NEWSನಮ್ಮಜಿಲ್ಲೆ

ಮನೆಯಲ್ಲಿಯೇ ಸುರಕ್ಷಿತವಾಗಿರಿ : ಡಾ.ಚನ್ನವೀರ ಕಣವಿ ಮನವಿ

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಕೊರೊನಾ ವೈರಾಣು ಅತ್ಯಂತ ಪ್ರಬಲವಾಗಿರುವ ಈ ಸಂದರ್ಭದಲ್ಲಿ ಯಾರು ಮನೆ ಬಿಟ್ಟು, ಹೊರ ಬರದೇ ಸುರಕ್ಷಿತವಾಗಿ ಮನೆಯಲ್ಲಿಯೇ ಇರಬೇಕು ಎಂದು ನಾಡೋಜ ಡಾ.ಚನ್ನವೀರ ಕಣವಿ ಸಂದೇಶ ನೀಡಿದ್ದಾರೆ.

ಧಾರವಾಡ ಜಿಲ್ಲೆಯ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಅವರಿಗೆ ನಾವೆಲ್ಲರೂ ಬೆಂಬಲವನ್ನು ನೀಡಬೇಕು. ಬೀದಿ ಬೀದಿಯಲ್ಲಿ ತಿರುಗುವುದಾಗಲಿ, ಮಾರುಕಟ್ಟೆಗೆ ಹೋಗುವುದಾಗಲಿ, ಗುಂಪಾಗಿ ಸೇರುವುದರಿಂದ ಕೊರೊನಾ ವೈರಾಣು ಸೋಂಕು ತೀವ್ರವಾಗಿ ಹರಡುತ್ತದೆ.ಇದರಿಂದ ಜೀವ ಹಾನಿ ಸಂಭವಿಸುತ್ತವೆ. ಕೇಂದ್ರ ಮತ್ತು ರಾಜ್ಯ  ಸರ್ಕಾರಗಳು  ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ಅದಕ್ಕೆ ನಾವೆಲ್ಲರೂ ಬೆಂಬಲ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಏ.14ರವರೆಗೆ ಮದ್ಯ ಮಾರಾಟ ನಿಷೇಧ  

ಕೊರೊನಾ ವೈರಸ್ ಸೋಂಕು ಹರಡದಂತೆ ಸಾರ್ವಜನಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಈಗಾಗಲೇ ಜಾರಿಯಲ್ಲಿರುವ ಮದ್ಯಪಾನ, ಮದ್ಯ ಮಾರಾಟ ಹಾಗೂ ಮದ್ಯಸಾಗಾಣಿಕೆಯನ್ನು ನಿಷೇಧವನ್ನು ಎಪ್ರೀಲ್ 14ರ ಮಧ್ಯರಾತ್ರಿ 12 ಗಂಟೆಯವರೆಗೆ ಮುಂದುವರೆಸಿ  ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.

ಆದೇಶ ಉಲ್ಲಂಘಿಸುವವರ ವಿರುದ್ಧ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21(2)ರನ್ವಯ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ ಸಾರಿಗೆ ನೌಕರರ ವೇತನದಲ್ಲಿ ಹಣ ಕಟ್‌ ಮಾಡಿ ಎಲ್‌ಐಸಿ ಪಾಲಿಸಿಗೆ ಪಾವತಿಸದ ಬಗ್ಗೆ ದೂರು ಕೊಟ್ಟರೆ ಅಮಾನತು: ಸಚಿವ ರಾಮಲಿಂಗ... BMTC: ಚಾಲಕ ಕಂ. ನಿರ್ವಾಹಕರು ಆಗಸ್ಟ್‌ 14ರೊಳಗೆ ಸಂಪೂರ್ಣ ನಿರ್ವಾಹಕರಾಗಿ ಬದಲಾಗಬೇಕು: ಸಿಟಿಎಂ ಆದೇಶ