NEWSನಮ್ಮರಾಜ್ಯರಾಜಕೀಯ

ಮಲೈಮಹದೇಶ್ವರ ಬೆಟ್ಟಕ್ಕೆ ಹವಾನಿಯಂತ್ರಿತ ಬಸ್ ಸೌಲಭ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಲೈಮಹದೇಶ್ವರ ಬೆಟ್ಟಕ್ಕೆ ವೋಲ್ವೋ ಬಸ್ ಬದಲಾಗಿ ಇತರೆ ಮಾದರಿಯ ಹವನಿಯಂತ್ರಿತ ಬಸ್ ಸೌಲಭ್ಯ ಕಲ್ಪಿಸಲು ಕ್ರಮಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸಂಗಪ್ಪ ಸವದಿ ತಿಳಿಸಿದರು.

ವಿಧಾನಪರಿಷತ್ತಿನಲ್ಲಿ ನಡೆದ ಪ್ರಶ್ನೋತ್ತರ ವೇಳೆ ಮರೀತಿಬ್ಬೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶ್ರೀ ಮಲೈಮಹದೇಶ್ವರ ಬೆಟ್ಟದ ರಸ್ತೆಯು ತಿರುವುಗಳನ್ನು ಹೊಂದಿರುವ ಕಡಿದಾದ ರಸ್ತೆಯಾಗಿರುವುದರಿಂದ ಸದರಿ ರಸ್ತೆಗಳಲ್ಲಿ ಬೆಂಗಳೂರು ಮತ್ತು ಮೈಸೂರಿನಿಂದ ಹವಾನಿಯಂತ್ರಿತ ವೋಲ್ವೋ (ಐರಾವತ) ಬಸ್‍ಗಳ ಕಾರ್ಯಾಚರಣೆ ಮಾಡುವುದು ಕಷ್ಟಸಾಧ್ಯವಾಗಿರುವುದರಿಂದ ಕೆ.ಎಸ್.ಆರ್.ಟಿ.ಸಿಯಿಂದ ಹವಾನಿಯಂತ್ರಿತ ವೋಲ್ವೋ ಬಸ್ (ಐರಾವತ) ಬಸ್‍ಗಳ ಸೌಲಭ್ಯ ಕಲ್ಪಿಸಿಲ್ಲ ಎಂದರು.

ಪ್ರತಿನಿತ್ಯ ಬೆಂಗಳೂರಿನಿಂದ   ಮಲೈಮಹದೇಶ್ವರ ಬೆಟ್ಟಕ್ಕೆ 15 ವೇಗದೂತ ಸಾರಿಗೆ  ಕಾರ್ಯಾಚರಣೆಯಲ್ಲಿದೆ. ಮೈಸೂರಿನಿಂದ 20 ವೇಗದೂತ ಬಸ್‍ಗಳು ಕಾರ್ಯಾಚರಣೆಯಲ್ಲಿವೆ. ಮೈಸೂರು, ಬೆಂಗಳೂರು, ಚಾಮರಾಜನಗರ, ರಾಮನಗರ, ಮಂಡ್ಯ, ಕೋಲಾರ, ಶಿವಮೊಗ್ಗ ಮುಂತಾದ ಸ್ಥಳಗಳಿಗೆ ಒಟ್ಟಾರೆ 73 ವೇಗದೂತ ಸಾರಿಗೆಗಳನ್ನು ಪ್ರತಿನಿತ್ಯ ಕಾರ್ಯಚರಣೆ ಮಾಡಲಾಗುತಿದೆ. ಬೆಟ್ಟದಲ್ಲಿ ನಡೆಯುವ ವಿವಿಧ ಜಾತ್ರೆಗಳು, ಅಮಾಸ್ಯೆ, ಹುಣ್ಣಿಮೆ ಮುಂತಾದ ದಿನಗಳಲ್ಲಿ ಜನದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆಗಳನ್ನು ಆಚರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ರಸ್ತೆಗಳನ್ನು ಪರಿಶೀಲಿಸಿ ವೋಲ್ವೋ ಬಸ್‍ಗಳ ಬದಲಾಗಿ ಬೇರೆ ಮಾದರಿಯ ಹವಾನಿಯಂತ್ರಿತ ಬಸ್ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಸದನದಲ್ಲಿ ತಿಳಿಸಿದರು.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...