CrimeNEWSನಮ್ಮರಾಜ್ಯ

ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್‌ ಶರತ್ತು ಬದ್ದ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ‌ ಭಟ್ ಅವರು ಈ ಮಹತ್ವದ ಆದೇಶ ಹೊರಡಿಸಿದ್ದಾರೆ. ಇಬ್ಬರು ಶ್ಯೂರಿಟಿ ಜತೆಗೆ 2 ಲಕ್ಷ ರೂ. ಬಾಂಡ್​ ನೀಡಿದ ಬಳಿಕ ಕೋರ್ಟ್​​ ಜಾಮೀನು ಮಂಜೂರು ಮಾಡಿದೆ.

ಈ ಹಿಂದೆ ನಡೆದ ವಿಚಾರಣೆ ವೇಳೆ ಮುನಿರತ್ನ ಜಾಮೀನು ಅರ್ಜಿಗೆ ಎಸ್‌ಪಿಪಿ ಪ್ರದೀಪ್ ಕುಮಾರ್ ಆಕ್ಷೇಪಣೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಾದ ಮಂಡಿಸಿದ ಮುನಿರತ್ನ ಪರ ವಕೀಲ ಅಶೋಕ್ ಹಾರನಹಳ್ಳಿ, ಇದು 7 ವರ್ಷದ ಹಳೆಯ ಕೇಸ್​​. ಅದರಲ್ಲೂ ಸಾರ್ವಜನಿಕರ ಮುಂದೆ ನಡೆದ ನಿಂದನೆ ಅಲ್ಲ ಎಂದು ವಾದಿಸಿದ್ರು.

ಜನಾಂಗಿಯ ನಿಂದನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದಕ್ಕೆ ಅಟ್ರಾಸಿಟಿ ಕಾಯ್ದೆ ಅನ್ವಯ ಆಗೋದಿಲ್ಲ. ಈ ಸೆಕ್ಷನ್ ಪ್ರಕಾರ ನಿಂದನೆ ಮಾಡುವಾಗ ಇಬ್ಬರಿಗಿಂತ ಹೆಚ್ಚು ಜನ ಇರಬೇಕು. ಗುಂಪಿನಲ್ಲಿ ಜಾತಿನಿಂದನೆ ಮಾಡಿರಬೇಕು ಎಂದು ವಾದ ಮಂಡಿಸಿದರು.

ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ಶರತ್ತು ಬದ್ದ ಜಾಮೀನು ಮಂಜೂರು ಮಾಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು