಕು. ಇದೇ ನಮಗೆ ಕಾಫಿ ಟೀ ಎಂದು ಹೇಳುತ್ತಿದ್ದಾರೆ.

ಒಟ್ಟಾರೆ ಮದ್ಯದಂಗಡಿ ತೆರೆದು 41ದಿನಗಳಿಂದ ನೆಮ್ಮದಿಯಾಗಿದ್ದ ಹಲವು ಕುಟುಂಬಗಳಲ್ಲಿ ಮತ್ತೆ ಗಲಾಟೆ ಗದ್ದಲ ಅಶಾಂತಿ ನೀಡುವುದಕ್ಕೆ ಸರ್ಕಾರ ಉತ್ತೇಜನ ನೀಡಿದಂತ್ತಾಗಿದೆ. ಕುಡುಕರಿರುವ ಶೇ.90ರಷ್ಟು ಕುಟುಂಬಗಳು ಮದ್ಯ ನಿಲ್ಲಿಸಿಬಿಡಿ ಎಂದು ಎಷ್ಟೇ ಹೇಳಿದರು ಕೇಳಿಸಿಕೊಳ್ಳದ ಸರ್ಕಾರ ತನ್ನ ಬೊಕ್ಕಸ ತುಂಬಿಸಿಕೊಳ್ಳಲು ಮುಂದಾಗಿರುವುದು ಬಡವರ ನೆಮ್ಮದಿಗೆ ತಣ್ಣೀರೆರಚಿದಂತೆ ಆಗುತ್ತಿದೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...