NEWSಕೃಷಿದೇಶ-ವಿದೇಶನಮ್ಮಜಿಲ್ಲೆ

ಮೈಸೂರು: ದೆಹಲಿ ರೈತ ಹೋರಾಟ ಬೆಂಬಲಿಸಿ ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ರೈತರ ಕೃಷಿ‌ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿಯಾಗಬೇಕೆಂದು ಪಂಜಾಬ್ ಹರಿಯಾಣ ಕನೋರಿ ಬಾರ್ಡರ್‌ನಲ್ಲಿ 29 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ ರಾಜಕೀಯೆತರ ಸಂಘಟನೆಯ ರಾಷ್ಟ್ರೀಯ ರೈತ ಮುಖಂಡ ಜಗಜಿತ್ ಸಿಂಗ್ ದಲೆವಾಲ ಹೋರಾಟವನ್ನು ಬೆಂಬಲಿಸಿ ಬುಧವಾರ ಮೈಸೂರಿನ ನ್ಯಾಯಾಲಯದ ಮುಂಭಾಗದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯ ಮುಂದೆ ರೈತರು ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ ನಡೆಸಿದರು.

ದೇಶಾದ್ಯಂತ ಮೇಣದಬತ್ತಿ ಉರಿಸಿ ಪ್ರತಿಭಟನೆ ನಡೆಸಬೇಕೆಂದು ರೈತರಿಗೆ ಕರೆ ನೀಡಲಾಗಿತ್ತು. ಬೇಕೇ ಬೇಕು ನ್ಯಾಯ ಬೇಕು. ರೈತರ ಹೋರಾಟಕ್ಕೆ ಜಯವಾಗಲಿ. ದಲೆವಾಲಾ ಪ್ರಾಣ ಉಳಿಸಬೇಕು ಎಂದು ಘೋಷಣೆ ಕೂಗಿದರು.

ಈ ವೇಳೆ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೆತರ) ದಕ್ಷಿಣ ಭಾರತ ಸಂಚಾಲಕ ಕುರುಬೂರ್ ಶಾಂತಕುಮಾರ್ ಮಾತನಾಡಿ, ನಿನ್ನೆ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರು ಸರ್ಕಾರದ ಪರ ವಕೀಲರಿಗೆ ಎಚ್ಚರಿಕೆ ನೀಡಿ ದಲೈವಾಲಾ ಅವರನ್ನು ಕೂಡಲೇ ಆಸ್ಪತ್ರೆಗೆ ವರ್ಗಾಯಿಸಬೇಕು ತುರ್ತು ಹೆಚ್ಚಿನ ಚಿಕಿತ್ಸೆ ನೀಡಬೇಕು ಎಂದು ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹಾಗೂ ಪೊಲೀಸ್ ಮಹಾ ನಿರ್ದೇಶಕರಿಗೆ ಕಠಿಣ ಸೂಚನೆ ನೀಡಿದ್ದಾರೆ ಎಂದರು.

ಇನ್ನು ರೈತರಿಂದ ಆಯ್ಕೆಯಾದ ಜನಪ್ರತಿನಿಧಿ ಸರ್ಕಾರಕೆ ಈ ರೈತರ ನೋವು ಯಾಕೆ ಅರ್ಥವಾಗುತ್ತಿಲ್ಲ ಎಂಬುದೇ ಅನುಮಾನ ಮೂಡಿಸುತ್ತಿದೆ. ಇಂದು ಕ್ರಿಸ್ಮಸ್ ದಿನ ಯೇಸುವಾದರೂ ನಮ್ಮ ಪ್ರಧಾನಿಗೆ ಒಳ್ಳೆಯ ಬುದ್ಧಿ ನೀಡಿ ರೈತರ ಸಮಸ್ಯೆ ಬಗೆಹರಿಸುವಂತಾಗಲಿ ಎಂದು ಪ್ರಾರ್ಥಿಸಿದರು.

ಹಳ್ಳಿ ಹಳ್ಳಿಗಳಲ್ಲಿ ರೈತರು ಇನ್ನು ಎರಡು ದಿನಗಳು ಮನೆ, ಗ್ರಾಮ ಠಾಣಾ ಮುಂದೆ ಸಂಜೆ 7:ಗಂಟೆಗೆ ದೀಪ ಉರಿಸಿ ದಲೈವಾಲಾ ಹೋರಾಟ ಬೆಂಬಲಿಸಬೇಕು. ಸದ್ಯದಲ್ಲಿಯೇ ರಾಜ್ಯದ ರೈತರ ತಂಡ ದೆಹಲಿಗೆ ಹೋಗಿ ಹೋರಾಟವನ್ನು ಬೆಂಬಲಿಸಲಿದೆ ಎಂದರು.

ಈ ವೇಳೆ ನೀಲಕಂಠಪ್ಪ, ಪೈಲ್ವಾನ್ ವೆಂಕಟೇಶ, ಧರಣಿಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ಮಾರ್ಬಳ್ಳಿ ನೀಲಕಂಟಪ್ಪ, ಕುರುಬೂರು ಪ್ರದೀಪ್, ಬನ್ನೂರು ಸೂರಿ, ತಾಲೂಕು ಅಧ್ಯಕ್ಷ ಲಕ್ಷ್ಮೀಪುರ ವೆಂಕಟೇಶ್,ವರಕೂಡು ನಾಗೇಶ್, ವಾಜಮಂಗಲ ಮಾದೇವ,ದೊಡ್ಡಕಾಟೂರ್ ಮಹದೇವಸ್ವಾಮಿ, ಚುಂಚರಾಯನಹುಂಡಿ, ಗಿರೀಶ್, ಮಹೇಶ್, ಕೆರಗಳ್ಳಿ ಸತೀಶ್, ನಾಗರಾಜ್ ಇನ್ನು ಮುಂತಾದವರು ಇದ್ದರು.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ