ಮೈಸೂರು: ಅನಧಿಕೃತವಾಗಿ ಮೇಟಗಳ್ಳಿ ಪೊಲೀಸ್ ಠಾಣೆಯ ಎದುರು ನಿರ್ಮಿಸಿದ್ದ ಧಾರ್ಮಿಕ ಕಟ್ಟಡವನ್ನು ಶುಕ್ರವಾರ ತೆರವುಗೊಳಿಸಲಾಯಿತು.
ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಮೈಸೂರು ಮಹಾನಗರ ಪಾಲಿಕೆ ಕಾರ್ಯಾಚರಣೆ ಆರಂಭಿಸಿದೆ.
ಈ ಹಿನ್ನೆಲೆಯಲ್ಲಿ ನಗರದ ಮೇಟಗಳ್ಳಿ ಪೊಲೀಸ್ ಠಾಣೆ ಎದುರು ಅನಧಿಕೃತ ಧಾರ್ಮಿಕ ಕಟ್ಟಡವನ್ನು ಜೆಸಿಬಿ ಮೂಲಕ ನೆಲಸಮಗೊಳಿಸಲಾಯಿತು. ಇದಿಷ್ಟೇ ಅಲ್ಲದೆ ಎಲ್ಲಿ ಅನಧಿಕೃತ ಕಟ್ಟಡಗಳು ನಿರ್ಮಾಣಗೊಂಡಿವೆಯೋ ಅಲ್ಲೆಲ್ಲ ತೆರವು ಗೊಳಿಸುವ ಕಾರ್ಯಾಚರಣೆ ನಿರಂತರವಾಗಿ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
![](https://vijayapatha.in/wp-content/uploads/2024/02/QR-Code-VP-1-1-300x62.png)