NEWSನಮ್ಮಜಿಲ್ಲೆ

ಮದ್ಯ ಮಾರಾಟ ಬೇಡವೇ ಬೇಡ ಎಂದ ರಮೇಶ್ ಜಾರಕಿಹೊಳಿ

ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರುವರೆಗೆ ಮಾರಾಟಕ್ಕೆ ಕಡಿವಾಣ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅನುಮತಿ ನೀಡಬಾರದು ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

ಕೊವೀಡ್ -19 ನಿಯಂತ್ರಣಕ್ಕೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ನಗರದ ಪ್ರವಾಸಿಮಂದಿರದಲ್ಲಿ ಶನಿವಾರ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.

ಸದ್ಯಕ್ಕೆ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿರುವುದರಿಂದ ಯಾವುದೇ ಸಮಸ್ಯೆಗಳು ಕಂಡುಬಂದಿಲ್ಲ. ಆದ್ದರಿಂದ ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರುವರೆಗೆ ಮಾರಾಟ ಆರಂಭಿಸಬಾರದು ಎಂದರು.

ಯಾವುದೇ ಒತ್ತಡಕ್ಕೂ ಮಣಿಯದೇ ಸೂಕ್ತ ವ್ಯವಸ್ಥೆ ಇರುವ ಹೋಟೆಲ್ ಗಳನ್ನು ಮಾತ್ರ ಕ್ವಾರಂಟೈನ್ ಗೆ ಪಡೆದುಕೊಳ್ಳಬೇಕು. ಸಹಕಾರಿ ಬ್ಯಾಂಕುಗಳು ತೆರೆದು ಗ್ರಾಹಕರಿಗೆ ಸೇವೆ ಒದಗಿಸುವ ಬಗ್ಗೆ ಪರಿಶೀಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಪಿಪಿಇ ಕಿಟ್ ಗಳನ್ನು ಕೂಡ ಹೆಚ್ಚುವರಿಯಾಗಿ ಪಡೆದುಕೊಳ್ಳಲು ಸಚಿವರು ಕ್ರಮವಹಿಸಬೇಕು ಎಂದು ಮನವಿ ಮಾಡಿಕೊಂಡರು. ಚೈನಾದಿಂದ ಒಟ್ಟಾರೆ ರಾಜ್ಯಕ್ಕೆ ಒಂದು ಲಕ್ಷ ರ್ಯಾಪಿಡ್ ಟೆಸ್ಟಿಂಗ್ ಕಿಟ್ ಗೂ ಆದೇಶ ನೀಡಲಾಗಿದೆ. ಅದೇ ರೀತಿ ಕೇಂದ್ರ ಸರ್ಕಾರ ಒದಗಿಸಿರುವ ಕಿಟ್ ಗಳನ್ನು ಜಿಲ್ಲೆಗೆ ಪೂರೈಸಲು ಕೋರಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್ ತಿಳಿಸಿದರು.

ಕ್ವಾರಂಟೈನ್ ನಲ್ಲಿ ಇರುವವರಲ್ಲಿ ಸೋಂಕು ದೃಢಪಟ್ಟಿದ್ದು, ಇದು ಸಮುದಾಯದಲ್ಲಿ ಹರಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ವಿವರಿಸಿದರು.

ಪ್ರಾಥಮಿಕ ಸಂಪರ್ಕ ಕ್ಕೆ ಬಂದವರನ್ನು ಹೋಟೆಲ್ ಗಳಲ್ಲಿ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ. ಜಿಲ್ಲೆಯಲ್ಲಿ 43 ಹೋಟೆಲ್ ಗಳನ್ನು ಪಡೆದುಕೊಂಡು ಕ್ವಾರಂಟೈನ್ ಕೇಂದ್ರಗಳಾಗಿ ಪರಿವರ್ತಿಸಲಾಗಿದೆ. ದ್ವಿತೀಯ ಹಂತದ ಸಂಪರ್ಕಕ್ಕೆ ಬಂದವರನ್ನು ಅವರವರ ಮನೆಗಳಲ್ಲಿ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ ಎಂದರು.

ಶಾಸಕರಾದ ಅನಿಲ್ ಬೆನಕೆ, ಅಭಯ್ ಪಾಟೀಲ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್,  ಕೋವಿಡ್-೧೯ ನಿಯಂತ್ರಣಾ ಕ್ರಮಗಳ ಉಸ್ತುವಾರಿಯಾಗಿರುವ ವಾಯವ್ಯ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್, ಪೊಲಿಸ್ ಆಯುಕ್ತರಾದ ಬಿ.ಎಸ್.ಲೋಕೇಶ್ ಕುಮಾರ್, ಪೊಲಿಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ