ಮೈಸೂರು: ಜಿಲ್ಲೆಯಲ್ಲಿ ಒಂದೂವರೆ ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಮದ್ಯ, 2.20 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ರಾಜೇಂದ್ರ ಅವರು, ಚುನಾವಣೆ ಅಕ್ರಮ ತಡೆಯಲು ಈಗಾಗಲೇ ಚುನಾವಣಾ ಆಯೋಗದ ಸಿಬ್ಬಂದಿಗಳು ಹದ್ದಿನ ಕಣ್ಣಿಟ್ಟಿದ್ದಾರೆ. ಈಗಾಗಲೇ ರಮ್ಮನಹಳ್ಳಿ ಮತ್ತು ತಿ.ನರಸಿಪುರ ಚೆಕ್ ಪೋಸ್ಟ್ಗಳಲ್ಲಿ 80 ಲಕ್ಷ ರೂ.ಗಳಿಗೂ ಹೆಚ್ಚು ಹಣ ಸೀಜ್ ಮಾಡಲಾಗಿದೆ ಎಂದು ವಿವರಿಸಿದರು.
ಇನ್ನು ಸರ್ಕಾರಿ ಬಸ್ಗಳಲ್ಲೂ ಹಣ ಸಾಗಾಟ ಮಾಡಲಾಗುತ್ತಿದೆ. ಇದರ ಬಗ್ಗೆನೂ ಕ್ರಮ ವಹಿಸಲಾಗುತ್ತಿದೆ. ಜಿಲ್ಲೆಯಲ್ಲಿ ಈವರೆಗೂ ಒಂದೂವರೆ ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಮದ್ಯ ವಶಕ್ಕೆ ಪಡೆಯಲಾಗಿದೆ ಎಂದರು.
ಅಲ್ಲದೆ 2.20 ಕೋಟಿ ರೂ. ಬೆಲೆ ಬಾಳುವ ವಸ್ತುಗಳನ್ನು ಕೂಡ ವಶ ಪಡಿಸಿಕೊಳ್ಳಲಾಗಿದೆ. ಜಿಲ್ಲೆಯ 50 ಚೆಕ್ ಪೋಸ್ಟ್ಗಳಲ್ಲೂ ಸಿಸಿಟಿವಿ ಕ್ಯಾಮೆರಾದ ಕಣ್ಗಾವಲು ಇರಿಸಲಾಗಿದೆ ಎಂದು ತಿಳಿಸಿದರು.
ನಾಮಪತ್ರ ಸಲ್ಲಿಸಿದ ಬಳಿಕ ಹೆಚ್ಚಾಗಬಹುದಾದ ಚುನಾವಣಾ ಅಕ್ರಮ ತಡೆಯಲು ಫ್ಲೈಯಿಂಗ್ ಸ್ಕ್ವಾಡ್ಗಳಿಗೆ ಹೆಚ್ಚಿನ ತರಬೇತಿ ನೀಡುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಹೇಳಿದರು.