CrimeNEWSಕೃಷಿನಮ್ಮರಾಜ್ಯ

ಮೈಸೂರು ಮುಡಾ ಹಗರಣ – ಹೈಕೋರ್ಟ್‌ ನ್ಯಾಯಾಧೀಶರಿಂದ ತನಿಖೆಗೆ ಒತ್ತಾಯಿಸಿ ರಾಜ್ಯಪಾಲರ ಭೇಟಿ ಮಾಡಿದ ರೈತ ಮುಖಂಡರ ನಿಯೋಗ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೈಸೂರಿನ ನಗರ ಅಭಿವೃದ್ಧಿ ಪ್ರಾಧಿಕಾರದ ಹಗರಣ ಕುರಿತು ಉಚ್ಚ ನ್ಯಾಯಾಲಯದ ನ್ಯಾಯಾಧೀಶರಿಂದ ತನಿಖೆ ನಡೆಸಲು ಒತ್ತಾಯಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಒತ್ತಾಯಿಸಿ ರೈತ ಮುಖಂಡರು ಮನವಿ ಸಲ್ಲಿಸಿದ್ದಾರೆ.

ಇಂದು ರಾಜಭವನಕ್ಕೆ ಬಂದ ರೈತ ಮುಖಂಡರನ್ನೊಳಗಗೊಂಡ ನಿಯೋಗ, ಮೈಸೂರಿನ ನಗರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಅವ್ಯವಾರದ ಹಗರಣ ವಾಗಿದ್ದು ಪ್ರಭಾವಿ ರಾಜಕೀಯ ಪಕ್ಷಗಳ ಪ್ರಭಾವಿ ಮುಖಂಡರು ಭಾಗಿದಾರರಾಗಿರುವ ಕಾರಣ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಇನ್ನು ಹಗರಣದಲ್ಲಿ ಪಾಲುದಾರರಾಗಿರುವ ತಪ್ಪಿತಸ್ಥರನ್ನು ಜೀವಾವಧಿ ಶಿಕ್ಷೆಗೆ ಗುರಿಪಡಿಸುವ ಕಾಯ್ದೆ ಅಡಿಯಲ್ಲಿ ಶಿಕ್ಷಿಸಬೇಕು ಎಂದು ರಾಜ್ಯಪಾಲರನ್ನು ಒತ್ತಾಯಿಸಿದರು. ಈ ವೇಳೆ ಹತ್ತು ನಿಮಿಷಗಳ ಕಾಲ ವಿವರವಾಗಿ ಎಲ್ಲ ಮಾಹಿತಿಯನ್ನು ನಿಯೋಗದಿಂದ ರಾಜ್ಯಪಾಲರು ಪಡೆದುಕೊಂಡರು.

ಒಂದು ವರ್ಷ ಹಿಂದೆ ಮುಡಾ ಕಚೇರಿಯಲ್ಲಿನ ದಾಖಲಾತಿಗಳು ಹಾಗೂ ಕಡತಗಳು ಕಳುವು ಆಗಿದ್ದು ಈ ಬಗ್ಗೆ ರೈತ ಸಂಘಟನೆಯಿಂದ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತನಿಖೆ ನಡೆಸುವಂತೆ ಒತ್ತಾಯಿಸಲಾಗಿತ್ತು. ಅವತ್ತಿನ ದಿನ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದರೆ ಸರ್ಕಾರದ ಸಾವಿರಾರು ಕೋಟಿ ರೂಪಾಯಿ ಆಸ್ತಿ ಪ್ರಭಾವಿಗಳಿಂದ ಲಪಟಾಯಿಸುವುದು ತಪ್ಪುತಿತ್ತು.

ಇಂದು ಬಹುತೇಕ ರಿಯಲ್ ಎಸ್ಟೇಟ್ ವ್ಯವಹಾರ ಮಾಡುವ ಜನರೇ ಪ್ರತಿನಿಧಿಗಳಾಗಿರುವ ಕಾರಣ ಈ ಕಚೇರಿಯನ್ನು ದುರುಪಯೋಗಪಡಿಸಿಕೊಂಡು ರೈತರಿಗೆ ಸಾರ್ವಜನಿಕರಿಗೆ ಬಡವರಿಗೆ ವ್ಯವಸ್ಥಿತ ವಂಚನೆ ಮಾಡುತ್ತಿದ್ದಾರೆ. ರೈತರ ಜಮೀನು ವಶಪಡಿಸಿಕೊಳ್ಳುವಾಗ ವಾಮಮಾರ್ಗಗಳನ್ನು ಬಳಸಿ ರೈತರಿಗೆ ಕಡಿಮೆ ಹಣ ನೀಡಿ ವಂಚಿಸಿ ರಿಯಲ್ ಎಸ್ಟೇಟ್ ದಲ್ಲಾಳಿಗಳು ಮೋಸ ಮಾಡುತ್ತಿದ್ದಾರೆ.

ತಮ್ಮ ಹೆಸರಿನಲ್ಲಿ ಕೃಷಿ ಭೂಮಿ ನೀಡದೇ ಇರುವ ಕೆಲವು ದಲ್ಲಾಳಿಗಳು ನಾವು ಭೂಮಿ ನೀಡಿದ್ದೇವೆ ಎಂದು ಸುಳ್ಳು ದಾಖಲೆ ನೀಡಿ ನಿವೇಶನ ಪಡೆದಿದ್ದಾರೆ. ಹಾಲಿ, ಮಾಜಿ ಜನಪ್ರತಿನಿಧಿಗಳು ಕೂಡ ಹಲವಾರು ನಿವೇಶನಗಳನ್ನು ಪಡೆದು ಸಾಮಾನ್ಯರಿಗೆ, ಬಡವರಿಗೆ ಸಿಗಬೇಕಾದ ಸೌಲಭ್ಯವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ಈ ಹಗರಣದಲ್ಲಿ ಆಡಳಿತ -ವಿಪಕ್ಷಗಳ ಪ್ರಭಾವಿ ಮುಖಂಡರೇ ಭಾಗಿಗಳಾಗಿದ್ದಾರೆ, ಆದ್ದರಿಂದ ನಿಷ್ಪಕ್ಷಪಾತ ತನಿಖೆ ನಡೆದು ಸತ್ಯ ಎತ್ತಿ ಹಿಡಿಯಲು ಉಚ್ಚ ನ್ಯಾಯಾಲಯದ ನ್ಯಾಯಾಧೀಶರಿಂದ ತನಿಖೆ ಮಾಡಿಸುವುದು ಸೂಕ್ತವಾಗಿದೆ ಎಂದು ರಾಜ್ಯಪಾಲರನ್ನು ಒತ್ತಾಯಿಸಿದ್ದೇವೆ ಎಂದು ಕುರುಬೂರು ಶಾಂತಕುಮಾರ್ ರಾಜಭವನದಿಂದ ಹೊರಗೆ ಬಂದಾಗ ಸುದ್ದಿಗಾರರಿಗೆ ತಿಳಿಸಿದರು.

ನಿಯೋಗದಲ್ಲಿ ಕನ್ನಡ ಚಳುವಳಿ ಸಂಘದ ರಾಜ್ಯಾಧ್ಯಕ್ಷ ಗುರುದೇವ್ ನಾರಾಯಣ್, ವಕೀಲರಾದ ಎಲ್.ರವಿಕುಮಾರ್, ರೈತ ಮುಖಂಡರಾದ ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ಮಾರ್ಬಳ್ಳಿ ನೀಲಕಂಠಪ್ಪ, ಉಡಿಗಾಲ ರೇವಣ್ಣ, ತುಮಕೂರು ಶಿವಕುಮಾರ್, ಬಾಗೇಪಲ್ಲಿ ಗೋವಿಂದರೆಡ್ಡಿ, ಸುಂದ್ರಪ್ಪ ಇತರರು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು